ಸ್ನ್ಯಾಪ್​ಚಾಟ್ ಬಳಸುತ್ತಿದ್ದ ಚಾಲಕ, ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು, ಇಬ್ಬರು ಸಾವು

ಮೊಬೈಲ್​ ನೋಡುತ್ತಾ ಕಾರಿನ ನಿಯಂತ್ರಣ ಕಳೆದುಕೊಂಡು ನದಿಗೆ ಹಾರಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಓರ್ವ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರನ್ನು ಕಾರು ಚಲಾಯಿಸುತ್ತಿದ್ದ ವಿನೀತ್ (22) ಮತ್ತು ಪಲಾಶ್ ಗಾಯಕ್ವಾಡ್ (22) ಎಂದು ಗುರುತಿಸಲಾಗಿದೆ. ಪಿಯೂಷ್ ಎಂಬುವವರು ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ನ್ಯಾಪ್​ಚಾಟ್ ಬಳಸುತ್ತಿದ್ದ ಚಾಲಕ, ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು, ಇಬ್ಬರು ಸಾವು
ಕಾರು Image Credit source: India Today
Follow us
ನಯನಾ ರಾಜೀವ್
|

Updated on: Jan 17, 2025 | 8:46 AM

ಕಾರು ಚಲಾಯಿಸುವ ಸಂದರ್ಭದಲ್ಲಿ ಮೊಬೈಲ್​ ಬಳಕೆ ಮಾಡುವುದರಿಂದ ಜೀವಕ್ಕೇ ಕುತ್ತುಬರಬಹುದು. ಕೆಲವರು ವಿಡಿಯೋ ಕಾಲ್​ನಲ್ಲಿ ಮಾತನಾಡುತ್ತಿರುತ್ತಾರೆ, ಇನ್ನೂ ಕೆಲವರು ವಾಟ್ಸಾಪ್​ನಲ್ಲಿ ಚಾಟ್ ಮಾಡುತ್ತಾ ಹೋಗುತ್ತಾರೆ. ಇದರಿಂದ ಚಾಲಕನ ಪ್ರಾಣವೇ ಹೋಗಬಹುದು. ಭೋಪಾಲ್​ನ ಕೋಲಾರ ಪ್ರದೇಶದಲ್ಲಿ ಘಟನೆ ನಡೆದಿದೆ. ಚಾಲಕ ಸ್ನ್ಯಾಪ್​ಚಾಟ್​ ಮಾಡುತ್ತಾ ಹೋಗಿ ಕಾರು ಸಮೇತ ನದಿಗೆ ಹಾರಿದ್ದಾರೆ.

ಆರು ಲೇನ್ ಸೇತುವೆಯ ಮೇಲೆ ತಿರುವಿನಲ್ಲಿ ನ್ಯಾವಿಗೇಟ್ ಮಾಡುವಾಗ ವಾಹನದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಮೃತರನ್ನು ಕಾರು ಚಲಾಯಿಸುತ್ತಿದ್ದ ವಿನೀತ್ (22) ಮತ್ತು ಪಲಾಶ್ ಗಾಯಕ್ವಾಡ್ (22) ಎಂದು ಗುರುತಿಸಲಾಗಿದೆ. ಪಿಯೂಷ್ ಎಂಬುವವರು ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸ್ ವರದಿಗಳ ಪ್ರಕಾರ, ಅಪಘಾತದ ಸಮಯದಲ್ಲಿ ವಿನೀತ್ ಹೆಚ್ಚಿನ ವೇಗದಲ್ಲಿ ಇದ್ದಿದ್ದಷ್ಟೇ ಅಲ್ಲದೆ ಸ್ನ್ಯಾಪ್‌ಚಾಟ್ ಬಳಸುತ್ತಿದ್ದ, ಸೇತುವೆಯ ಮೇಲೆ ತಿರುವು ಪಡೆಯಲು ಪ್ರಯತ್ನಿಸುವಾಗ ಅವರು ವಾಹನದ ನಿಯಂತ್ರಣ ಕಳೆದುಕೊಂಡಿದ್ದ. ಇದರಿಂದಾಗಿ ಕಾರು ತಡೆಗೋಡೆಯಿಂದ ಡಿಕ್ಕಿ ಹೊಡೆದು ಕೆಳಗಿನ ನದಿಗೆ ಬಿದ್ದಿತ್ತು.

ಮತ್ತಷ್ಟು ಓದಿ: Kerala: ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿ, ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದ ಕಾರು

ಡಿಕ್ಕಿ ಹೊಡೆದ ನಂತರ ಕಾರಿನ ಬಾಗಿಲು ಲಾಕ್ ಆಗಿದ್ದು, ಮೂವರು ಒಳಗಡೆ ಸಿಲುಕಿದ್ದಾರೆ. ಈ ವೇಳೆ ಪಿಯೂಷ್ ಕಿಟಕಿ ಒಡೆದು ಪರಾರಿಯಾಗಿದ್ದು, ಗಾಯಗೊಂಡಿದ್ದಾರೆ. ಕೂಡಲೇ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರಿನ ಗಾಜುಗಳನ್ನು ಒಡೆದು ವಿನೀತ್ ಮತ್ತು ಪಲಾಶ್ ಅವರ ಮೃತದೇಹಗಳನ್ನು ಹೊರತೆಗೆಯಲು ಪ್ರಯತ್ನಿಸಿದರು. ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದು, ಅವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪಿಯೂಷ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯನ್ನು ಪೂರ್ತಿಗೊಳಿಸಲ್ಲ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ: ವಿಜಯೇಂದ್ರ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುರ್ಜೆವಾಲಾ ರಾಜ್ಯದಲ್ಲಿರುವಾಗಲೇ ನಡೆದಿರುವ ಬೆಳವಣಿಗೆ ಕುತೂಹಲಕಾರಿ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಸುತ್ತೂರು ಮಠದಲ್ಲೇ ವಿಜಯೇಂದ್ರ ಮತ್ತು ಸಂಗಡಿಗರಿಗೆ ಉಪಹಾರ
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?