ಧ್ವನಿ ಬದಲಿಸುವ ಆ್ಯಪ್ ಮೂಲಕ ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ
ಶಿಕ್ಷಕಿಯಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಅತ್ಯಾಚಾರವೆಸಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಆ್ಯಪ್ ಮೂಲಕ ಮಹಿಳೆಯರಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರ ಬಳಿ ಮಾತನಾಡುತ್ತಿದ್ದ.
ವ್ಯಕ್ತಿಯೊಬ್ಬ ಆ್ಯಪ್ ಮೂಲಕ ಧ್ವನಿ ಬದಲಾಯಿಸಿಕೊಂಡು ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳಾ ಪ್ರೊಫೆಸರ್ನಂತೆ ಕರೆ ಮಾಡಿ ವಿದ್ಯಾರ್ಥಿ ವೇತನ ಕೊಡಿಸುತ್ತೇನೆಂದು ಹೇಳಿ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾನೆ.
ಈ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇದುವರೆಗೆ ನಾಲ್ಕು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಇತರ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೊ ಕಾಯ್ದೆಯನ್ನೂ ಹಾಕಲಾಗಿದೆ. ಮೇ 24 ರಂದು ಪ್ರಜಾಪತಿಯ ರಿಮಾಂಡ್ ಮುಗಿದ ನಂತರ, ಪೊಲೀಸರು ಮತ್ತೆ ಆತನನ್ನು ಕಸ್ಟಡಿಗೆ ಕೋರಿದ್ದಾರೆ.
ಎಸ್ಸಿಎಸ್ಟಿ ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ಬಾಲಕಿಯರಿಗೆ ಆರೋಪಿ ಬೃಜೇಶ್ ಪ್ರಜಾಪತಿ ಬಲೆ ಬೀಸುತ್ತಿದ್ದ ಎಂದು ಹೇಳಲಾಗಿದೆ. ಧ್ವನಿ ಬದಲಾವಣೆ ಆ್ಯಪ್ ಬಳಸಿಕೊಂಡು ಅರ್ಚನಾ ಮೇಡಂ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಸ್ಕಾಲರ್ಶಿಪ್ ಅರ್ಜಿಗಳ ಸಮಸ್ಯೆ ಬಗೆಹರಿಸುವ ಸಲುವಾಗಿ ತನ್ನನ್ನು ಭೇಟಿಯಾಗುವಂತೆ ಹೇಳುತ್ತಿದ್ದ, ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಅವರ ಮೊಬೈಲ್ಗಳನ್ನು ಕಸಿದುಕೊಂಡು ನೆರವಿಗಾಗಿ ಯಾರಿಗೂ ಕರೆ ಮಾಡದಂತೆ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಮತ್ತಷ್ಟು ಓದಿ: ಮಂಡ್ಯ: ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕನಿಂದ ಮತಾಂತರಕ್ಕೆ ಒತ್ತಾಯ
ಆರೋಪಿಯಿಂದ 16 ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ, ಕೇವಲ ನಾಲ್ಕು ಮಂದಿಯಿಂದ ಮಾತ್ರ ಅಧಿಕೃತ ದೂರು ಬಂದಿದೆ. ನಿರುದ್ಯೋಗಿಯಾಗಿರುವ ಪ್ರಜಾಪತಿ ಈ ದಂಧೆ ಈ ವರ್ಷದ ಏಪ್ರಿಲ್ನಿಂದ ಆರಂಭಿಸಿದ್ದಾನೆ. ಈತನ ವಿರುದ್ಧ ದೂರು ನೀಡಲು ವಿದ್ಯಾರ್ಥಿನಿಯರು ಹೆದರಿದ್ದರು. ಮೇ 16ರಂದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಧೈರ್ಯದಿಂದ ಮಜೂಲಿ ಠಾಣೆಗೆ ಬಂದು ದೂರು ದಾಖಲಿಸಿದ್ದಳು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ