ಭಾರತ ಭಯೋತ್ಪಾದನೆ ಮುಂದೆ ಮಣಿಯುವುದಿಲ್ಲ; ಪಹಲ್ಗಾಮ್ ದಾಳಿಯ ಸಂತ್ರಸ್ತರ ಭೇಟಿ ಬಳಿಕ ಅಮಿತ್ ಶಾ
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಉಗ್ರರ ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿರುವ ಬೈಸರನ್ ಕಣಿವೆಗೆ ಭೇಟಿ ನೀಡುತ್ತಿದ್ದ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 26 ಜನರ ಮೃತದೇಹಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಪುಷ್ಪಗುಚ್ಛ ಅರ್ಪಿಸಿದರು. ನಿನ್ನೆ ಈ ದಾಳಿಯ ವೇಳೆ ಅಲ್ಲಿದ್ದವರನ್ನು ಭೇಟಿಯಾದ ಅಮಿತ್ ಶಾ, ಈ ಹೇಯ ಕೃತ್ಯ ಮಾಡಿದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಶ್ರೀನಗರ, ಏಪ್ರಿಲ್ 23: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಬುಧವಾರ) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ (Pahalgam Terrorist Attack) ಮೃತಪಟ್ಟ 26 ಜನರ ಮೃತದೇಹಗಳಿಗೆ ಪುಷ್ಪಗುಚ್ಛ ಅರ್ಪಿಸಿದ್ದಾರೆ. ಈ ಹೇಯ ಕೃತ್ಯದ ಅಪರಾಧಿಗಳನ್ನು ಶಿಕ್ಷಿಸುವುದಾಗಿ ಸಂತ್ರಸ್ತರಿಗೆ ಭರವಸೆ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿನ ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರ ಶವಪೆಟ್ಟಿಗೆಯ ಮೇಲೆ ಅಮಿತ್ ಶಾ (Amit Shah) ಪುಷ್ಪಗುಚ್ಛಗಳನ್ನು ಇರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಸಂತ್ರಸ್ತರಿಗೆ ಗೌರವ ಸಲ್ಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಭಾರವಾದ ಹೃದಯದಿಂದ ಅಂತಿಮ ನಮನ ಸಲ್ಲಿಸಿದೆ. ಭಾರತ ದೇಶವೆಂದೂ ಭಯೋತ್ಪಾದನೆಗೆ ಮಣಿಯುವುದಿಲ್ಲ. ಈ ಭೀಕರ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ಅಮಿತ್ ಶಾ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.
With a heavy heart, paid last respects to the deceased of the Pahalgam terror attack. Bharat will not bend to terror. The culprits of this dastardly terror attack will not be spared. pic.twitter.com/bFxb2nDT4H
— Amit Shah (@AmitShah) April 23, 2025
ಇದನ್ನೂ ಓದಿ: ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ
ಭಾರತೀಯ ಸೇನೆ, ಸಿಆರ್‌ಪಿಎಫ್ ಮತ್ತು ಪೊಲೀಸರು ಸೇರಿದಂತೆ ಭದ್ರತಾ ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಅಮಿತ್ ಶಾ ವಹಿಸಿದ್ದರು. “ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರೀನಗರದಲ್ಲಿ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ” ಎಂದು ವಕ್ತಾರರು ತಿಳಿಸಿದ್ದಾರೆ.
ANI muted the audio of the families of the victim soon as they began asking questions & accountability from Amit Shah.
The worst thing you can do is to censor the voice of a grieving family just to protect the image of your masters.
One word for ANI? 🤢 pic.twitter.com/0GzrNHYPKQ
— Roshan Rai (@RoshanKrRaii) April 23, 2025
ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ಪ್ರಸಿದ್ಧ ಹುಲ್ಲುಗಾವಲಿನಲ್ಲಿ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ಗುಂಡು ಹಾರಿಸಿದರು. ಈ ವೇಳೆ ಸಾವನ್ನಪ್ಪಿದವರಲ್ಲಿ ಬಹುತೇಕರು ಪ್ರವಾಸಿಗರು. ಇದರಿಂದ 26 ಜನರು ಸಾವನ್ನಪ್ಪಿದರು. 2019ರ ಪುಲ್ವಾಮಾ ದಾಳಿಯ ನಂತರ ಬೈಸರನ್ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಸತ್ತವರಲ್ಲಿ ಇಬ್ಬರು ವಿದೇಶಿಯರು ಮತ್ತು ಇಬ್ಬರು ಸ್ಥಳೀಯರು ಕೂಡ ಸೇರಿದ್ದಾರೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ