AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸು ಸೇರಿದಂತೆ ಮೂಕ ಪ್ರಾಣಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭೂರಾ ಶೇಖ್, ಯೋಗಿಗೆ ಪತ್ರ ಬರೆದ ವಿಎಚ್​​​ಪಿ

ಉತ್ತರದಲ್ಲಿ ಕಾಮುಕನ ಅಟ್ಟಹಾಸಕ್ಕೆ ಮೂಕ ಪ್ರಾಣಿಗಳು ಬಲಿಯಾಗಿದೆ. ಭೂರಾ ಶೇಖ್ ಎಂಬ ವ್ಯಕ್ತಿ ಈ ಹೇಯ ಕೃತ್ಯ ಎಸಗಿದ್ದಾನೆ ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಆರೋಪಿ ಹಸುವಿನ ಜತೆಗೆ ಲೈಂಗಿಕ ಕ್ರಿಯೆ ನಡೆಸುವುದು ಈ ವಿಡಿಯೋದಲ್ಲಿ ಸೆರೆಯಾಗಿದೆ.

ಹಸು ಸೇರಿದಂತೆ ಮೂಕ ಪ್ರಾಣಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭೂರಾ ಶೇಖ್, ಯೋಗಿಗೆ ಪತ್ರ ಬರೆದ ವಿಎಚ್​​​ಪಿ
ವೈರಲ್​​ ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on:Jun 20, 2024 | 5:59 PM

Share

ಮೊರಾದಾಬಾದ್, ಜೂ.20:  ಉತ್ತರಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ಹಸುವಿನ ಮೇಲೆ ಲೈಂಗಿಕ ವಿಕೃತ್ತಿಯನ್ನು ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಭೂರಾ ಶೇಖ್ ಎಂಬ ವ್ಯಕ್ತಿ ಈ ಹೇಯ ಕೃತ್ಯ ಎಸಗಿದ್ದಾನೆ ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಆರೋಪಿ ಹಸುವಿನ ಜತೆಗೆ ಲೈಂಗಿಕ ಕ್ರಿಯೆ ನಡೆಸುವುದು ಈ ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಶನಿವಾರ ರಾತ್ರಿ (15ನೇ ಜೂನ್ 2024) ನಡೆದಿದೆ. ಇದೀಗ ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​​ ಹಾಗೂ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಆರೋಪಿ ಭೂರಾ ಶೇಖ್ ಹಲವು ಹಸುಗಳು, ಹೆಣ್ಣು ನಾಯಿ, ಮೇಕೆಗಳನ್ನೂ ತನ್ನ ಲೈಂಗಿಕ ವಿಕೃತಿಗೆ ಬಳಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಈ ಘಟನೆ ಮೊರಾದಾಬಾದ್ ಜಿಲ್ಲೆಯ ದಿಲಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಈ ವಿಡಿಯೋ ಸೆರೆಯಾಗಿದೆ.

ರಾತ್ರಿ ವೇಳೆ ಕಂಬಕ್ಕೆ ಕಟ್ಟಿರುವ ಹಸುವಿನ ಮೇಲೆ ಲೈಂಗಿಕ ಕ್ರಿಯೆಯನ್ನು ನಡೆಸುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಹಸು ಪದೇ ಪದೇ ಆತನ ಕೈಯಿಂದ ತಪ್ಪಿಸಿಕೊಳ್ಳಲು ನೋಡುತ್ತದೆ. ಅದರೂ ಆತ ಹಸುವನ್ನು ಬಿಡದೆ ನಿರಂತರ ಲೈಂಗಿಕ ಕ್ರಿಯೆ ನಡೆಸುತ್ತಾನೆ.

ಆರೋಪಿಯನ್ನು ಭೂರಾ ಶೇಖ್ ಎಂದು ಗುರುತಿಸಲಾಗಿದ್ದು, ಆತನ ತಂದೆಯ ಹೆಸರು ಯಾಕೂಬ್ ಶೇಖ್ ಎಂದು ಹೇಳಲಾಗಿದೆ. ಮೊರಾದಾಬಾದ್ ಪೊಲೀಸರು ವೈರಲ್ ವಿಡಿಯೋ ಆಧಾರದ ಮೇಲೆ ಹಾಗೂ ವಿಶ್ವ ಹಿಂದೂ ಪರಿಷತ್ ನೀಡಿದ ದೂರಿನ ಆಧಾರ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದೀಗ ಆರೋಪಿ ಭೂರಾ ಶೇಖ್‌ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಮಸೀದಿ ಸೇರಿದಂತೆ 1,200 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳ ನೆಲಸಮ ಮಾಡಿದ ಯೋಗಿ ಸರ್ಕಾರ

ಆಡು ಮತ್ತು ಹೆಣ್ಣು ನಾಯಿಗಳ ಮೇಲೆ ಲೈಂಗಿಕ ಕ್ರಿಯೆ

ವಿಶ್ವ ಹಿಂದೂ ಪರಿಷತ್​​ನ ಜಿಲ್ಲಾ ಉಪಾಧ್ಯಕ್ಷ ಕಲ್ಯಾಣ್ ಸಿಂಗ್ ಅವರು ಕಳುಹಿಸಿರುವ ಪತ್ರದಲ್ಲಿ ಹಿಂದೂ ಸಂಘಟನೆಯು ಭೂರಾ ವಿಕೃತಿ ಬಗ್ಗೆ ಹಲವು ದಿನಗಳಿಂದ ಗಮನಿಸುತ್ತಿದ್ದೇವೆ. ಸಾಕು ಮತ್ತು ಬಿಡಾಡಿ ಹಸುಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಭೂರಾ ತನ್ನ ಕಾಮತೃಷೆ ತೀರಿಸಿಕೊಳ್ಳಲು ಹೆಣ್ಣು ನಾಯಿ ಮತ್ತು ಮೇಕೆಗಳನ್ನು ಬಳಸಿಕೊಂಡಿದ್ದಾನೆ. ಹಸುಗಳು ಮತ್ತು ನೂರಾರು ಇತರ ಪ್ರಾಣಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಈ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Thu, 20 June 24