ಮೋದಿಗೆ ಭೂತಾನ್ ಅತ್ಯುನ್ನತ ನಾಗರಿಕ ಗೌರವ, ಭಾರತದ 140 ಕೋಟಿ ಜನರಿಗೆ ಅರ್ಪಿಸಿದ ನಮೋ
ನಮ್ಮ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿ ಸ್ವೀಕರಿಸಲು ಭೂತಾನ್ ತೆರಳಿದ ಮೋದಿ ಅವರಿಗೆ ಅದ್ಧೂರಿ ಸ್ವಾಗತ ದೊರೆತಿದೆ. ಪಾರೋದಿಂದ ಥಿಂಪುವರೆಗಿನ ದಾರಿಯುದ್ದಕ್ಕೂ ಟ್ರೆಡಿಷನಲ್ ನೃತ್ಯಗಳೊಂದಿಗೆ ಮೋದಿ ಅವರನ್ನು ಸ್ವಾಗತ ಸಿಕ್ಕಿದೆ. ಇನ್ನು ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮೋದಿ ಭಾರತದ ದೇಶದ 140 ಕೋಟಿ ಜನರಿಗೆ ಅರ್ಪಿಸಿರುವುದು ವಿಶೇಷ.
ನವದೆಹಲಿ, (ಮಾರ್ಚ್ 22): ಹತ್ತಾರು ದೇಶಗಳ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಈಗ ಭೂತಾನ್ ಕೂಡ ತನ್ನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಭೂತಾನ್ (Bhutan) ಅರಸ ಜಿಗ್ಮೆ ಖೇಸರ್ ನಾಮ್‌ಗ್ಯೆಲ್ ವಾಂಗ್ಚುಕ್ (Jigme Khesar Namgyel Wangchuck) ಅವರು ಇಂದು(ಮಾರ್ಚ್ 22) ನರೇಂದ್ರ ಮೋದಿ ಅವರಿಗೆ ‘ಆರ್ಡರ್ ಆಫ್ ದಿ ಡ್ರಕ್ ಗ್ಯಾಲ್ಪೊ’ (Order of the Druk Gyalpo) ಪ್ರಶಸ್ತಿ ನೀಡಿ ಗೌರವಿಸಿದರು. ಇದರೊಂದಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೊದಲ ಭೂತಾನ್ ಹೊರತಾದ ವ್ಯಕ್ತಿ ಎನಿಸಿದ್ದಾರೆ.
ಭಾರತದ 140 ಕೋಟಿ ಜನರಿಗೆ ಅರ್ಪಿಸಿದ ಮೋದಿ
ಪ್ರಶಸ್ತಿ ಸ್ವೀಕರಿಸಿದ ಬಗ್ಗೆ ಟ್ವೀಟ್ ಮಾಡಿರುವ ಮೋದಿ, “ಇದು ಭಾರತದ 140 ಕೋಟಿ ಜನರಿಗೆ ಸಿಕ್ಕ ಗೌರವವಾಗಿದೆ. ಭೂತಾನ್‌ನಲ್ಲಿ ನಿಂತು ಭಾರತದ ಪ್ರತಿಯೊಬ್ಬ ನಾಗರಿಕರ ಪರವಾಗಿ ಪ್ರಶಸ್ತಿ ಸ್ವೀಕರಿಸಿದ್ದೇನೆ. ಪ್ರಶಸ್ತಿ ನೀಡಿ ಗೌರವಿಸಿದ ಭೂತಾನ್‌ನ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ನಮನ ಸಲ್ಲಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಭೂತಾನ್ಗೆ ತೆರಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
It is with great humility that I accept the Order of the Druk Gyalpo. I am grateful to HM the King of Bhutan for presenting the Award. I dedicate it to the 140 crore people of India. I am also confident that India-Bhutan relations will keep growing and benefit our citizens. pic.twitter.com/bDtKZJsS7X
— Narendra Modi (@narendramodi) March 22, 2024
ಹಲವು ಒಪ್ಪಂದಗಳಿಗೆ ಸಹಿ
ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಅವರು ಥಿಂಪುವಿನಲ್ಲಿ ಪ್ರಧಾನಿ ಮೋದಿ ಅವರಿಗಾಗಿ ಭೋಜನಕೂಟ ಆಯೋಜಿಸಿದ್ದು, ಈ ವೇಳೆ ಉಭಯ ರಾಷ್ಟ್ರಗಳು ಹಲವು ಒಪ್ಪಂದಗಳು ಮಾಡಿಕೊಂಡವು. ಅದರಲ್ಲೂ ಮುಖ್ಯವಾಗಿ ಭಾರತ ಮತ್ತು ಭೂತಾನ್ (Bhutan) ದೇಶಗಳ ನಡುವೆ ಶುಕ್ರವಾರ ಇಂಧನ, ವ್ಯಾಪಾರ, ಡಿಜಿಟಲ್ ಸಂಪರ್ಕ, ಬಾಹ್ಯಾಕಾಶ ಮತ್ತು ಕೃಷಿ ಕ್ಷೇತ್ರಗಳ ನಡುವಿನ ವಿನಿಯಮದ ಒಪ್ಪಂದ ನಡೆಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭೂತಾನ್ ಪ್ರವಾಸದಲ್ಲಿದ್ದು ಅಲ್ಲಿ ಅವರು ಹಲವಾರು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ. ಅದರಲ್ಲೂ ಗಮನ ಸೆಳೆದಿದ್ದು ಉಭಯ ದೇಶಗಳ ನಡುವೆ ರೈಲು ಸಂಪರ್ಕ (Railway Connection) ಸ್ಥಾಪಿಸುವ ತಿಳುವಳಿಕಾ ಒಡಂಬಡಿಕೆ. ಈ ಮೂಲಕ ನೆರೆಯ ದೇಶಗಳ ನಡುವೆ ರೈಲು ಸಂಚಾರ ಆರಂಭವಾಗಲಿದೆ.
ಭಾರತ ಹಾಗೂ ಭೂತಾನ್ ನಡುವಿನ ಸಂಬಂಧ ವೃದ್ಧಿ, ವ್ಯಾಪಾರ ಒಪ್ಪಂದಗಳ ಕುರಿತು ಮಹತ್ವದ ಚರ್ಚೆ ನಡೆದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪರಸ್ಪರ ಆರ್ಥಿಕ ಸಹಕಾರ, ಸಂಪರ್ಕ ಕ್ಷೇತ್ರಗಳಲ್ಲಿ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:27 pm, Fri, 22 March 24