AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Nyay Yatra: ಆಗ್ರಾದಲ್ಲಿ ರಾಹುಲ್​ ಜತೆ ಹೆಜ್ಜೆ ಹಾಕಲಿದ್ದಾರೆ ಅಖಿಲೇಶ್ ಯಾದವ್

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಇಂದು ಯುಪಿಯ ಆಗ್ರಾದಿಂದ ಹೊರಡಲಿದೆ. ಮಾಹಿತಿ ಪ್ರಕಾರ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕಾಂಗ್ರೆಸ್ ನ ನ್ಯಾಯ ಯಾತ್ರೆಗೆ ಸೇರಲಿದ್ದಾರೆ. ಇಂದು ಆಗ್ರಾದಲ್ಲಿ ರಾಹುಲ್ ಗಾಂಧಿ ಜೊತೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆಗೆ ಅಂತಿಮ ಒಪ್ಪಿಗೆ ನೀಡಿದ ನಂತರ, ಅಖಿಲೇಶ್ ಯಾದವ್ ಯಾತ್ರೆಯಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದಾರೆ . ಇದೀಗ ಆಗ್ರಾ ಭೇಟಿಯ ವೇಳೆ ರಾಹುಲ್ ಮತ್ತು ಅಖಿಲೇಶ್ ವೇದಿಕೆಯಿಂದಲೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಉತ್ಸುಕರಾಗಿದ್ದಾರೆ.

Bharat Jodo Nyay Yatra: ಆಗ್ರಾದಲ್ಲಿ ರಾಹುಲ್​ ಜತೆ ಹೆಜ್ಜೆ ಹಾಕಲಿದ್ದಾರೆ ಅಖಿಲೇಶ್ ಯಾದವ್
ರಾಹುಲ್ ಗಾಂಧಿ, ಅಖಿಲೇಶ್​ ಯಾದವ್ Image Credit source: ABP Live
ನಯನಾ ರಾಜೀವ್
|

Updated on: Feb 25, 2024 | 11:13 AM

Share

ರಾಜಕೀಯದಲ್ಲಿ ಶಾಶ್ವತ ಮಿತ್ರರಾಗಲಿ, ಶತ್ರುವಾಗಲೀ ಇರುವುದಿಲ್ಲ ಎಂಬುದಕ್ಕೆ ರಾಹುಲ್ ಗಾಂಧಿ(Rahul Gandhi), ಅಖಿಲೇಶ್​ ಯಾದವ್(Akhilesh Yadav) ಸಾಕ್ಷಿ. ಏಕೆಂದರೆ 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​-ಸಮಾಜವಾದಿ ಪಕ್ಷದ ಹೀನಾಯ ಸೋಲಿನ ನಂತರ ಮುರಿದುಬಿದ್ದ ಸ್ನೇಹ 2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ್ತೆ ಚಿಗುರುತ್ತಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ರಣತಂತ್ರ ಹೆಣೆಯಲು ಸಿದ್ಧವಾಗಿದ್ದಾರೆ.

ಸೀಟು ಹಂಚಿಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದ ಅಖಿಲೇಶ್​ ಯಾದವ್, ಇಂದು ಆಗ್ರಾದಲ್ಲಿ ನಡೆಯುತ್ತಿರುವ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಆಗ್ರಾ ಸಮೀಪಿಸುತ್ತಿದ್ದಂತೆ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ ಅಖಿಲೇಶ್​ ಯಾದವ್ ಅವರನ್ನು ಆಹ್ವಾನಿಸಿದ್ದರು.

ಇದೇ ವೇಳೆ ಉತ್ತರ ಪ್ರದೇಶ ಕಾಂಗ್ರೆಸ್​ ಅಧ್ಯಕ್ಷ ಅಜಯ್ ರೈ ಮತ್ತು ಕಾಂಗ್ರೆಸ್​ ನಾಯಕ ಪಿಎಲ್ ಪುನಿಯಾ ಖುದ್ದು ಲಕ್ನೋದಲ್ಲಿರುವ ಎಸ್​ಪಿ ಕೇಂದ್ರ ಕಚೇರಿಗೆ ಆಗಮಿಸಿ ಅಖಿಲೇಶ್​ಗೆ ಆಹ್ವಾನ ಪತ್ರಿಕೆಯನ್ನು ಹಸ್ತಾಂತರಿಸಿದ್ದರು. ಆಗ್ರಾದಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ತೆಹ್ರಾ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತಷ್ಟು ಓದಿ: ಎಸ್​ಪಿ, ಕಾಂಗ್ರೆಸ್​ ಮೈತ್ರಿ ದೃಢ, ಚುನಾವಣೆಯಲ್ಲಿ ಒಟ್ಟಾಗಿ ಹೋರಾಡಲಿದ್ದೇವೆ ಎಂದ ಅಖಿಲೇಶ್​ ಯಾದವ್

ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಹಾಗೂ ಸಮಾಜವಾದಿ ಪಕ್ಷದ ನಡುವೆ ಮೈತ್ರಿ ಇದೆ. ರಾಯ್​ಬರೇಲಿ, ಅಮೇಥಿ, ಕಾನ್ಪುರ ನಗರ, ಫತೇಪುರ್ ಸಿಕ್ರಿ, ಬನ್ಸ್​ಗಾಂವ್, ಸಹರಾನ್​ಪುರ, ಪ್ರಯಾಗ್​ರಾಜ್, ಮಹಾರಾಜ್​ಗಂಜ್, ವಾರಾಣಸಿ, ಅಮ್ರೋಹಾ, ಝಾನ್ಸಿ, ಬುಲಂದ್​ಶಹರ್, ಗಾಜಿಯಾಬಾದ್, ಮಥುರಾ, ಸೀತಾಪುರ್, ಬಾರಾಬಂಕಿ, ಡಿಯೋರಿಯಾ ಸೇರಿದಂತೆ 17 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಸ್ಪರ್ಧಿಸಲಿದೆ. ಎಸ್​ಪಿ ಹಾಗೂ ಇಂಡಿಯಾ ಒಕ್ಕೂಟದ ಇತರೆ ಅಭ್ಯರ್ಥಿಗಳು ಉಳಿದ 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ. ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಸ್ಥಾನಗಳಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ