AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಉದ್ಘಾಟನೆ ಕಾರ್ಯ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮ: ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿ, ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ಕಾಂಗ್ರೆಸ್ ನಿರಾಕರಿಸಿದ ಕೆಲವು ದಿನಗಳ ನಂತರ ರಾಹುಲ್ ಗಾಂಧಿ ಈ ರೀತಿ ಹೇಳಿದ್ದಾರೆ.

ರಾಮಮಂದಿರ ಉದ್ಘಾಟನೆ ಕಾರ್ಯ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Jan 16, 2024 | 4:29 PM

Share

ಕೊಹಿಮಾ ಜನವರಿ 16: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಮಂಗಳವಾರ ರಾಮ ಮಂದಿರದ ಉದ್ಘಾಟನಾ ಸಮಾರಂಭದ ಬಗ್ಗೆ ಟೀಕೆ ಮಾಡಿದ್ದು ಇದು ನರೇಂದ್ರ ಮೋದಿ (Narendra Modi) ರಾಜಕೀಯ ಕಾರ್ಯಕ್ರಮ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ (BJP) ಜನವರಿ 22 ರ ಕಾರ್ಯವನ್ನು ಸಂಪೂರ್ಣವಾಗಿ ನರೇಂದ್ರ ಮೋದಿ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದೆ. ಇದು ಆರ್‌ಎಸ್‌ಎಸ್ ಬಿಜೆಪಿ ಕಾರ್ಯಕ್ರಮವಾಗಿದ್ದು, ಕಾಂಗ್ರೆಸ್ ಅಧ್ಯಕ್ಷರು ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಹೇಳಿದರು. ನಾವು ಎಲ್ಲಾ ಧರ್ಮಗಳು, ಎಲ್ಲಾ ಆಚರಣೆಗಳಿಗೆ ಮುಕ್ತರಾಗಿದ್ದೇವೆ ಎಂದು ನಾಗಾಲ್ಯಾಂಡ್‌ನ ರಾಜಧಾನಿ ಕೊಹಿಮಾದಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ರಾಹುಲ್ ಹೇಳಿದ್ದಾರೆ.

ಹಿಂದೂ ಧರ್ಮದ ವರಿಷ್ಠರು, ಹಿಂದೂ ಧರ್ಮದ ಮಠಾಧಿಪತಿಗಳು ಸಹ ಜನವರಿ 22 ರ ಸಮಾರಂಭ ರಾಜಕೀಯ ಕಾರ್ಯ ಎಂದು ತಮ್ಮ ಅಭಿಪ್ರಾಯವನ್ನು ಎಂದು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಭಾರತದ ಪ್ರಧಾನ ಮಂತ್ರಿಯ ಸುತ್ತ ವಿನ್ಯಾಸಗೊಳಿಸಲಾದ ಮತ್ತು ಆರೆಸ್ಸೆಸ್ ಸುತ್ತ ವಿನ್ಯಾಸಗೊಳಿಸಲಾದ ರಾಜಕೀಯ ಕಾರ್ಯಕ್ರಮಕ್ಕೆ ಹೋಗುವುದು ನಮಗೆ ಸರಿಯನಿಸುವುದಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿ, ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಆಹ್ವಾನವನ್ನು ಕಾಂಗ್ರೆಸ್ ನಿರಾಕರಿಸಿದ ಕೆಲವು ದಿನಗಳ ನಂತರ ರಾಹುಲ್ ಗಾಂಧಿ ಈ ರೀತಿ ಹೇಳಿದ್ದಾರೆ.

ರಾಮಮಂದಿರದ ಆಹ್ವಾನ ಪತ್ರಿಕೆ ತಿರಸ್ಕರಿಸಿ ಕಾಂಗ್ರೆಸ್ ನೀಡಿದ ಹೇಳಿಕೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಪ್ರಚಾರಕ್ಕಾಗಿ ಮಾಡಲಾಗುತ್ತಿದೆ ಎಂದಿದೆ.

‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಏಳು ದಿನಗಳ ಆಚರಣೆಗಳು ಮಂಗಳವಾರ ಆರಂಭಗೊಂಡಿವೆ. ಪ್ರಾಣ ಪ್ರತಿಷ್ಠಾ ಕಾರ್ಯ ಜನವರಿ 22 ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಭವ್ಯ ಸಮಾರಂಭದಲ್ಲಿ ಪ್ರಮುಖ ಸಂತರು, ಕ್ರೀಡಾಪಟುಗಳು, ನಟರು ಮತ್ತು ಕೈಗಾರಿಕೋದ್ಯಮಿಗಳು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ವೇಳೆ ರಾಮನಾಮ ಜಪಿಸುವಂತೆ ಕರೆ ನೀಡಿದ ಗಾಯಕಿ ಕೆಎಸ್ ಚಿತ್ರಾ; ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ

‘ಅನುಷ್ಠಾನ’ ಆರಂಭವಾಗಿದ್ದು, ಪ್ರಾಣ ಪ್ರತಿಷ್ಠಾ ದಿನವಾದ ಜನವರಿ 22ರವರೆಗೆ ನಡೆಯಲಿದೆ. ಹನ್ನೊಂದು ಪುರೋಹಿತರು ಎಲ್ಲಾ “ದೇವಿಗಳು ಮತ್ತು ದೇವತೆಗಳನ್ನು” ಆವಾಹನೆ ಮಾಡುವ ಆಚರಣೆಗಳನ್ನು ಮಾಡುತ್ತಿದ್ದಾರೆ” ಎಂದು ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಪಿಟಿಐಗೆ ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ