AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಹಸು ಡಿಕ್ಕಿ, ರೈಲಿನ ಮುಂಭಾಗಕ್ಕೆ ಹಾನಿ

ಭೋಪಾಲ್-ದೆಹಲಿ ವಂದೇ ಭಾರತ್​ ಎಕ್ಸ್​ಪ್ರೆಸ್​(Vande Bharat Express)ಗೆ ಹಸು ಡಿಕ್ಕಿ ಹೊಡೆದಿದ್ದು, ರೈಲಿನ ಮುಂಭಾಗಕ್ಕೆ ಹಾನಿಯಂಟಾಗಿದ್ದು, ಮುಗ್ಧ ಹಸು ಕೂಡ ಪ್ರಾಣಬಿಟ್ಟಿದೆ.

Vande Bharat Express: ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಹಸು ಡಿಕ್ಕಿ, ರೈಲಿನ ಮುಂಭಾಗಕ್ಕೆ ಹಾನಿ
ವಂದೇ ಭಾರತ್ ರೈಲು
ನಯನಾ ರಾಜೀವ್
|

Updated on: Apr 28, 2023 | 10:20 AM

Share

ಭೋಪಾಲ್-ದೆಹಲಿ ವಂದೇ ಭಾರತ್​ ಎಕ್ಸ್​ಪ್ರೆಸ್​(Vande Bharat Express)ಗೆ ಹಸು ಡಿಕ್ಕಿ ಹೊಡೆದಿದ್ದು, ರೈಲಿನ ಮುಂಭಾಗಕ್ಕೆ ಹಾನಿಯಂಟಾಗಿದ್ದು, ಮುಗ್ಧ ಹಸು ಕೂಡ ಪ್ರಾಣಬಿಟ್ಟಿದೆ. ಗ್ವಾಲಿಯರ್​ನಲ್ಲಿ ಈ ಘಟನೆ ನಡೆದಿದೆ, ದಿಹಜರತ್ ನಿಜಾಮುದ್ದೀನ್-ರಾಣಿ ಕಮಲಾಪತಿ ವಂದೇ ಭಾರತ್ ರೈಲು ಸಂಜೆ 6.15ರ ಸುಮಾರಿಗೆ ಗ್ವಾಲಿಯರ್​ನ ದಬ್ರಾ ಕಡೆಗೆ ರೈಲು ಪ್ರಯಾಣಿಸುತ್ತಿದ್ದಾಗ, ಏಕಾಏಕಿ ಹಸು ರೈಲಿನ ಎದುರು ಬಂದಿತ್ತು. ರೈಲನ್ನು 15 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಹಾನಿಗೊಳಗಾಗಿದ್ದ ರೈಲಿನ ಮುಂಭಾಗವನ್ನು ಸರಿಪಡಿಸಿದ ಬಳಿಕ ರೈಲು ಸಂಚಾರ ಪುನರಾರಂಭಗೊಂಡಿದೆ.

ಏಪ್ರಿಲ್ 1ರಂದು ಪ್ರಧಾನಿ ನರೇಂದ್ರ ಮೋದಿ ಈ ಭಾಗದಲ್ಲಿ ಸೆಮಿ ಹೈಸ್ಪೀಡ್​ ರೈಲಿಗೆ ಚಾಲನೆ ನೀಡಿದ್ದರು. ಈ ರೈಲು ಭೋಪಾಲ್ ಹಾಗೂ ದೆಹಲಿಯ ನಡುವೆ ಸಂಚರಿಸುತ್ತದೆ.

ಇತ್ತೀಚೆಗಷ್ಟೇ ರಾಜಸ್ಥಾನದಲ್ಲಿ ವಂದೇ ಭಾರತ್ ರೈಲು ಎರಡು ಜೀವಗಳನ್ನು ಬಲಿ ಪಡೆದಿದೆ. ಅಲ್ವಾರ್​ನಲ್ಲಿ ಹಸುವಿಗೆ ಒಂದೇ ಭಾರತ್ ರೈಲು ಡಿಕ್ಕಿ ಹೊಡೆದು ರೈಲ್ವೆ ಹಳಿಯಿಂದ ಸ್ವಲ್ಪ ದೂರದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವೃದ್ಧರೊಬ್ಬರ ಮೇಲೆ ಆ ಹಸು ಬಿದ್ದು ಇಬ್ಬರೂ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು.

ಮತ್ತಷ್ಟು ಓದಿ: ಎಂಥಾ ಗ್ರಹಚಾರ ನೋಡಿ, ವಂದೇ ಭಾರತ್ ರೈಲು ಡಿಕ್ಕಿ ಹೊಡೆದಿದ್ದು ಹಸುವಿಗೆ ಆದರೆ ಮೃತಪಟ್ಟಿದ್ದು ಇಬ್ಬರು

ರಾಜಸ್ಥಾನದ ಅಲ್ವಾರ್​ನ ಅರಾವಳಿ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಶಿವದಯಾಳ್ ಶರ್ಮಾ ಎಂದು ಗುರುತಿಸಲಾಗಿದೆ. ಇವರು 23 ವರ್ಷಗಳ ಹಿಂದೆ ಭಾರತೀಯ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಹುದ್ದೆಯಿಂದ ನಿವೃತ್ತರಾಗಿದ್ದರು.

ಶಿವದಯಾಳ್ ಸಂಬಂಧಿಕರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 8.30ರ ಸುಮಾರಿಗೆ ಹೊರಟಿದ್ದ ವಂದೇ ಭಾರತ್ ರೈಲಿಗೆ ಹಸುವೊಂದು ಅಡ್ಡ ಬಂದಿತ್ತು, ರಭಸಕ್ಕೆ ಹಸುವಿನ ದೇಹ ಒಂದು ಭಾಗವು 30 ಮೀಟರ್ ದೂರದಲ್ಲಿರುವ ಹಳಿಯ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಶಿವ ದಯಾಳ್ ಅವರ ಮೇಲೆ ಬಿದ್ದಿದೆ, ಆಗ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!