AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವನೇಶ್ವರ: ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು, ಎದೆ ಝಲ್ಲೆನಿಸುವ ವಿಡಿಯೋ

ಭುವನೇಶ್ವರದ ಜನನಿಬಿಡ ಪ್ರದೇಶದಲ್ಲಿ ನಡೆದ ಅಪಘಾತವೊಂದು ಎದೆ ಝಲ್ಲೆನಿಸುವಂತಿತ್ತು. ಕಾರೊಂದು ವೇಗವಾಗಿ ಬಂದು ಬೈಕ್​ ಒಂದಕ್ಕೆ ಡಿಕ್ಕಿ ಹೊಡೆದು ಸುಮಾರು ಒಂದು ಕಿಲೋಮೀಟರ್​ವರೆಗೆ ಎಳೆದೊಯ್ದಿತ್ತು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆದರೆ ಬೈಕ್ ಸವಾರನ ಪರಿಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಭುವನೇಶ್ವರ: ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು, ಎದೆ ಝಲ್ಲೆನಿಸುವ ವಿಡಿಯೋ
ಅಪಘಾತ
ನಯನಾ ರಾಜೀವ್
|

Updated on: Feb 02, 2024 | 11:24 AM

Share

ವೇಗವಾಗಿ ಬಂದ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀ ಎಳೆದೊಯ್ದಿರುವ ಘಟನೆ ಭುವನೇಶ್ವರದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವರಿ 31ರ ರಾತ್ರಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಮಾರು ಒಂದು ಕಿಲೋಮೀಟರ್ ದೂರ ಬೈಕ್ ಅನ್ನು ಎಳೆದುಕೊಂಡು ಹೋಗುತ್ತಿದ್ದಾಗ ಕಾರಿನ ಕೆಳಗಡೆ ಬೆಂಕಿ ಕಿಡಿಗಳು ಹೊರಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಆ ಘಟನೆ ನೋಡಿದರೆ ಬೈಕ್​ ಸವಾರ ಬದುಕುಳಿದಂತೆ ಕಾಣುತ್ತಿಲ್ಲ, ಬೈಕ್ ಸವಾರನ ಮೇಲೆ ಹಳೆಯ ವೈಷಮ್ಯ ಏನಾದರೂ ಇತ್ತೇ, ಅಥವಾ ಕಾರು ಚಾಲಕ ಮದ್ಯದ ನಶೆಯಲ್ಲಿದ್ದನೇ ಎನ್ನುವ ಪ್ರಶ್ನೆ ಕಾಡುತ್ತಿದೆ. ಕಾರು ಬೈಕ್​ಗೆ ಡಿಕ್ಕಿಯಾದಾಗ ನಿಲ್ಲಿಸುವುದು ಬಿಟ್ಟು ಕಿಲೋಮೀಟರ್​ಗಳಷ್ಟು ದೂರ ಏಕೆ ಎಳೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ದೆಹಲಿಯಲ್ಲಿ ಕಳೆದ ವರ್ಷ ನ್ಯೂ ಇಯರ್ ಸಂದರ್ಭದಲ್ಲಿ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಯುವತಿಯೊನ್ನು ಕಿಲೋಮೀಟರ್​ಗಳವರೆಗೆ ಎಳೆದೊಯ್ದ ಘಟನೆಯೂ ನಡೆದಿತ್ತು.

ಮತ್ತಷ್ಟು ಓದಿ: ಹಿಟ್​​​ ಆ್ಯಂಡ್​​​​ ರನ್ ಪ್ರಕರಣ: ವ್ಯಕ್ತಿಯೊಬ್ಬರನ್ನು ಬಾನೆಟ್‌ ಮೇಲೆ ಎಳೆದೊಯ್ದ ಟಿಟಿ ಚಾಲಕ

ಮತ್ತೊಂದು ಘಟನೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು ಹಲವು ಮೀಟರ್ ದೂರ ಎಳೆದೊಯ್ದ ಕಾರು ಚಾಲಕ ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಒಂದು ವಾರದ ಹಿಂದಷ್ಟೇ ನಡೆದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಬೆಂಗಳೂರು ನಗರದ ಮಲ್ಲೇಶ್ವರಂ ಬಳಿ ನಡೆದಿದೆ. ಘಟನೆಯ ದೃಶ್ಯವಾಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಜನವರಿ 15 ರಂದು ನಡೆದ ಘಟನೆ ಇದಾಗಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಬೆಚ್ಚಿಬೀಳಿಸುವ ದೃಶ್ಯಾವಳಿಗಳು ಸೆರೆಯಾಗಿವೆ. ಕಾರಿನ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಕೊಂಡೊಯ್ಯವುದನ್ನು ವಿಡಿಯೋದಲ್ಲಿ ಕಾಣಬಹುದು. ಅಲ್ಲದೆ, ಇತರ ವಾಹನಗಳು ಮತ್ತು ಮತ್ತಿಬ್ಬರು ವ್ಯಕ್ತಿಗಳು ಕ್ಯಾಬ್ ಅನ್ನು ಬೆನ್ನಟ್ಟುತ್ತಿರುವುದನ್ನು ನೋಡಬಹುದು.

ಭುವನೇಶ್ವರ ಅಪಘಾತದ ವಿಡಿಯೋ

ಬೆಂಗಳೂರು ನಗರದಲ್ಲಿ ಈ ಹಿಂದೆ ಅನೇಕ ಹಿಟ್​ ಆ್ಯಂಡ್ ರನ್​ ಪ್ರಕರಣಗಳು ನಡೆದಿವೆ. ಘಟನೆಯಲ್ಲಿ ಕೆಲವರು ಸಾವನ್ನಪ್ಪಿದ್ದು, ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲೂ ವ್ಯಕ್ತಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇಂತಹ ಹಿಟ್ ಆ್ಯಂಡ್ ರನ್​ ಪ್ರಕರಣಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರವು ಮಹತ್ವದ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು.

ಈ ಕಾಯ್ದೆಯಲ್ಲಿ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಘಟನೆಯಲ್ಲಿ ಯಾರಾದರು ಮೃತಪಟ್ಟರೆ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸುವ ಅವಕಾಶ ಈಗಾಗಲೇ ಇದೆ. ಹೊಸ ಕಾಯ್ದೆಯಲ್ಲಿ 10 ವರ್ಷ ಜೈಲು ಶಿಕ್ಷೆ ಸೇರಿದಂತೆ 7 ಲಕ್ಷದವರೆಗೆ ದಂಡ ವಿಧಿಸುವ ಪ್ರಸ್ತಾಪ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!