ಐಷಾರಾಮಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಭೋಪಾಲ್​ನಲ್ಲಿ ಶಾಕಿಂಗ್ ಘಟನೆಯೊಂದು ನಡೆದಿದೆ. ಐಷಾರಾಮಿ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಬಳಿಕ ಆಕೆಗೆ ಬೆದರಿಕೆ ಹಾಕಿ, ಥಳಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿಗೆ ಆದೇಶಿಸಲಾಗಿದೆ. 4 ಪ್ರತ್ಯೇಕ ವಾಹನಗಳಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯವನ್ನು ಪರಿಶೀಲಿಸಲು ಅಧಿಕಾರಿಗಳು ನಾಲ್ವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

ಐಷಾರಾಮಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
Child Harassment
Image Credit source: iStock

Updated on: Feb 13, 2026 | 5:29 PM

ಭೋಪಾಲ್, ಫೆಬ್ರವರಿ 13: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ (Bhopal) ಪಿಯುಸಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಥಾರ್ ಎಸ್‌ಯುವಿಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣವು ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆಯನ್ನೂ ಒಳಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಮುಖ ಆರೋಪಿಯನ್ನು ಫೆಬ್ರವರಿ 3ರಂದು ವಶಕ್ಕೆ ಪಡೆಯಲಾಯಿತು. ಆತನನ್ನು ಜೈಲಿನಲ್ಲಿ ಇರಿಸಲಾಗಿದೆ. ನಗರದಲ್ಲಿ ಜಿಮ್ ನಡೆಸುತ್ತಿರುವ ಅವನ ಗೆಳೆಯ ಮೇಜ್ ಖಾನ್​ನನ್ನು ಫೆಬ್ರವರಿ 8ರಂದು ಬಂಧಿಸಲಾಯಿತು. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಪೊಲೀಸ್ ಆಯುಕ್ತರು ವಿವರವಾದ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ. ಎಸಿಪಿ ಅಂಕಿತಾ ಖತ್ರಕರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ.

ಇದನ್ನೂ ಓದಿ: Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ

4 ಪ್ರತ್ಯೇಕ ಕಾರುಗಳಲ್ಲಿ ವಿವಿಧ ಸ್ಥಳಗಳಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ ಪ್ರಮುಖ ಆರೋಪಿಗಳು ಆ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ತನ್ನ ಐಫೋನ್‌ನಲ್ಲಿ ಆತ ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದಾನೆ. ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಲು ಈ ವೀಡಿಯೊವನ್ನು ಬಳಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆ ವಿಡಿಯೋವನ್ನು ಆನ್​​ಲೈನ್​ನಲ್ಲಿ ಹಾಕಬಾರದು ಎಂದಾದರೆ 40,000 ರೂ.ಗಳನ್ನು ನೀಡಲು ಡಿಮ್ಯಾಂಡ್ ಮಾಡಿದ್ದಾರೆ.

ಅತ್ಯಾಚಾರಕ್ಕೆ ಬಳಸಲಾದ ಥಾರ್ ಎಸ್‌ಯುವಿಯನ್ನು ಸೆಹೋರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮುಚ್ಚಿಡಲಾಗಿತ್ತು. ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ವಿಡಿಯೋ ಇರುವ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ: ಅಪ್ರಾಪ್ತ ಹುಡುಗರಿಂದ ದೆಹಲಿಯಲ್ಲಿ 17 ವರ್ಷದ ಬಾಲಕನ ಕಗ್ಗೊಲೆ

ತನಿಖೆಯ ಸಮಯದಲ್ಲಿ ಮೇಜ್ ಖಾನ್ ಮತ್ತು ಕೊಹೆಫಿಜಾ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಹೆಡ್ ಕಾನ್‌ಸ್ಟೆಬಲ್ ನಡುವಿನ ಸಂಬಂಧವನ್ನು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪ ಅಧಿಕಾರಿಯ ಮೇಲಿದೆ. ಹೀಗಾಗಿ ಹೆಡ್ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us