Bharat Jodo Yatra: ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಯಾತ್ರೆಗೆ ನೀಡಿದ ಭದ್ರತೆ ಹಠಾತ್ ಹಿಂತೆಗೆದ ಸರ್ಕಾರ: ಕಾಂಗ್ರೆಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಜಮ್ಮು ಮತ್ತು ಕಾಶ್ಮೀರದ ಭಾರತ್ ಜೋಡೋ ಯಾತ್ರೆಯ ಭಾಗವಾಗಿರುವ ಯಾತ್ರಿಗಳಿಗೆ ಶುಕ್ರವಾರ ಬನಿಹಾಲ್‌ನಲ್ಲಿ ಭದ್ರತೆಯನ್ನು ನಿರಾಕರಿಸಲಾಗಿದೆ ಎಂದು ಪಕ್ಷದ ಹಲವು ಮುಖಂಡರು ಆರೋಪಿಸಿದ್ದಾರೆ

Bharat Jodo Yatra: ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಯಾತ್ರೆಗೆ ನೀಡಿದ ಭದ್ರತೆ ಹಠಾತ್ ಹಿಂತೆಗೆದ ಸರ್ಕಾರ: ಕಾಂಗ್ರೆಸ್
ರಾಹುಲ್ ಗಾಂಧಿImage Credit source: NDTV
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 27, 2023 | 2:50 PM

ಜಮ್ಮು- ಕಾಶ್ಮೀರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಜಮ್ಮು ಮತ್ತು ಕಾಶ್ಮೀರದ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಭಾಗವಾಗಿರುವ ಯಾತ್ರಿಗಳಿಗೆ ಶುಕ್ರವಾರ ಬನಿಹಾಲ್‌ನಲ್ಲಿ ಭದ್ರತೆಯನ್ನು ನಿರಾಕರಿಸಲಾಗಿದೆ ಎಂದು ಪಕ್ಷದ ಹಲವು ಮುಖಂಡರು ಆರೋಪಿಸಿದ್ದಾರೆ. ಡಿ-ಏರಿಯಾದಿಂದ ಭದ್ರತಾ ಸಿಬ್ಬಂದಿ ಹಠಾತ್ ಹಿಂತೆಗೆದುಕೊಳ್ಳುವಿಕೆಯು ಕಾಶ್ಮೀರದ ಬನಿಹಾಲ್‌ನಲ್ಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಗಂಭೀರ ಭದ್ರತಾ ಉಲ್ಲಂಘನೆಯನ್ನು ಉಂಟುಮಾಡಿದೆ. ಇದನ್ನು ಯಾರು ಆದೇಶಿಸಿದ್ದಾರೆ? ಎಂದು ಪಕ್ಷದ ಮುಖಂಡ ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ. ಜವಾಬ್ದಾರರಾಗಿರುವ ಅಧಿಕಾರಿಗಳು ಈ ಲೋಪಕ್ಕೆ ಉತ್ತರಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು.

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಶುಕ್ರವಾರ ಬನಿಹಾಲ್‌ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು, ರಾಹುಲ್ ಗಾಂಧಿ ನೇತೃತ್ವದ ಈ ಯಾತ್ರೆ ರಾಹುಲ್ ಅವರ ಇಮೇಜ್ ಮೇಕ್ ಓವರ್‌ಗಾಗಿ ನಡೆಸುತ್ತಿಲ್ಲ, ಬದಲಿಗೆ ದೇಶದಲ್ಲಿರುವ ಪರಿಸ್ಥಿತಿಯನ್ನು ಬದಲಾಯಿಸಲು ಈ ಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಒಂದು ದಿನದ ವಿರಾಮದ ನಂತರ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಬನಿಹಾಲ್‌ನಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭವಾಯಿತು. ಜನವರಿ 30 ರಂದು ಶ್ರೀನಗರದಲ್ಲಿ ರ್ಯಾಲಿಯಲ್ಲಿ ಕೊನೆಗೊಳ್ಳಲಿದೆ. ಈ ಮೊದಲು ಯಾತ್ರೆ ತನ್ನ ಕೊನೆಯ ಹಂತದಲ್ಲಿ ಇಂದು ಕಾಶ್ಮೀರ ಕಣಿವೆಯನ್ನು ಪ್ರವೇಶಿಸಲಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಜೈರಾಮ್ ರಮೇಶ್ ಪ್ರಕಾರ, ಯಾತ್ರೆಯು ಜಮ್ಮುವಿನ ವಿವಿಧ ಜಿಲ್ಲೆಗಳಲ್ಲಿ ಹಾದು ಸುಮಾರು 90 ಕಿಲೋಮೀಟರ್‌ಗಳನ್ನು ಕ್ರಮಿಸಿದೆ.

ಇದನ್ನು ಓದಿ:Bharat Jodo Yatra ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಕೈ ನಾಯಕರ ವಿರುದ್ಧ ದೂರು ದಾಖಲು

ಜನತಾ ದಳ (ಯುನೈಟೆಡ್) ಅಧ್ಯಕ್ಷ ಲಾಲನ್ ಸಿಂಗ್ ಗುರುವಾರ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ವಿರೋಧ ವ್ಯಕ್ತಪಡಿಸಿದ್ದಾರೆ . ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ಸಿಂಗ್ ಅವರು ಈ ಯಾತ್ರೆಯಲ್ಲಿ ನಾನು ಭಾಗವಹಿಸುವುದಿಲ್ಲ ನನಗೆ ನಾಗಾಲ್ಯಾಂಡ್‌ನಲ್ಲಿ ರಾಜಕೀಯ ಕಾರ್ಯಕ್ರಮ ನಿಗದಿತಯಾಗಿದೆ ಎಂದು ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಹಾಗೂ ಪಕ್ಷ ಸಂಘಟನೆಗಾಗಿ ಈ ಯಾತ್ರೆಗೆ ಬಿಜೆಪಿಯೇತರ ಪಕ್ಷಗಳ ಮುಖ್ಯಸ್ಥರನ್ನು ಕಾಂಗ್ರೆಸ್ ಆಹ್ವಾನಿಸಿದೆ.

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ