AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ಲೋಪ, ಗೃಹ ಸಚಿವ ಅಮಿತ್ ಶಾಗೆ ಕಾಂಗ್ರೆಸ್​​​ ಪತ್ರ

ಇಂಟಲಿಜೆನ್ಸ್ ಬ್ಯೂರೋ ಕಿರುಕುಳ ನೀಡುತ್ತಿದೆ ಎಂದು ಪಕ್ಷ ಆರೋಪಿಸಿದ್ದು ಯಾತ್ರೆಯಲ್ಲಿ ಭಾಗವಹಿಸಿದ ಕೆಲವರನ್ನು ಪ್ರಶ್ನಿಸಲಾಗಿದೆ ಎಂದು ಹೇಳಿದೆ. ಪರಿಸ್ಥಿತಿ ಎಷ್ಟು ತೀವ್ರವಾಗಿತ್ತೆಂದರೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಭಾರತ್ ಜೋಡೋ ಯಾತ್ರಿಗಳು ರಾಹುಲ್ ಗಾಂಧಿಯ ಸುತ್ತ ವಲಯವನ್ನು ರಚಿಸಬೇಕಾಯಿತು

ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ಲೋಪ, ಗೃಹ ಸಚಿವ ಅಮಿತ್ ಶಾಗೆ ಕಾಂಗ್ರೆಸ್​​​ ಪತ್ರ
ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Dec 28, 2022 | 4:38 PM

Share

ಡಿಸೆಂಬರ್ 24ಕ್ಕೆ ಭಾರತ್ ಜೋಡೋ ಯಾತ್ರೆ (Bharat Jodo Yatra) ದೆಹಲಿಗೆ ಬಂದಾಗಿನಿಂದ ಹಲವು ಭಾರಿ ಭದ್ರತಾ ಲೋಪ (security breaches) ಉಂಟಾಗಿದೆ. ದೆಹಲಿ ಪೊಲೀಸರು ಜನರ ಗುಂಪನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದು ಮಾತ್ರವಲ್ಲದೆ ರಾಹುಲ್ ಗಾಂಧಿಗೆ (Rahul Gandhi) ಭದ್ರತೆ ನೀಡುವಲ್ಲಿಯೂ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit Shah)ಪತ್ರ ಬರೆದಿದೆ. ಇಂಟಲಿಜೆನ್ಸ್ ಬ್ಯೂರೋ ಕಿರುಕುಳ ನೀಡುತ್ತಿದೆ ಎಂದು ಪಕ್ಷ ಆರೋಪಿಸಿದ್ದು ಯಾತ್ರೆಯಲ್ಲಿ ಭಾಗವಹಿಸಿದ ಕೆಲವರನ್ನು ಪ್ರಶ್ನಿಸಲಾಗಿದೆ ಎಂದು ಹೇಳಿದೆ. ಪರಿಸ್ಥಿತಿ ಎಷ್ಟು ತೀವ್ರವಾಗಿತ್ತೆಂದರೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಭಾರತ್ ಜೋಡೋ ಯಾತ್ರಿಗಳು ರಾಹುಲ್ ಗಾಂಧಿಯ ಸುತ್ತ ವಲಯವನ್ನು ರಚಿಸಬೇಕಾಯಿತು. ದೆಹಲಿ ಪೊಲೀಸರು ಮೂಕಪ್ರೇಕ್ಷಕರಾಗಿ ನಿಂತುಕೊಂಡಿದ್ದರು ಎಂದು ಪತ್ರದಲ್ಲಿ ಹೇಳಲಾಗಿದೆ. ರಾಹುಲ್ ಗಾಂಧಿಯವರಿಗೆ Z+ ಭದ್ರತೆ ಇದೆ ಎಂಬುದನ್ನೂ ಪತ್ರದಲ್ಲಿ ಸೂಚಿಸಲಾಗಿದೆ. Z+ ವರ್ಗದ ಭದ್ರತೆ ಅಂದರೆ ಬುಲೆಟ್ ಪ್ರೂಫ್ ವಾಹನ, ಪೈಲಟ್ ವಾಹನ, ರಸ್ತೆಗಳಲ್ಲಿ ಆದ್ಯತೆ ಮತ್ತು ಅವರ ನಿವಾಸಗಳು, ಕೆಲಸದ ಸ್ಥಳಗಳು ಅಥವಾ ಅವರು ಭೇಟಿ ನೀಡುವ ಯಾವುದೇ ಸ್ಥಳದಲ್ಲಿ 24/7 ಭದ್ರತೆಯನ್ನು ಪಡೆಯುತ್ತಾರೆ. ಯಾತ್ರೆಯ ಸಂದರ್ಭದಲ್ಲಿ.

ಕಿರುಕುಳದ ಆರೋಪವನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ,ಇದು ದಶಕಗಳಲ್ಲಿ ಕಾಂಗ್ರೆಸ್‌ನ ಅತಿದೊಡ್ಡ ಸಾರ್ವಜನಿಕ ಸಂಪರ್ಕವಾಗಿದೆ. ಹರ್ಯಾಣ ರಾಜ್ಯದ ಗುಪ್ತಚರ ಸಂಸ್ಥೆಗೆ ಸೇರಿದ ಅಪರಿಚಿತ ದುಷ್ಕರ್ಮಿಗಳು ಹರಿಯಾಣದಲ್ಲಿ ಭಾರತ್ ಜೋಡೋ ಯಾತ್ರಾ ಕಂಟೇನರ್‌ಗಳನ್ನು ಅಕ್ರಮವಾಗಿ ಪ್ರವೇಶಿಸಿದ ಬಗ್ಗೆ ನಾವು 23 ಡಿಸೆಂಬರ್ 2022 ರಂದು ಸೋಹ್ನಾ ಸಿಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ.” ಸೇಡಿನ ರಾಜಕೀಯದಲ್ಲಿ ತೊಡಗಬೇಡಿ. ಗಾಂಧಿಯವರ ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಿ ಎ ಎಂದು ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಭಾರತದಾದ್ಯಂತ ಸ್ವತಂತ್ರವಾಗಿ ಒಟ್ಟುಗೂಡುವ ಮತ್ತು ಚಲಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ ಎಂದು ಅದು ಹೇಳಿದೆ. “ಭಾರತ್ ಜೋಡೋ ಯಾತ್ರೆಯು ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ತರಲಿರುವ ಪಾದಯಾತ್ರೆ ಆಗಿದೆ ಎಂದು ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಸಹಿ ಮಾಡಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Covishield Vaccine: ಬೆಂಗಳೂರಲ್ಲಿ ಕೋವಿಶೀಲ್ಡ್ ಲಸಿಕೆ ನೋ ಸ್ಟಾಕ್: ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಜನರು ಪರದಾಟ

ರಾಹುಲ್ ಗಾಂಧಿಯವರು ಶನಿವಾರ ರಾಷ್ಟ್ರ ರಾಜಧಾನಿಯ ಪ್ರಮುಖ ಪ್ರದೇಶಗಳಲ್ಲಿ ಯಾತ್ರೆಯನ್ನು ನಡೆಸಿದರು. ಮಾರ್ಚ್ 7 ರಿಂದ 9 ರಾಜ್ಯಗಳಾದ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಹರಿಯಾಣದಾದ್ಯಂತ 3,000 ಕಿಲೋಮೀಟರ್‌ಗಳಷ್ಟು ದೂರವನ್ನು ಇದುವರೆಗೆ ಕ್ರಮಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Wed, 28 December 22

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್