‘ಭಾರತ್ ಜೋಡೋ ನ್ಯಾಯ ಯಾತ್ರೆ’ ಮುಕ್ತಾಯ: ರಾಹುಲ್ ಗಾಂಧಿ ಹೇಳಿದ್ದಿಷ್ಟು

|

Updated on: Mar 17, 2024 | 10:52 PM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಇಂದು ಅಂತ್ಯಗೊಂಡಿದೆ. ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭ ನಡೆಯಿತು. ಬಳಿಕ ಮಾತನಾಡಿದ ಅವರು, ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ತನಿಖೆ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಭಾರತ್ ಜೋಡೋ ನ್ಯಾಯ ಯಾತ್ರೆ ಮುಕ್ತಾಯ: ರಾಹುಲ್ ಗಾಂಧಿ ಹೇಳಿದ್ದಿಷ್ಟು
ರಾಹುಲ್ ಗಾಂಧಿ
Follow us on

ಮುಂಬೈ, ಮಾರ್ಚ್​ 17: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಇಂದು ಅಂತ್ಯಗೊಂಡಿದೆ. ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ಸಮಾರೋಪ ಸಮಾರಂಭ ನಡೆಯಿತು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಆರ್‌ಜೆಡಿಯ ತೇಜಸ್ವಿ ಯಾದವ್, ಎನ್‌ಸಿಪಿ ನಾಯಕ ಶರದ್ ಪವಾರ್, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ತನಿಖೆ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಪ್ರತಿಯೊಂದು ಸಂಸ್ಥೆಗಳ ಮೇಲೂ ತನಿಖೆ ಸಂಸ್ಥೆಗಳ ಬಳಕೆ ಆಗುತ್ತಿದೆ. ಸಾಮಾಜಿಕ ಮಾಧ್ಯಮ ಸೇರಿದಂತೆ ಸಂಪೂರ್ಣ ಸಂವಹನ ಕಾರ್ಯವಿಧಾನವನ್ನು ‘ಹೈಜಾಕ್’ ಮಾಡಿರುವುದರಿಂದ ತಮ್ಮ ಪಕ್ಷವು ಈ ಯಾತ್ರೆಯನ್ನು ಮಾಡಲು ಉದ್ದೇಶಿಸಿತು ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಟ್ವೀಟ್ 


ಸಾಮಾಜಿಕ ಮಾಧ್ಯಮ ಸೇರಿದಂತೆ ದೇಶದಲ್ಲಿ ಸಂವಹನ ಮಾಧ್ಯಮ ನಾಶವಾಗಿರುವುದರಿಂದ ನಾವು ಈ ಯಾತ್ರೆಯನ್ನು ಮಾಡಲು ಒತ್ತಾಯಿಸಲಾಯಿತು. ದೇಶದ ನಿಜವಾದ ಸಮಸ್ಯೆಗಳನ್ನು ಮಾಧ್ಯಮಗಳಲ್ಲಿ ತೋರಿಸಲಾಗುತ್ತಿಲ್ಲ. ರಾಹುಲ್ ಗಾಂಧಿ ಮಾತ್ರ ಈ ಯಾತ್ರೆ ಕೈಗೊಂಡಿಲ್ಲ. ಉದ್ಧವ್ ಠಾಕ್ರೆ, ಶರದ್ ಪವಾರ್ ಸೇರಿದಂತೆ ಇತರೆ ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದಾರೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​ ಇಲ್ಲದಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ, ಬಿಜೆಪಿ ಇಲ್ಲದಿದ್ದರೆ ಗಲಭೆಗಳು ನಡೆಯುತ್ತಿರಲಿಲ್ಲ: ಸಂಜಯ್ ರಾವತ್​

ನಾವು ಒಬ್ಬ ವ್ಯಕ್ತಿಯ ವಿರುದ್ಧವಾಗಿದ್ದೇವೆ ಎಂದು ಜನರು ಭಾವಿಸಿದ್ದಾರೆ. ಆದರೆ ನಾವು ಯಾವುದೇ ವ್ಯಕ್ತಿ ಆಗಲಿ ಅಥವಾ ಯಾವುದೇ ಪಕ್ಷದ ವಿರುದ್ಧವೂ ಅಲ್ಲ. ಹಿಂದೂ ಧರ್ಮದಲ್ಲಿ ‘ಶಕ್ತಿ’ ಎಂಬ ಪದವಿದೆ. ನಾವು ಆ ಶಕ್ತಿಯ ವಿರುದ್ಧ ಹೋರಾಡುತ್ತಿದ್ದೇವೆ. ನರೇಂದ್ರ ಮೋದಿ ಕೇವಲ ಮುಖವಾಡ. ಅವರಿಗೆ ಒಂದು ಪಾತ್ರವನ್ನು ನೀಡಲಾಗಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್​ ಟ್ವೀಟ್ 

ಹಲವಾರು ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವುದನ್ನು ಎತ್ತಿ ಹೇಳಿದ್ದು, “ಬಿಜೆಪಿ ಅವರನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರಿಂದ” ಕೆಲ ನಾಯಕರು ಈ ನಿರ್ಧಾರ ಮಾಡಿದ್ದಾರೆ. “ಕೆಲವು ‘ಶಕ್ತಿ’ಗಳು ರಾಜ್ಯದಲ್ಲಿ ಅಂತರ್ಯುದ್ಧದ ವಾತಾವರಣವನ್ನು ಸೃಷ್ಟಿಸಿರುವುದರಿಂದ ನಾವು ಮಣಿಪುರದಿಂದ ಯಾತ್ರೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದೇವೆ” ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:48 pm, Sun, 17 March 24