ಲೈಂಗಿಕ ಕಿರುಕುಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ
ಲೈಂಗಿಕ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಬಾಲಸೋರ್‌ನ ಕಾಲೇಜು ಆವರಣದಲ್ಲಿ ಬೆಂಕಿ ಹಚ್ಚಿಕೊಂಡು 20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಿತಿ ತೀರಾ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಮುಂದಿನ 48 ಗಂಟೆಗಳು ಬಹಳ ನಿರ್ಣಾಯಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಂತ್ರಸ್ತೆಯ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣುತ್ತಿಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಭುವನೇಶ್ವರ, ಜುಲೈ 13: ಲೈಂಗಿಕ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಬೆಂಕಿ(Fire) ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಬಾಲಸೋರ್‌ನ ಕಾಲೇಜು ಆವರಣದಲ್ಲಿ ಬೆಂಕಿ ಹಚ್ಚಿಕೊಂಡು 20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಿತಿ ತೀರಾ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಕೆಯ ದೇಹವು ಶೇ.95ರಷ್ಟು ಸುಟ್ಟು ಹೋಗಿದೆ. ವಿದ್ಯಾರ್ಥಿನಿಯನ್ನು ಶನಿವಾರ ಭುವನೇಶ್ವರದಲ್ಲಿರುವ ಏಮ್ಸ್‌ಗೆ ದಾಖಲಿಸಲಾಗಿದೆ.ಮುಂದಿನ 48 ಗಂಟೆಗಳು ಬಹಳ ನಿರ್ಣಾಯಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಂತ್ರಸ್ತೆಯ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣುತ್ತಿಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿನಿಯ ಚಿಕಿತ್ಸೆಯಲ್ಲಿ ಹಲವು ವಿಭಾಗಗಳ ವೈದ್ಯರು ತೊಡಗಿಸಿಕೊಂಡಿದ್ದಾರೆ, ಆಕೆಯ ಮುಖದ ಮೇಲೆ ಕೆಲವು ಕಡೆ ಹೊರತುಪಡಿಸಿ ಆಕೆಯ ಇಡೀ ದೇಹವು ಸುಟ್ಟುಹೋಗಿದೆ , ಈ ಸಮಯದಲ್ಲಿ ನಾವು ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಸ್ನೇಹಿತೆ ಮೇಲಾಗುತ್ತಿದ್ದ ಲೈಂಗಿಕ ಕಿರುಕುಳ ತಡೆಯಲು ಹೋದ ವ್ಯಕ್ತಿಯನ್ನು ಹೊಡೆದು ಕೊಂದ ಗುಂಪು
ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಭಾನುವಾರ ಭುವನೇಶ್ವರದ ಏಮ್ಸ್‌ಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಲಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮುಖೇಶ್ ಮಹಾಲಿಂಗ್ ತಿಳಿಸಿದ್ದಾರೆ.
ಸುಟ್ಟಗಾಯಗಳ ವಿಭಾಗದ ವೈದ್ಯರಲ್ಲದೆ, ಕ್ರಿಟಿಕಲ್ ಕೇರ್, ಸರ್ಜರಿ, ನೆಫ್ರಾಲಜಿ ಮತ್ತು ಪಲ್ಮನಾಲಜಿ ತಜ್ಞರು ಅವರ ಆರೋಗ್ಯ ಸ್ಥಿತಿಯನ್ನು 24/7 ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಏಮ್ಸ್ ಭುವನೇಶ್ವರವು ಅರಿವಳಿಕೆ, ಪಲ್ಮನರಿ ಮೆಡಿಸಿನ್, ಬರ್ನ್ ಮತ್ತು ಪ್ಲಾಸ್ಟಿಕ್, ನೆಫ್ರಾಲಜಿ ಮತ್ತು ಇತರ ವಿಭಾಗಗಳ ವೈದ್ಯರನ್ನು ಒಳಗೊಂಡ ಎಂಟು ಸದಸ್ಯರ ತಜ್ಞ ಸಮಿತಿಯನ್ನು ರಚಿಸಿದೆ. ತನಗೆ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೆಂಕಿ ಹಚ್ಚಿಕೊಂಡಿದ್ದಾಳೆ.
ಕಾಲೇಜಿನ ಪ್ರಾಂಶುಪಾಲರ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲವಾಗಿರುವುದರಿಂದ ಒಡಿಶಾ ಸರ್ಕಾರ ಶನಿವಾರ ಕಾಲೇಜು ಪ್ರಾಂಶುಪಾಲರನ್ನು ಅಮಾನತುಗೊಳಿಸಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಬಾಲೂರ್ ಪೊಲೀಸರು ಆರೋಪಿ ಶಿಕ್ಷಕರಾದ ಸಮೀರ ಕುಮಾರ್ ಸಾಹು ಅವರನ್ನು ಶನಿವಾರ ಬಂಧಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:03 pm, Sun, 13 July 25