Bharat Jodo Yatra: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ 21 ಪಕ್ಷಗಳಿಗೆ ಆಹ್ವಾನ

ಇದೇ ಜನವರಿ 30 ರಂದು ನಡೆಯಲಿರುವ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ(Bharat Jodo Yatra)ಯ ಸಮಾರೋಪ ಕಾರ್ಯಕ್ರಮಕ್ಕೆ 12 ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ತಿಳಿಸಿವೆ.

Bharat Jodo Yatra: ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ 21 ಪಕ್ಷಗಳಿಗೆ ಆಹ್ವಾನ
ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on: Jan 29, 2023 | 9:58 AM

ಇದೇ ಜನವರಿ 30 ರಂದು ನಡೆಯಲಿರುವ ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ(Bharat Jodo Yatra)ಯ ಸಮಾರೋಪ ಕಾರ್ಯಕ್ರಮಕ್ಕೆ 12 ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ತಿಳಿಸಿವೆ. ಸಮಾರಂಭಕ್ಕೆ ಒಟ್ಟು 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು, ಆದರೆ ಭದ್ರತಾ ಕಾರಣಗಳಿಂದ 9 ಪಕ್ಷಗಳು ಹಾಜರಾಗುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಟಿಡಿಪಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ.

ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್), ಉದ್ಧವ್ ಠಾಕ್ರೆ ಅವರ ಶಿವಸೇನೆ, ಸಿಪಿಐ(ಎಂ), ಸಿ.ಪಿ.ಐ. , ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕೇರಳ ಕಾಂಗ್ರೆಸ್, ಫಾರೂಕ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್, ಮೆಹಬೂಬಾ ಮುಫ್ತಿ ಅವರ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಮತ್ತು ಶಿಬು ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶ್ರೀನಗರದಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮತ್ತಷ್ಟು ಓದಿ: ಕೋವಿಡ್ ನಿಯಮ ಪಾಲಿಸಿ ಇಲ್ಲವೇ ಭಾರತ್ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವರ ಪತ್ರ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಸಹೋದರ ರಾಹುಲ್ ಗಾಂಧಿಯವರೊಂದಿಗೆ ಯಾತ್ರೆಗೆ ಸೇರಿಕೊಂಡರು, ಇದು ಭದ್ರತಾ ಉಲ್ಲಂಘನೆಯ ಆರೋಪದ ಕಾರಣ ಶುಕ್ರವಾರ ರದ್ದುಗೊಂಡ ನಂತರ ಆವಂತಿಪೋರಾದ ಚೆರ್ಸೂ ಗ್ರಾಮದಿಂದ ಪುನರಾರಂಭವಾಯಿತು.

ಪೀಪಲ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಅವಂತಿಪೋರಾದಲ್ಲಿ ಯಾತ್ರೆಯಲ್ಲಿ ಪಾಲ್ಗೊಂಡರು. ಪ್ರಚಾರದ ಸಮಯದಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್  ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಜನವರಿ 30 ರಂದು ಶ್ರೀನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾಕಷ್ಟು ಮಂದಿ ಸಮಾವೇಶದಲ್ಲಿ ಸೇರುವ ನಿರೀಕ್ಷೆ ಇದೆ. ಹಲವು ಹಿರಿಯ ಕಾಂಗ್ರೆಸ್ ನಾಯಕರು ಮತ್ತು ಇತರ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.

ಕನ್ಯಾಕುಮಾರಿಯಿಂದ ಕಾಶ್ಮೀರ ಯಾತ್ರೆಯು ದೇಶದ ದಕ್ಷಿಣ ತುದಿಯಿಂದ ಸೆಪ್ಟೆಂಬರ್ 7 ರಂದು ಪ್ರಾರಂಭವಾಯಿತು ಮತ್ತು ಸುಮಾರು 145 ದಿನಗಳಲ್ಲಿ 3,970 ಕಿಮೀ, 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕ್ರಮಿಸಿದ ನಂತರ ಶ್ರೀನಗರದಲ್ಲಿ ಜನವರಿ 30 ರಂದು ಕೊನೆಗೊಳ್ಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ