AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರೈವರ್​ ಸೀಟ್​ನಲ್ಲಿ ತೇಜಸ್ವಿ, ಜೀಪ್​ನಲ್ಲಿ ರಾಹುಲ್ ಬಿಹಾರ ಯಾತ್ರೆ

ಭಾರತ್ ಜೋಡೋ ನ್ಯಾಯ ಯಾತ್ರೆಯು ಈಗ ಬಿಹಾರದಲ್ಲಿದೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ತೇಜಸ್ವಿ ಯಾದವ್ ಅವರ ಜತೆಗೆ ತೆರೆದ ಜೀಪ್​ನಲ್ಲಿ ಯಾತ್ರೆ ನಡೆಸಿದ್ದಾರೆ. ಇಂದು ಸಂಜೆ ವೇಳೆಗೆ ಯಾತ್ರೆ ಉತ್ತರ ಪ್ರದೇಶವನ್ನು ತಲುಪಲಿದ್ದು ಅಲ್ಲಿ ಎರಡೂ ನಾಯಕರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಡ್ರೈವರ್​ ಸೀಟ್​ನಲ್ಲಿ ತೇಜಸ್ವಿ, ಜೀಪ್​ನಲ್ಲಿ ರಾಹುಲ್ ಬಿಹಾರ ಯಾತ್ರೆ
ತೇಜಸ್ವಿ ಯಾದವ್-ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on: Feb 16, 2024 | 3:03 PM

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Rahul Gandhi) ಬಿಹಾರದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra) ನಡೆಸಿದರು. ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಡ್ರೈವರ್​ ಸೀಟ್​ನಲ್ಲಿದ್ದರೆ ರಾಹುಲ್ ಅವರ ಪಕ್ಕ ಕುಳಿತು ಜೀಪಿ​​ನಲ್ಲಿ ಬಿಹಾರ ಯಾತ್ರೆ ನಡೆಸಿದರು. ಇಂದು ಯಾತ್ರೆಯು ಉತ್ತರ ಪ್ರದೇಶವನ್ನು ತಲುಪಲಿದೆ. ತೇಜಸ್ವಿ ಯಾದವ್ ಅವರು ಎಕ್ಸ್‌ನಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ಅಲ್ಲಿ ಅವರು ರಾಹುಲ್ ಗಾಂಧಿ ಅವರ ಪಕ್ಕದಲ್ಲಿ ಕುಳಿತಿದ್ದಾರೆ ಮತ್ತು ಯಾತ್ರೆಯು ಸಸಾರಾಮ್ ಮೂಲಕ ಸಾಗುತ್ತಿರುವಾಗ ಜೀಪ್‌ನಲ್ಲಿ ಇತರ ಕೂಡ ಇದ್ದರು.

ವಿಡಿಯೋವೊಂದರಲ್ಲಿ ತೇಜಸ್ವಿ ಯಾದವ್ ಹಾಗೂ ರಾಹುಲ್ ಗಾಂಧಿ ಅವರು ಪ್ರೇಕ್ಷಕರತ್ತ ಉತ್ಸಾಹಭರಿತರಾಗಿ ಕೈಬೀಸುತ್ತಿರುವುದನ್ನು ಕಾಣಬಹುದು. ಬಿಹಾರದ ಸಸಾರಾಮ್‌ನಲ್ಲಿ ಭಾರತ ಜೋಡೋ ನ್ಯಾಯ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ತೇಜಸ್ವಿ ಯಾದವ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮೇಲೆ ವಾಗ್ದಾಳಿ ನಡೆಸಿದರು ಮತ್ತು ಮುಖ್ಯಮಂತ್ರಿ ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿಲ್ಲ ಎಂದು ಹೇಳಿದರು.

ನಮ್ಮ ಸಿಎಂ ಹೇಗಿದ್ದಾರೆಂದು ನಿಮಗೆಲ್ಲ ಚೆನ್ನಾಗಿ ಗೊತ್ತಿದೆ, ಯಾರ ಮಾತನ್ನೂ ಕೇಳಲು ಇಷ್ಟಪಡುವುದಿಲ್ಲ. ನಾನು ಸಾಯುತ್ತೇನೆ, ಆದರೆ ಬಿಜೆಪಿ ಸೇರುವುದಿಲ್ಲ ಎಂದು ಹೇಳುತ್ತಿದ್ದರು ಆದರೆ ಈಗ ನೋಡಿ ಪರಿಸ್ಥಿತಿ ಏನಾಗಿದೆ.  2024ರಲ್ಲಿ ಬಿಜೆಪಿಯನ್ನು ಸೋಲಿಸಲು ನಾವು ತುಂಬಾ ತ್ಯಾಗ ಮಾಡಬೇಕಾಗಿದೆ ಎಂದರು.

ಮತ್ತಷ್ಟು ಓದಿ: Bharat Jodo Nyay Yatra: ಬಿಹಾರ ತಲುಪಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಉತ್ತರ ಪ್ರದೇಶದ ಕೈಮೂರ್ ಜಿಲ್ಲೆಯಲ್ಲಿ ಇಬ್ಬರೂ ನಾಯಕರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜನವರಿ 14 ರಂದು ಮಣಿಪುರದಲ್ಲಿ ಆರಂಭವಾದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ 67 ದಿನಗಳಲ್ಲಿ 6,713 ಕಿ.ಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಈ ಚಿತ್ರ ಹೊರಬಿದ್ದ ಬಳಿಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿದೆ. ಇಂಡಿಯಾ ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಬಿಹಾರದಲ್ಲಿ ಹಲವು ಚರ್ಚೆಗಳು ಆರಂಭವಾಗಿವೆ. ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿರುವ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೊರತು ಕಾಂಗ್ರೆಸ್​ ಪಕ್ಷವಲ್ಲ ಎಂಬ ಕಾರಣಕ್ಕೆ ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆಯಲ್ಲಿ ದೊಡ್ಡ ಸಮಸ್ಯೆ ಎದುರಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!