ಹೆಣ್ಣುಮಕ್ಕಳ ಹೆತ್ತಿದ್ದಕ್ಕೆ ನಿತ್ಯ ಚಿತ್ರಹಿಂಸೆ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಗಂಡು ಮಗು ಹೆರಲಿಲ್ಲ ಎನ್ನುವ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದರೆ, ಮೂರನೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಸಾವು
Follow us
ನಯನಾ ರಾಜೀವ್
|

Updated on: Mar 27, 2024 | 11:30 AM

ಗಂಡು ಮಗು ಹೆರಲಿಲ್ಲ ಎನ್ನುವ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದರೆ, ಮೂರನೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಆತ್ಮಹತ್ಯೆಗೂ ಮುನ್ನ ಮಹಿಳೆ ತನ್ನ ಸಹೋದರಿನಿಗೆ ವಾಯ್ಸ್​ ಮೆಸೇಜ್ ಕಳುಹಿಸಿದ್ದಳು. ತಾನು ಗಂಡು ಮಗು ಹೆತ್ತಿಲ್ಲ ಎನ್ನುವ ಕಾರಣಕ್ಕೆ ಅತ್ತೆಯ ಮನೆಯಲ್ಲಿ ಎಲ್ಲರೂ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ್ದಳು. ಮಹಿಳೆ ಹಾಗೂ ಇಬ್ಬರು ಪುತ್ರಿಯರು ಸಾವನ್ನಪ್ಪಿದ್ದು, ಅಮಾಯಕ ಮಗಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಜತ್ ಯಾದವ್ ಅವರ ಪತ್ನಿ 28 ವರ್ಷದ ಸಂಗೀತಾ ಯಾದವ್ ಅವರು ರೋಡಿಯಾ ಗ್ರಾಮದ ನಿವಾಸಿಯಾಗಿದ್ದರು. ಅವರು ತಮ್ಮ 5 ವರ್ಷದ ಮಗಳು ಆರಾಧ್ಯ ಮತ್ತು ಎರಡೂವರೆ ವರ್ಷದ ಸೃಷ್ಟಿಯನ್ನು ಕಳೆದುಕೊಂಡಿದ್ದಾರೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರು; ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ನಂಬಿಸಿ ಹಣ ಪಡೆದು ವಂಚನೆ, ದೂರು ದಾಖಲು

ಸಂಗೀತಾ ಯಾದವ್ ತಡರಾತ್ರಿ ಅಣ್ಣನಿಗೆ ಸಂದೇಶ ಕಳುಹಿಸಿದ್ದು, ಅವರು ನಿದ್ರೆಯಲ್ಲಿದ್ದ ಕಾರಣ ನೋಡಿರಲಿಲ್ಲ. ಬೆಳಗ್ಗೆ ಎದ್ದು ಮೆಸೇಜ್ ನೋಡುವಷ್ಟರಲ್ಲಿ ಕಾಲ ಮಿಂಚಿತ್ತು.

ಮೆಸೇಜ್ ನೋಡಿದ ನೀರಜ್ ಸಹೋದರಿ ಸಂಗೀತಾ ಯಾದವ್ ಗೆ ಕರೆ ಮಾಡಿದರೂ ಫೋನ್ ರಿಸೀವ್ ಮಾಡಿರಲಿಲ್ಲ. ಇದಾದ ನಂತರ ಸಂಗೀತಾ ಅವರ ಸೋದರ ಮಾವನಿಗೆ ಕರೆ ಮಾಡಿದಾಗ ಅವರು ಸರಿಯಾದ ಉತ್ತರ ನೀಡಲಿಲ್ಲ. ಘಟನೆ ಸ್ಥಳದಲ್ಲಿ ಪತ್ರವೊಂದು ಸಿಕ್ಕಿದ್ದು ಅದರ ತನಿಖೆ ಮಾಡಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ