16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಗಂಡನ ಮನೆಯಲ್ಲಿ ಕಳೆದ 16 ವರ್ಷಗಳಿಂದ ಬಂಧಿಯಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ, ಕಳೆದ ವಾರವಷ್ಟೇ ಆಕೆಯನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು
ಮಹಿಳೆ Image Credit source: Naidunia
Follow us
ನಯನಾ ರಾಜೀವ್
|

Updated on: Oct 15, 2024 | 2:26 PM

ಕಳೆದ 16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ, ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಅಕ್ಟೋಬರ್ 05 ರಂದು ಮಹಿಳೆಯ ತಂದೆಯ ದೂರಿನ ಮೇರೆಗೆ ಪೊಲೀಸರು ಅವರ ಮನೆಗೆ ತೆರಳಿ ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಮಹಿಳೆಯ ತಾಯಿಯ ಕಡೆಯವರು ಆಕೆಯ ಅತ್ತೆಯ ಮೇಲೆ ಕಿರುಕುಳದ ಆರೋಪ ಮಾಡಿದ್ದರು. 40 ನೇ ವಯಸ್ಸಿನಲ್ಲಿ, ಮಹಿಳೆಯ ತೂಕವು 25 ಕೆಜಿಗೆ ಇಳಿದಿತ್ತು. ಮಹಿಳೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ ಮತ್ತು ಮಾತನಾಡಲು ಸಹ ಸಾಧ್ಯವಾಗಿರಲಿಲ್ಲ. ಮಹಿಳೆಯನ್ನು ಹಗ್ಗದಿಂದ ಕಟ್ಟಿ ಹಾಕಲಾಗಿತ್ತು.

ರಕ್ಷಣೆಯ ಸಮಯದಲ್ಲಿ, ಮಹಿಳೆಯನ್ನು ಎತ್ತಿಕೊಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಮಹಿಳೆಯ ಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮಂಗಳವಾರ ಹಮೀದಿಯಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಮಹಿಳೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸುತ್ತಿದೆ. ಮಹಿಳೆಯ ತಾಯಿಯ ಮನೆಯವರೂ ಭೋಪಾಲ್‌ನಲ್ಲಿದ್ದಾರೆ.

ಮತ್ತಷ್ಟು ಓದಿ:16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ

ಅತ್ತೆಯ ಮನೆಯಲ್ಲಿ ತನ್ನ ಮಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಹಿಳೆ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಅತ್ತೆಯ ಮನೆಯಿಂದ ರಕ್ಷಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಆಕೆಯ ಅತ್ತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು.

ಪ್ರಕರಣದ ದೂರನ್ನು ಸ್ವೀಕರಿಸಿದ ಮಹಿಳಾ ಠಾಣಾ ಪೊಲೀಸರು ಜಹಾಂಗೀರಾಬಾದ್ ಪೊಲೀಸ್ ಸಿಬ್ಬಂದಿಯ ಸಹಾಯದಿಂದ ರಾನು ಸಾಹುಳನ್ನು ಆಕೆಯ ಅತ್ತೆಯ ಮನೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, 9 ದಿನಗಳ ಚಿಕಿತ್ಸೆ ನಂತರ ಸಾವನ್ನಪ್ಪಿದ್ದಾರೆ.

ಈ ಪ್ರಕರಣದ ತನಿಖೆಯ ಹೊಣೆಯನ್ನು ಪೊಲೀಸರ ವಿಶೇಷ ತಂಡಕ್ಕೆ ವಹಿಸಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷೆ ವರದಿ ಹಾಗೂ ಸಂಬಂಧಿಕರ ಹೇಳಿಕೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸದ್ಯ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ