Bharat Jodo Nyay Yatra: ಬಿಹಾರದಲ್ಲಿ ರಾಹುಲ್ ಗಾಂಧಿ ಕಾರಿಗೆ ಕಲ್ಲು ತೂರಾಟ, ಕಾರಿನ ಹಿಂಬದಿಯ ಗಾಜು ಜಖಂ

ಬಿಹಾರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ನಡೆಯುತ್ತಿದೆ. ಇದರ ಮಧ್ಯೆ ರಾಹುಲ್​​ ಗಾಂಧಿ ಅವರು ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಇನ್ನು ರಾಹುಲ್​​​​ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಬಿಹಾರ ತಲುಪಿದೆ. ಇಂದು ಬೆಳಿಗ್ಗೆ ರಾಹುಲ್​​​​ ಬಿಹಾರ ಜಿಲ್ಲೆಯಲ್ಲಿ ರೋಡ್ ಶೋ ನಡೆಸಿದ್ದಾರೆ.

Bharat Jodo Nyay Yatra: ಬಿಹಾರದಲ್ಲಿ ರಾಹುಲ್ ಗಾಂಧಿ ಕಾರಿಗೆ ಕಲ್ಲು ತೂರಾಟ, ಕಾರಿನ ಹಿಂಬದಿಯ ಗಾಜು ಜಖಂ
ರಾಹುಲ್ ಗಾಂಧಿImage Credit source: Hindustan Times
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 31, 2024 | 2:40 PM

ಪಟ್ನಾ, ಜ.31: ಬಿಹಾರದಲ್ಲಿ ಭಾರೀ ಬಿರುಸಿನಲ್ಲಿ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ನಡೆಯುತ್ತಿದೆ. ಇದರ ಮಧ್ಯೆ ಒಂದು ಅಹಿತಕರ ಘಟನೆ ನಡೆದಿದೆ. ರಾಹುಲ್​​ ಗಾಂಧಿ ಅವರು ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಕಾಂಗ್ರೆಸ್​​​ ನಾಯಕ ಅಧೀರ್ ರಂಜನ್ ಚೌಧರಿ ಅವರು ಇಂದು (ಜ.31) ಹೇಳಿದ್ದಾರೆ.

ಬಂಗಾಳ – ಬಿಹಾರ ಗಡಿಯಲ್ಲಿ ಬಳಿ ಈ ಘಟನೆ ನಡೆದಿದೆ. ಯಾರೋ ರಾಹುಲ್​​​ ಗಾಂಧಿ ಅವರ ಕಾರಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಕಾರಿನ ಹಿಂಬದಿಯ ಗಾಜು ಜಖಂಗೊಂಡಿದೆ ಎಂದು ಕಾಂಗ್ರೆಸ್​​​​ ಹೇಳಿದೆ. ಇನ್ನು ರಾಹುಲ್​​​​ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಬಿಹಾರ ತಲುಪಿದೆ. ಇಂದು ಬೆಳಿಗ್ಗೆ ರಾಹುಲ್​​​​ ಬಿಹಾರ ಜಿಲ್ಲೆಯಲ್ಲಿ ರೋಡ್ ಶೋ ನಡೆಸಿದ್ದಾರೆ.

ಮಧ್ಯಾಹ್ನದ ಹೊತ್ತಿಗೆ ಮಾಲ್ಡಾ ಮೂಲಕ ಪಶ್ಚಿಮ ಬಂಗಾಳ ತಲುಪುವ ನಿರೀಕ್ಷೆ ಇತ್ತು. ಆದರೆ ಅವರ ಕಾರು ಜಖಂಗೊಂಡ ಕಾರಣ ಯಾತ್ರೆ ನಿರೀಕ್ಷಿತ ಸಮಯಕ್ಕೆ ಪಶ್ಚಿಮ ಬಂಗಾಳಕ್ಕೆ ತಲುಪಲು ಸಾಧ್ಯವಾಗಿಲ್ಲ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಯ ಭಾರತ್ ಜೋಡೋ ನ್ಯಾಯ್ ಯಾತ್ರೆ ಹೋದಲ್ಲೆಲ್ಲಾ ಮಮತಾ ಬ್ಯಾನರ್ಜಿ ಪಾದಯಾತ್ರೆ

ಇನ್ನು ಬಿಹಾರದಲ್ಲಿ ರಾಜಕೀಯ ಬದಲಾವಣೆಗಳು ಗರಿಗೆದರಿದ್ದು. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿಯೊಮದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಒಲುವು ತೋರಿಸಿದ್ದಾರೆ. ಈ ಸಮಯದಲ್ಲೇ ಕಾಂಗ್ರೆಸ್​​​​ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಬಿಹಾರದಲ್ಲಿ ನಡೆಸುತ್ತಿದೆ.

ರಾಹುಲ್ ಗಾಂಧಿಯ ಭಾರತ್ ಜೋಡೋ ನ್ಯಾಯ್ ಯಾತ್ರೆ ಹೋದಲ್ಲೆಲ್ಲಾ ಮಮತಾ ಬ್ಯಾನರ್ಜಿ ಪಾದಯಾತ್ರೆ

ರಾಹುಲ್​​​ ಗಾಂಧಿ ಜೊತೆಯಾಗಿ ನಿಲ್ಲುವ ಮಮತಾ ಬ್ಯಾನರ್ಜಿ ಇದೀಗ ಉಲ್ಟಾ ಹೊಡೆದಿದ್ದಾರೆ. ಲೋಕಸಭೆ ಸೀಟು ಹಂಚಿಕೆ ಕುರಿತು ಮಮತಾ ಅಸಮಾಧಾನಗೊಂಡಿದ್ದು, ಲೋಕಸಭೆಯಲ್ಲಿ ಒಬ್ಬಂಟಿಯಾಗಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಈ ಹೊತ್ತಿನಲ್ಲೇ ಭಾರತ್ ಜೋಡೋ ನ್ಯಾಯ್ ಯಾತ್ರೆ ಪಶ್ಚಿಮ ಬಂಗಾಳಕ್ಕೆ ಬಂದಿದೆ. ಆದರೆ ಈ ಯಾತ್ರೆಗೆ ಬಂಗಾಳದಲ್ಲಿ ಸರಿಯಾದ ಅವಕಾಶ ಹಾಗೂ ಪ್ರತಿಕ್ರಿಯೆ ಸಿಕ್ಕಿಲ್ಲ. ರಾಹುಲ್​​​ ಮಾಡುವ ಸಭೆಗೆ ಅಲ್ಲಿನ ಜಿಲ್ಲಾಡಳಿತ ಅವಕಾಶವನ್ನೇ ನೀಡಿರಲಿಲ್ಲ. ಈ ಯಾತ್ರೆ ಇದೀಗ ಬಿಹಾರಕ್ಕೆ ಬಂದಿದೆ. ರಾಹುಲ್​​ ಗಾಂಧಿ ಸಾಗಿದ ಹಾದಿಯಲ್ಲೇ ಮಮತಾ ಕೂಡ ಸಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆ ಸಾಗಿದ ಪ್ರದೇಶದಲ್ಲಿ ಮಮತಾ ಕೂಡ ಯಾತ್ರೆ ಮಾಡಲಿದ್ದಾರೆ ಎಂದು ವರದಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ