Bharat Jodo Yatra: ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತವಾಗಿ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್​ಗೆ ಗಾಯ

ಇಂದೋರ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಜನರು ಒಂದೇ ಸಮನೆ ನುಗ್ಗಿದ ಹಿನ್ನೆಲೆಯಲ್ಲಿ ಕಾಲ್ತುಳಿತದಿಂದ ಕೆ.ಸಿ ವೇಣುಗೋಪಾಲ್ ಅವರಿಗೆ ಗಾಯಗಳಾಗಿವೆ.

Bharat Jodo Yatra: ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತವಾಗಿ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್​ಗೆ ಗಾಯ
ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತವಾಗಿ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್​ಗೆ ಗಾಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 28, 2022 | 9:40 AM

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ (Bharat Jodo Yatra) 5ನೇ ದಿನದ ಪಾದಯಾತ್ರೆಯ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (KC Venugopal) ಅವರು ಕೆಳಗೆ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತದಿಂದ ಕೆ.ಸಿ ವೇಣುಗೋಪಾಲ್ ಅವರ ಕೈ ಮತ್ತು ಮೊಣಕಾಲಿನ ಮೇಲೆ ಗಾಯಗಳಾಗಿದೆ. ಅವರಿಗೆ ಭಾರತ್ ಜೋಡೋ ಯಾತ್ರೆಯ ಶಿಬಿರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು.

ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಜನರು ಒಂದೇ ಸಮನೆ ನುಗ್ಗಿದ ಹಿನ್ನೆಲೆಯಲ್ಲಿ ಕಾಲ್ತುಳಿತದಿಂದ ಕೆಸಿ ವೇಣುಗೋಪಾಲ್ ಅವರಿಗೆ ಗಾಯಗಳಾಗಿವೆ ಎನ್ನಲಾಗಿದೆ. ತೀವ್ರ ನೂಕುನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪೊಲೀಸ್ ಸಿಬ್ಬಂದಿ ವಿಫಲವಾಗಿದ್ದಾರೆ. ಆದರೆ, ಪ್ರಥಮ ಚಿಕಿತ್ಸೆ ಪಡೆದ ನಂತರ ಕೆಸಿ ವೇಣುಗೋಪಾಲ್ ಮತ್ತೆ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ.

ಇದಕ್ಕೂ ಮುನ್ನ ಇಂದೋರ್‌ನಲ್ಲಿ ನಡೆದ ಮೆರವಣಿಗೆಯಲ್ಲಿ ಎಎನ್‌ಐ ಜೊತೆ ಮಾತನಾಡಿದ ಕೆ.ಸಿ ವೇಣುಗೋಪಾಲ್, ಭಾರತ್ ಜೋಡೋ ಯಾತ್ರೆಯ ವಿರುದ್ಧ ಏನಾದರೂ ಹುಳುಕು ಹುಡುಕಲು ಬಿಜೆಪಿಯವರು ಪ್ರಯತ್ನಿಸುತ್ತಲೇ ಇದ್ದಾರೆ. ನಮ್ಮ ಈ ಯಾತ್ರೆಯ ನಿಜವಾದ ಫಲಿತಾಂಶ ಏನಾಗಲಿದೆ ಎಂದು ಅರಿವಿರುವುದರಿಂದ ಬಿಜೆಪಿಯವರು ಆತಂಕಕ್ಕೊಳಗಾಗಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: Rahul Gandhi: ಭಾರತ್ ಜೋಡೋ ಯಾತ್ರೆ ವೇಳೆ ರಾಷ್ಟ್ರಗೀತೆ ಹಾಕುವಾಗ ಎಡವಟ್ಟು; ರಾಹುಲ್ ಗಾಂಧಿಗೆ ಬಿಜೆಪಿ ತರಾಟೆ

ಕನ್ಯಾಕುಮಾರಿಯಿಂದ ಆರಂಭವಾದ 150 ದಿನಗಳ ಪಾದಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರ ಇಮೇಜ್‌ಗೆ ಕಳಂಕ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಆದರೆ, ಈ ಯಾತ್ರೆಯ ಸಮಯದಲ್ಲಿ ಜನರು ರಾಹುಲ್ ಗಾಂಧಿಯವರ ನಿಜವಾದ ಮುಖವನ್ನು ನೋಡಿದ್ದಾರೆ ಎಂದು ಅವರು ಹೇಳಿದ್ದಾರೆ.

“ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಪ್ರಸ್ತಾಪಿಸಿದ ವಿಷಯಗಳನ್ನು ಎಲ್ಲರೂ ಒಪ್ಪಿಕೊಳ್ಳುತ್ತಿದ್ದಾರೆ. ನಿರುದ್ಯೋಗ, ಹಣದುಬ್ಬರ, ದ್ವೇಷ, ಮತ್ತು ಜನರು ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಬಿಜೆಪಿ ಕಳೆದ ಕೆಲವು ವರ್ಷಗಳಿಂದ ರಾಹುಲ್ ಗಾಂಧಿಯವರ ವರ್ಚಸ್ಸನ್ನು ಹಾಳು ಮಾಡುವಲ್ಲಿ ನಿರತವಾಗಿದೆ. ಆದರೆ ಈಗ ಜನರು ರಾಹುಲ್ ಗಾಂಧಿಯವರ ನಿಜವಾದ ಮುಖವನ್ನು ನೋಡುತ್ತಿದ್ದಾರೆ. ವಿದ್ಯಾವಂತರು, ಸಹಾನುಭೂತಿಯುಳ್ಳವರಾದ ಜನರು ಸ್ವಂತ ನಿಲುವು ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ” ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಇಂದೋರ್ ತಲುಪುತ್ತಿದ್ದಂತೆ ಬಾಂಬ್ ಸ್ಫೋಟಿಸುವುದಾಗಿ ರಾಹುಲ್ ಗಾಂಧಿಗೆ ಬೆದರಿಕೆ ಪತ್ರ

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು 81ನೇ ದಿನಕ್ಕೆ ತಲುಪಿದೆ. ಇಲ್ಲಿಯವರೆಗಿನ ಈ ಯಾತ್ರೆಯು 7 ರಾಜ್ಯಗಳನ್ನು ಒಳಗೊಂಡಿದೆ. ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ಮುಂದಿನ ವರ್ಷ ಕಾಶ್ಮೀರದಲ್ಲಿ ಮುಕ್ತಾಯವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 am, Mon, 28 November 22

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ