Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತೆಯ ಸಾಕು ನಾಯಿಯನ್ನು ಕಾಪಾಡಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟ ಯುವಕ

ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತೆಯ ಸಾಕು ನಾಯಿಯನ್ನು ಕಾಪಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ನಾಯಿ ಸುರಕ್ಷಿತವಾಗಿ ಈಜಿ ದಡ ಸೇರಿತು ಆದರೆ ಅದನ್ನು ರಕ್ಷಿಸಲು ಹೋಗಿದ್ದ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು.

ಸ್ನೇಹಿತೆಯ ಸಾಕು ನಾಯಿಯನ್ನು ಕಾಪಾಡಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟ ಯುವಕ
Follow us
ನಯನಾ ರಾಜೀವ್
|

Updated on: Jan 05, 2024 | 3:01 PM

ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತೆಯ ಸಾಕು ನಾಯಿಯನ್ನು ಕಾಪಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ನಾಯಿ ಸುರಕ್ಷಿತವಾಗಿ ಈಜಿ ದಡ ಸೇರಿತು ಆದರೆ ಅದನ್ನು ರಕ್ಷಿಸಲು ಹೋಗಿದ್ದ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು.

ಯುವಕ ಸರಳ್​ ನಿಗಮ್ ಎನ್​ಐಟಿ ಭೋಪಾಲ್​ನಲ್ಲಿ ಬಿ.ಟೆಕ್ ಪಧವೀಧರನಾಗಿದ್ದಾನೆ. ತಂದೆ ತಾಯಿಗೆ ನಿಗಮ್ ಒಬ್ಬನೇ ಮಗ. MANITನಿಂದ ಎಂಜಿನಿಯರಿಂಗ್ ಪದವಿ ಪಡೆದ ಬಳಿಕ ಯುಪಿಎಸ್​ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಎನ್ನಲಾಗಿದೆ. ಸರಳ್ ಇಬ್ಬರು ಮಹಿಳಾ ಸ್ನೇಹಿತರ ಜತೆ ಬೆಳಗ್ಗೆ 7.30ರ ಸುಮಾರಿಗೆ ಕೆರ್ವಾ ಅಣೆಕಟ್ಟು ಪ್ರದೇಶದ ಜಂಗಲ್ ಕ್ಯಾಂಪ್​ಗೆ ಹೋಗಿದ್ದರು. ಆ ಮೂವರ ಜತೆಗೆ ನಾಯಿಯೂ ಕೂಡ ಬಂದಿತ್ತು.

ಸುಮಾರು ಒಂದು ಗಂಟೆಯ ನಂತರ ಬೆಳಗ್ಗೆ 8:30 ರ ಸುಮಾರಿಗೆ, ಮೂವರು ಜಲಮೂಲದ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ನಾಯಿಯು ಆಕಸ್ಮಿಕವಾಗಿ ನೀರಿಗೆ ಬಿದ್ದಿತು. ನಾಯಿಯನ್ನು ರಕ್ಷಿಸಲು ಗೆಳೆಯರ ಗುಂಪು ಪರಸ್ಪರ ಕೈ ಹಿಡಿದು ನೀರಿಗೆ ಹಾರಿದ್ದಾರೆ.

ಮತ್ತಷ್ಟು ಓದಿ: ನೆಲಮಂಗಲ: ಹಬ್ಬದ ದಿನವೇ ಈಜಲು ಹೋಗಿದ್ದ ಯುವಕ, ನೀರಿನಲ್ಲಿ ಮುಳುಗಿ ಸಾವು

ಹುಡುಗಿಯರು ನೀರಿನಿಂದ ಹೊರಬರುವಲ್ಲಿ ಯಶಸ್ವಿಯಾದರು ಆದರೆ ಬಲವಾದ ಪ್ರವಾಹದಿಂದ ಸರಳ್ ಆಳವಾದ ನೀರಿನಲ್ಲಿ ಮುಳುಗಿದ್ದಾನೆ. ನಂತರ ಯುವತಿಯರು ಓಡಿ ಹೋಗಿ ಸಹಾಯಕ್ಕಾಗಿ ಕೂಗಿದ್ದಾರೆ,ಕಿರುಚಾಟವನ್ನು ಕೇಳಿದ ಜಂಗಲ್ ಕ್ಯಾಂಪ್‌ನ ವಾಚ್‌ಮನ್ ದಡಕ್ಕೆ ಓಡಿ ಬಂದು ರಾತಿಬಾದ್ ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಸರಳ್​ನ ಸುಳಿವು ಕಾಣಿಸಲಿಲ್ಲ, ಒಂದು ಗಂಟೆಯ ನಂತರ ಆತನ ಶವ ಪತ್ತೆಯಾಗಿದೆ. 10-15 ಅಡಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಸ್ನೇಹಿತೆಯರ ಪೊಲೀಸರು ಮನೆಗೆ ಕಳುಹಿಸಿದ್ದಾರೆ. ಅವರ ಹೇಳಿಕೆಗಳನ್ನು ಇನ್ನೂ ದಾಖಲಿಸಿಕೊಳ್ಳಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ