AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ನ್ಯಾಯ್ ಯಾತ್ರೆ: ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಸಭೆಗೆ ಅನುಮತಿ ಇಲ್ಲ

Bharat Jodo Nyay Yatra: ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ದಿನಕ್ಕೊಂದು ಕಂಟಕ ಉಂಟಾಗಿದೆ. ಅಸ್ಸಾಂನಲ್ಲಿ ಈ ಯಾತ್ರೆಯನ್ನು ಯಶಸ್ವಿಯಾಗಿ ಮುಂದುವರಿಸಲು ಸಾಧ್ಯವಾಗಿಲ್ಲ. ಇದೀಗ ಅಸ್ಸಾಂನಿಂದ ಪಶ್ಚಿಮ ಬಂಗಾಳಕ್ಕೆ ನ್ಯಾಯ್ ಯಾತ್ರೆ ಬಂದಿದೆ. ಇದೀಗ ಅಲ್ಲಿಯೂ ಸಮಸ್ಯೆ ಎದುರಾಗಿದೆ. ಯಾತ್ರೆಯ ಎರಡನೇ ದಿನ ನಡೆಸಬೇಕಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಬೇಕಾಗಿದೆ. ಈ ಸಭಗೆ ಅಲ್ಲಿನ ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಕಾಂಗ್ರೆಸ್​​ ಆರೋಪಿಸಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ: ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಸಭೆಗೆ ಅನುಮತಿ ಇಲ್ಲ
ಅಕ್ಷಯ್​ ಪಲ್ಲಮಜಲು​​
|

Updated on:Jan 26, 2024 | 1:52 PM

Share

ದೆಹಲಿ, ಜ.26: ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ದಿನಕ್ಕೊಂದು ಕಂಟಕ ಉಂಟಾಗಿದೆ. ಅಸ್ಸಾಂನಲ್ಲಿ ಈ ಯಾತ್ರೆಯನ್ನು ಯಶಸ್ವಿಯಾಗಿ ಮುಂದುವರಿಸಲು ಸಾಧ್ಯವಾಗಿಲ್ಲ. ಇದೀಗ ಅಸ್ಸಾಂನಿಂದ ಪಶ್ಚಿಮ ಬಂಗಾಳಕ್ಕೆ ನ್ಯಾಯ್ ಯಾತ್ರೆ ಬಂದಿದೆ. ಇದೀಗ ಅಲ್ಲಿಯೂ ಸಮಸ್ಯೆ ಎದುರಾಗಿದೆ. ಯಾತ್ರೆಯ ಎರಡನೇ ದಿನ ನಡೆಸಬೇಕಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಬೇಕಾಗಿದೆ. ಈ ಸಭೆಗೆ ಅಲ್ಲಿನ ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಕಾಂಗ್ರೆಸ್​​ ಆರೋಪಿಸಿದೆ. ಸಿಲಿಗುರಿಯಲ್ಲಿ ರಾಹುಲ್​​ ಗಾಂಧಿ ಅವರು ಎರಡು ಸಭೆಗಳನ್ನು ನಡೆಸಬೇಕಿತ್ತು. ಆದರೆ ಪಶ್ಚಿಮ ಬಂಗಾಳ ಪೊಲೀಸರು, ಪೊಲೀಸ್ ಪರೀಕ್ಷೆ ನಡೆಯುತ್ತಿದೆ, ಆ ಕಾರಣಕ್ಕೆ ಸಭೆಗೆ ಅವಕಾಶವಿಲ್ಲ ಎಂದಿದ್ದಾರೆ. ಇದರಿಂದ ಸಭೆ ರದ್ದಾಗಿದೆ ಎಂದು ಕಾಂಗ್ರೆಸ್​​​ ನಾಯಕ ಅಧೀರ್ ಚೌಧರಿ ಹೇಳಿದ್ದಾರೆ.

ಸಭೆ ರದ್ದಾಗಿದ್ದರು, ಯಾತ್ರೆ ಮಾತ್ರ ಈಗಾಗಲೇ ನಿಗದಿ ಮಾಡಿರುವ ಮಾರ್ಗದಲ್ಲಿಯೇ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್​​ನ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅಸ್ಸಾಂನಲ್ಲೂ ಇಂತಹ ಸಮಸ್ಯೆಗಳು ಎದುರಾಗಿತ್ತು. ಅಲ್ಲಿ ಕಾನೂನು ಸುವ್ಯವಸ್ಥೆಯ ಎಂಬ ಕಾರಣವನ್ನು ಹೇಳಿ,  ರಾಹುಲ್​​ ಗಾಂಧಿ ಅವರನ್ನು ಯಾತ್ರೆಯಲ್ಲಿ ಭಾಗವಹಿಸಲು ತಡೆ ನೀಡಲಾಗಿತ್ತು ಎಂದು ಕಾಂಗ್ರೆಸ್​​ ಹೇಳಿದೆ.

ಇನ್ನು ಪ್ರಾಂತ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ಮತ್ತು ಇತರ ಕಾಂಗ್ರೆಸ್ ಮುಖಂಡರು ಗುರುವಾರ ಸಂಜೆ ಪೊಲೀಸರ ಅನುಮತಿಯಿಲ್ಲದೆ ಸುದೀರ್ಘ ಸಭೆ ನಡೆಸಿದರು. ಆದರೆ ಈ ಸಭೆಯನ್ನು ಪೊಲೀಸರು ತಡೆದಿದ್ದಾರೆ. ನಮಗೆ ಒಂದು ಸಭೆಯನ್ನು ನಡೆಸಲು ಅವಕಾಶ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಲಾಗಿತ್ತು ಎಂದು ಅಧೀರ್ ಚೌಧರಿ ಹೇಳಿದ್ದಾರೆ. ಇಷ್ಟೇಲ್ಲ ಘಟನೆ ನಡೆದರು, ಕಾಂಗ್ರೆಸ್​​ ನಾಯಕರಿಂದ ಮಮತಾ ಬ್ಯಾನರ್ಜಿ ವಿರುದ್ಧ ಯಾವುದೇ ಮಾತುಗಳು ಕೇಳಿ ಬಂದಿಲ್ಲ.

ಇತ್ತೀಚೆಗಷ್ಟೇ ಇಂಡಿಯಾ ಒಕ್ಕೂಟದಿಂದ ಅಂತ ಕಾಯ್ದುಕೊಳ್ಳುತ್ತಿರುವ ಮಮತಾ ಬ್ಯಾನರ್ಜಿ ಕೂಡ ಈ ಯಾತ್ರೆಯಲ್ಲಿ ಭಾಗವಹಿಸಿಲ್ಲ, ಹಾಗೂ ಯಾತ್ರೆಯಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ ಎಂಬುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟ ಅನ್ಯಾಯದ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತದೆ: ಬಂಗಾಳದಲ್ಲಿ ರಾಹುಲ್ ಗಾಂಧಿ 

ಇನ್ನು ಜ.27ರಿಂದ ನ್ಯಾಯ ಯಾತ್ರೆ ದೆಹಲಿಯಿಂದ ಆರಂಭವಾಗಲಿದೆ. ಈ ಯಾತ್ರೆಯಲ್ಲೂ ರಾಹುಲ್​​​ ಗಾಂಧಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಗುಲಾಂ ಮಿರ್ ಹೇಳಿದ್ದಾರೆ. ಜ.28ರಂದು ಫಲಕಟ್ಟಾದಿಂದ ಮೆರವಣಿಗೆ ಹೊರಟು ನಿಗದಿತ ಮಾರ್ಗದಲ್ಲಿ ಸಾಗಲಿದೆ. ಅಲ್ಲಿಂದ ಜಲ್ಪೈಗುರಿಯಿಂದ ಸಿಲಿಗುರಿಗೆ ಬರಲಿದೆ. ಅಲ್ಲಿಂದ ಜ. 29ರಂದು ಬಿಹಾರದಿಂದ ಇಸ್ಲಾಂಪುರ ಮಾರ್ಗವಾಗಿ, ಜನವರಿ 31ರಂದು ಮತ್ತೆ ಬಂಗಾಳಕ್ಕೆ ಬರಲಿದೆ. ಮಾಲ್ದಾ ಮತ್ತು ಮುರ್ಷಿದಾಬಾದ್‌ನಲ್ಲಿ ಎರಡು ದಿನಗಳ ಕಾಲ ಮೆರವಣಿಗೆ ಮುಂದುವರಿಯಲಿದೆ. ನಂತರ ರಾಹುಲ್ ಗಾಂಧಿ ಜಾರ್ಖಂಡ್ ಹೋಗಲಿದ್ದಾರೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:09 pm, Fri, 26 January 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ