AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ನ್ಯಾಯ ಯಾತ್ರೆಗೆ ಕಾಂಗ್ರೆಸ್​ನಿಂದ ಆಹ್ವಾನ ಸ್ವೀಕರಿಸಿದ ಅಖಿಲೇಶ್​ ಯಾದವ್

ಅಖಿಲೇಶ್ ಯಾದವ್ ಅವರು ಭಾರತ್ ಜೋಡೋ ನ್ಯಾಯ ಯಾತ್ರೆಗೆ ಆಹ್ವಾನ ನೀಡಿಲ್ಲ ಎಂದು ಹೇಳಿದ ಕೆಲವು ದಿನಗಳ ನಂತರ, ಕಾಂಗ್ರೆಸ್ ಮಂಗಳವಾರ ಸಮಾಜವಾದಿ ಪಕ್ಷದ ಮುಖ್ಯಸ್ಥರಿಗೆ ರಾಹುಲ್ ಗಾಂಧಿ ನೇತೃತ್ವದ ಉತ್ತರ ಪ್ರದೇಶ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ ಎಂಬುದು ತಿಳಿದುಬಂದಿದೆ.

ಭಾರತ್ ಜೋಡೋ ನ್ಯಾಯ ಯಾತ್ರೆಗೆ ಕಾಂಗ್ರೆಸ್​ನಿಂದ ಆಹ್ವಾನ ಸ್ವೀಕರಿಸಿದ ಅಖಿಲೇಶ್​ ಯಾದವ್
ಅಖಿಲೇಶ್​ ಯಾದವ್Image Credit source: Aaj Tak
ನಯನಾ ರಾಜೀವ್
|

Updated on: Feb 07, 2024 | 9:44 AM

Share

ಸಮಾಜವಾದಿ ಪಕ್ಷ(Samajwadi Party)ದ ಮುಖ್ಯಸ್ಥ ಅಖಿಲೇಶ್​ ಯಾದವ್​(Akhilesh Yadav)ಗೆ ಕಾಂಗ್ರೆಸ್​ನ ಭಾರತ್ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra)ಯಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ನ್ಯಾಯ ಯಾತ್ರೆಗೆ ಯಾವುದೇ ಆಹ್ವಾನ ಬಂದಿಲ್ಲ ಎಂದು ಅಖಿಲೇಶ್​ ಹೇಳಿದ್ದರು, ಇದಾದ ಕೆಲವೇ ದಿನಗಳ ಬಳಿಕ ಆಹ್ವಾನ ನೀಡಿರುವುದಾಗಿ ತಿಳಿದುಬಂದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಹ್ವಾನವನ್ನು ಸ್ವೀಕರಿಸಿದ ಯಾದವ್ ಅವರು ಅಮೇಥಿ ಅಥವಾ ರಾಯ್​ಬರೇಲಿಯಲ್ಲಿ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದರು.

ಫೆಬ್ರವರಿ 16 ರಂದು ಉತ್ತರ ಪ್ರದೇಶಕ್ಕೆ ಪ್ರವೇಶಿಸುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಲು ಅಖಿಲೇಶ್ ಯಾದವ್ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಅವರ ಆಹ್ವಾನ ಬಂದಿದೆ. ಅಮೇಥಿ ಅಥವಾ ರಾಯ್ಬರೇಲಿಯಲ್ಲಿ ಯಾತ್ರೆಗೆ ಸೇರಲು ಯಾದವ್ ಒಪ್ಪಿಗೆ ನೀಡಿದ್ದಾರೆ ಎಂದು ಎಸ್ಪಿ ಹೇಳಿಕೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಮತ್ತು ಎಸ್‌ಪಿ ಎರಡೂ ವಿರೋಧ ಪಕ್ಷಗಳಾದ ಇಂಡಿಯಾ ಬ್ಲಾಕ್‌ನ ಸದಸ್ಯರಾಗಿದ್ದಾರೆ. 80 ಸಂಸದರನ್ನು ಲೋಕಸಭೆಗೆ ಕಳುಹಿಸುವ ಯುಪಿಯಲ್ಲಿ ಮುಂಬರುವ ಸಂಸತ್ತಿನ ಚುನಾವಣೆಗಾಗಿ ಸಮಾಜವಾದಿ ಪಕ್ಷ ಇತ್ತೀಚೆಗೆ ಕಾಂಗ್ರೆಸ್‌ಗೆ 11 ಸ್ಥಾನಗಳನ್ನು ನೀಡಿತ್ತು. ಎಂಸಿ ವರಿಷ್ಠೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜ್ಯದಲ್ಲಿದ್ದಾಗ ಯಾತ್ರೆಯಿಂದ ದೂರ ಉಳಿದಿದ್ದರು.

ಮತ್ತಷ್ಟು ಓದಿ: Bharat Jodo Nyay Yatra: ಬಿಹಾರ ತಲುಪಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ

ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು ಕವಿ ಪ್ರದೀಪ್ ಅವರ ಜನ್ಮದಿನದಂದು ಇಲ್ಲಿ ಆಯೋಜಿಸಿದ್ದ ‘ಜ್ಯೋತ್ ಸೆ ಜ್ಯೋತ್ ಜಗಾತೇ ಚಲೋ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಯುಪಿ ಉಸ್ತುವಾರಿ ಅವಿನಾಶ್ ಪಾಂಡೆ ಭಾಗವಹಿಸಿದ್ದರು.

ಪಾಂಡೆ ಮಾತನಾಡಿ, ರಾಹುಲ್ ಗಾಂಧಿಯವರು ದೇಶದಲ್ಲಿ ಮಾನವೀಯತೆ, ಪ್ರೀತಿ, ಭ್ರಾತೃತ್ವದ ಸಂದೇಶವನ್ನು ಸಾರುತ್ತಿದ್ದಾರೆ.ಇನ್ನೊಂದೆಡೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ದ್ವೇಷ ಹರಡುವ ಮೂಲಕ ದೇಶವನ್ನು ಹಿನ್ನಡೆಗೆ ಕೊಂಡೊಯ್ಯಲು ಬಯಸುತ್ತಿದೆ. ದೇಶದ ಸಂವಿಧಾನವನ್ನು ಉಳಿಸಲು ನಮ್ಮ ನಾಯಕನೊಂದಿಗೆ ನಿಲ್ಲುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ