ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವಿಸ್, ಅರುಣ್ ಫೆರೇರಾಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

ಬಾಂಬೆ ಹೈಕೋರ್ಟ್ ಈ ಹಿಂದೆ ಡಿಸೆಂಬರ್ 2021 ರಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಸುಪ್ರೀಂ ಮೆಟ್ಟಿಲೇರಿದ್ದರು. ಈ ಕಾರ್ಯಕರ್ತರು ಐದು ವರ್ಷಗಳ ಕಾಲ ಬಂಧನದಲ್ಲಿದ್ದರು ಎಂಬ ಅಂಶವನ್ನು ಸುಪ್ರೀಂಕೋರ್ಟ್ ಜಾಮೀನು ನೀಡುವ ವೇಳೆ ಉಲ್ಲೇಖಿಸಿದೆ.

ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವಿಸ್, ಅರುಣ್ ಫೆರೇರಾಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on: Jul 28, 2023 | 3:14 PM

ದೆಹಲಿ ಜುಲೈ 28: ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ (Bhima Koregaon Elgar Parishad case) ಸಾಮಾಜಿಕ ಕಾರ್ಯಕರ್ತ, ಎಲ್ಗಾರ್ ಪರಿಷತ್ ಸದಸ್ಯರಾದ ವೆರ್ನಾನ್ ಗೊನ್ಸಾಲ್ವಿಸ್ (Vernon Gonsalves) ಮತ್ತು ಅರುಣ್ ಫೆರೇರಾ (Arun Ferreira) ಅವರಿಗೆ ಸುಪ್ರೀಂಕೋರ್ಟ್ (Supreme Court) ಶುಕ್ರುವಾರ ಜಾಮೀನು ನೀಡಿದೆ. 2018ರ ಆಗಸ್ಟ್‌ನಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಕಟ್ಟುನಿಟ್ಟಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA) ಅಡಿಯಲ್ಲಿ ಈ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

ಬಾಂಬೆ ಹೈಕೋರ್ಟ್ ಈ ಹಿಂದೆ ಡಿಸೆಂಬರ್ 2021 ರಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಸುಪ್ರೀಂ ಮೆಟ್ಟಿಲೇರಿದ್ದರು. ಈ ಕಾರ್ಯಕರ್ತರು ಐದು ವರ್ಷಗಳ ಕಾಲ ಬಂಧನದಲ್ಲಿದ್ದರು ಎಂಬ ಅಂಶವನ್ನು ಸುಪ್ರೀಂಕೋರ್ಟ್ ಜಾಮೀನು ನೀಡುವ ವೇಳೆ ಉಲ್ಲೇಖಿಸಿದೆ.

ಆದಾಗ್ಯೂ, ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಗೊನ್ಸಾಲ್ವೆಸ್ ಮತ್ತು ಫೆರೇರಾ ಮಹಾರಾಷ್ಟ್ರವನ್ನು ಬಿಟ್ಟು ಹೋಗಬಾರದು. ಅದೇ ವೇಳೆ ತಮ್ಮ ಪಾಸ್‌ಪೋರ್ಟ್‌ಗಳನ್ನು ಪೊಲೀಸರಿಗೆ ಒಪ್ಪಿಸಬೇಕು ಎಂದು ಹೇಳಿದ್ದಾರೆ.

ಇಬ್ಬರು ಕಾರ್ಯಕರ್ತರು ತಲಾ ಒಂದು ಮೊಬೈಲ್ ಬಳಸಬೇಕು.ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಅವರ ವಿಳಾಸಗಳನ್ನು ತಿಳಿಸುವಂತೆ ಅದು ನಿರ್ದೇಶಿಸಿದೆ.  ಆಗಸ್ಟ್ 2022 ರಲ್ಲಿ, ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ, ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣದ ಇನ್ನೊಬ್ಬ ಆರೋಪಿ ಡಾ.ಪಿ.ವರವರ ರಾವ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು.

ಏನಿದು ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣ?

ಈ ಪ್ರಕರಣವು 2017 ರ ಡಿಸೆಂಬರ್ 31 ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದೆ. ಪುಣೆ ಪೊಲೀಸರ ಪ್ರಕಾರ ಮಾವೋವಾದಿಗಳು ಇದಕ್ಕೆ ಹಣ ನೀಡಿದ್ದಾರೆ. ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಸೇರಿದಂತೆ 14 ಮಂದಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಆರೋಪಿಸಿದೆ.

ಈ ಪ್ರಕರಣವು ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದಕ ಭಾಷಣಗಳಿಗೆ ಸಂಬಂಧಿಸಿದ್ದಾಗಿದೆ. ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಇದೇ ಭಾಷಣ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ

ಎಲ್ಗಾರ್ ಪರಿಷತ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮುಂಬೈ, ನಾಗ್ಪುರ ಮತ್ತು ದೆಹಲಿಯಿಂದ ಜೂನ್ 2018 ರಲ್ಲಿ ನಿಕಟ ಮಾವೋವಾದಿ ಸಂಪರ್ಕವನ್ನು ಹೊಂದಿರುವ ಐದು ಜನರನ್ನು ಬಂಧಿಸಲಾಯಿತು. ಮಾವೋವಾದಿ ನಂಟು ಹೊಂದಿರುವವರು ಈ ಸಮಾವೇಶವನ್ನು ಆಯೋಜಿಸಿದ್ದರು ಎಂದು ಪುಣೆ ಪೊಲೀಸರು ಹೇಳಿದ್ದು, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಹಿಸಿಕೊಂಡಿತ್ತು.

ಜೆಸ್ಯೂಟ್ ಪಾದ್ರಿ ಮತ್ತು ಸ್ಥಳೀಯ ಸಮುದಾಯದ ಕಾರ್ಯಕರ್ತ, ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಎಂದು ಆರೋಪಿಸಲಾದ ಅತ್ಯಂತ ಹಿರಿಯ ಭಾರತೀಯ ಪ್ರಜೆ ಸ್ಟಾನ್ ಸ್ವಾಮಿಯನ್ನೂ ಈ ಪ್ರಕರಣದಲ್ಲಿ ಫೆರೇರಾ, ಗೊನ್ಸಾಲ್ವಿಸ್ ಮತ್ತು ವರವರ ರಾವ್ ಅವರನ್ನು ಅಕ್ಟೋಬರ್ ಮತ್ತು ನವೆಂಬರ್ 2018 ರ ನಡುವೆ ಬಂಧಿಸಿ ಪುಣೆಗೆ ಕರೆದೊಯ್ಯಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್