ಅಮೃತ್ ಕಾಲ್ ವೇಳೆಗೆ ‘ಭಾರತ್ ಬಾಹ್ಯಾಕಾಶ ನಿಲ್ದಾಣ’ ಸಿದ್ಧ: ಇಸ್ರೋ ಅಧ್ಯಕ್ಷ ಸೋಮನಾಥ್

ಮುಂದಿನ 25 ವರ್ಷಗಳಲ್ಲಿ ಭಾರತೀಯ ವಿಜ್ಞಾನಿಗಳು ಚಂದ್ರನ ಮೇಲೆ ಇಳಿಯಲಿದ್ದಾರೆ. ವಿಜ್ಞಾನ ವಿದ್ಯಾರ್ಥಿಗಳು ಜ್ಞಾನ ಮತ್ತು ಸಾಮರ್ಥ್ಯವನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಕರೆ ನೀಡಿದ್ದಾರೆ.

ಅಮೃತ್ ಕಾಲ್ ವೇಳೆಗೆ ‘ಭಾರತ್ ಬಾಹ್ಯಾಕಾಶ ನಿಲ್ದಾಣ' ಸಿದ್ಧ: ಇಸ್ರೋ ಅಧ್ಯಕ್ಷ ಸೋಮನಾಥ್
ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್
Follow us
|

Updated on: Dec 23, 2023 | 11:15 AM

ಅಹಮದಾಬಾದ್, ಡಿಸೆಂಬರ್ 23: ಅಮೃತ್ ಕಾಲ್ ಸಮಯದ ವೇಳೆಗೆ ಭಾರತವು ತನ್ನದೇ ಆದ ‘ಭಾರತ್ ಬಾಹ್ಯಾಕಾಶ ನಿಲ್ದಾಣ’ವನ್ನು (Bharat Space Station) ಹೊಂದಲಿದೆ ಎಂದು ಇಸ್ರೋ (ISRO) ಅಧ್ಯಕ್ಷ ಎಸ್ ಸೋಮನಾಥ್ (S Somanath) ಹೇಳಿದ್ದಾರೆ. ಅಹಮದಾಬಾದ್‌ನ ಸೈನ್ಸ್ ಸಿಟಿಯಲ್ಲಿ ವಿಜ್ಞಾನ ಭಾರತಿ (ವಿಭಾ) ಮತ್ತು ಗುಜರಾತ್ ಸರ್ಕಾರದ ಜಂಟಿ ಆಶ್ರಯದಲ್ಲಿ ಶುಕ್ರವಾರ ನಡೆದ ಭಾರತೀಯ ವಿಜ್ಞಾನ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ಮುಂದಿನ 25 ವರ್ಷಗಳಲ್ಲಿ ಭಾರತೀಯ ವಿಜ್ಞಾನಿಗಳು ಚಂದ್ರನ ಮೇಲೆ ಇಳಿಯಲಿದ್ದಾರೆ. ವಿಜ್ಞಾನ ವಿದ್ಯಾರ್ಥಿಗಳು ಜ್ಞಾನ ಮತ್ತು ಸಾಮರ್ಥ್ಯವನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದ್ದಾರೆ.

ಸಂಶೋಧನೆಯು ಸಮಾಜದ ಕಲ್ಯಾಣಕ್ಕೆ ಬಳಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಶೈಕ್ಷಣಿಕ ಸಂಸ್ಥೆಗಳು ಮತ್ತು ಉದ್ಯಮಗಳ ನಡುವೆ ಸಮನ್ವಯ ಮತ್ತು ವಿನಿಮಯ ಅತ್ಯಗತ್ಯ ಎಂದು ಅವರು ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತದ ಗುರಿಯನ್ನು ಸಾಧಿಸುವಲ್ಲಿ ತಂತ್ರಜ್ಞಾನದ ಪಾತ್ರ ಬಹಳ ಮುಖ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಡಿಸೆಂಬರ್ 21ರಿಂದ ಆರಂಭವಾಗಿರುವ ಭಾರತೀಯ ವಿಜ್ಞಾನ ಸಮ್ಮೇಳನ, 24ರವರೆಗೆ ನಡೆಯಲಿದೆ. ಈ ಸಮ್ಮೇಳನದಲ್ಲಿ ದೇಶದ ಪ್ರಮುಖ ವಿಜ್ಞಾನಿಗಳು, ವಿದ್ಯಾರ್ಥಿಗಳು, ಸಂಶೋಧಕರು ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ: ಡಿಆರ್​ಡಿಒದಿಂದ 70 ಟನ್ ಕ್ಷಿಪಣಿ ವ್ಯವಸ್ಥೆ: ರಕ್ಷಣಾ ಬತ್ತಳಿಕೆಗೆ ಸೇರ್ಪಡೆಯಾಗಲಿದೆಯೇ ಅಗ್ನಿ-VI?

ಸದ್ಯ ಭಾರತದ ಬಳಿ 10 ಟನ್​ ವರೆಗೆ ಭಾರ ಸಾಗಿಸಬಲ್ಲ ರಾಕೆಟ್ ಇದೆ. 20 ರಿಂದ 1,215 ಟನ್‌ಗಳ ಭಾರವನ್ನು ಸಾಗಿಸಲು ಸಾಧ್ಯವಾಗುವಂಥ ಹೊಸ ರಾಕೆಟ್​ ಅನ್ನು ಇಸ್ರೋ ಅಭಿವೃದ್ಧಿಪಡಿಸುತ್ತಿದೆ ಎಂದೂ ಸೋಮನಾಥ್ ಅವರು ಮಾಹಿತಿ ನೀಡಿದ್ದಾರೆ.

ಸುಧಾರಿತ ತಂತ್ರಜ್ಞಾನವನ್ನು ನಿರ್ಮಿಸಿ, 2035 ರ ವೇಳೆಗೆ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಇಸ್ರೋ ಯೋಜನೆ ರೂಪಿಸಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ