Sonia Gandhi: ಗಾಂಧಿ, ನೆಹರೂ ಅವರನ್ನು ನಿಂದಿಸುವ ಪ್ರಯತ್ನವಾಗುತ್ತಿದೆ; ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನಿಂದಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

Sonia Gandhi: ಗಾಂಧಿ, ನೆಹರೂ ಅವರನ್ನು ನಿಂದಿಸುವ ಪ್ರಯತ್ನವಾಗುತ್ತಿದೆ; ಕೇಂದ್ರ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ
ಸೋನಿಯಾ ಗಾಂಧಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 15, 2022 | 1:14 PM

ನವದೆಹಲಿ: ಕೊವಿಡ್ ಸೋಂಕಿಗೆ ತುತ್ತಾಗಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ನೀಡಿರುವ ತಮ್ಮ ಹೇಳಿಕೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ತನ್ನ ರಾಜಕೀಯ ಪ್ರಚಾರವನ್ನು ಹೆಚ್ಚಿಸಲು ನಾಯಕರಾದ ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು (Jawaharlal Nehru) ಅವರನ್ನು ಕೆಣಕಲು ಪ್ರಯತ್ನಿಸುತ್ತಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ.

ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕೆ ಶುಭ ಹಾರೈಸಿದ ಸೋನಿಯಾ ಗಾಂಧಿ, ಕಳೆದ 75 ವರ್ಷಗಳಲ್ಲಿ ಹೆಚ್ಚು ಪ್ರತಿಭಾವಂತ ಭಾರತೀಯರು ದೇಶವನ್ನು ವಿಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ಕ್ಷೇತ್ರಗಳಲ್ಲಿ ಪ್ರಗತಿಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ಭಾರತದ ದೂರದೃಷ್ಟಿಯ ನಾಯಕರು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯ ಅಡಿಪಾಯವನ್ನು ಹಾಕಿದರು. ಭಾರತವು ತನ್ನ ವೈವಿಧ್ಯಮಯ ಸಂಸ್ಕೃತಿ ಮತ್ತು ಭಾಷೆಗಳ ಮೂಲಕ ವೈಭವಯುತ ರಾಷ್ಟ್ರವಾಗಿ ತನ್ನ ಇಮೇಜನ್ನು ಭದ್ರಪಡಿಸಿಕೊಂಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನಿಂದಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಮಾಡುವ ಇಂತಹ ಪ್ರಯತ್ನಗಳನ್ನು ಕಾಂಗ್ರೆಸ್ ಪಕ್ಷವು ಬಲವಾಗಿ ವಿರೋಧಿಸುತ್ತದೆ ಎಂದಿದ್ದಾರೆ. 1947ರಲ್ಲಿ ಭಾರತದ ವಿಭಜನೆಗೆ ಕಾರಣವಾದ ಘಟನೆಗಳ ಆವೃತ್ತಿಯನ್ನು ವಿವರಿಸುವ ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸೋನಿಯಾ ಗಾಂಧಿ ಈ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Sonia Gandhi: ನ್ಯಾಷನಲ್ ಹೆರಾಲ್ಡ್​​ ಪ್ರಕರಣ; ಇಡಿ ಅಧಿಕಾರಿಗಳಿಂದ ಇಂದು ಸೋನಿಯಾ ಗಾಂಧಿ 3ನೇ ಸುತ್ತಿನ ವಿಚಾರಣೆ

ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ಕರ್ನಾಟಕ ಸರ್ಕಾರದ ಪತ್ರಿಕೆಯ ಜಾಹೀರಾತಿನಲ್ಲಿ ಭಾರತದ ಮೊದಲ ಪ್ರಧಾನಿ ನೆಹರೂ ಅವರ ಫೋಟೋವನ್ನು ಹಾಕದಿರುವುದಕ್ಕೆ ಕಾಂಗ್ರೆಸ್ ಭಾರೀ ಟೀಕೆ ಮಾಡಿತ್ತು.

ಸ್ನೇಹಿತರೇ, ಕಳೆದ 75 ವರ್ಷಗಳಲ್ಲಿ ನಾವು ಸಾಕಷ್ಟನ್ನು ಸಾಧಿಸಿದ್ದೇವೆ. ಆದರೆ, ಇಂದಿನ ಸರ್ಕಾರವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಮಹಾನ್ ತ್ಯಾಗ ಮತ್ತು ದೇಶದ ಅದ್ಭುತ ಸಾಧನೆಗಳನ್ನು ನಿರ್ಲಕ್ಷಿಸಿದೆ. ಅದನ್ನು ನಾವು ಎಂದೂ ಒಪ್ಪಿಕೊಳ್ಳುವುದಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಐತಿಹಾಸಿಕ ಸತ್ಯಗಳ ತಪ್ಪು ನಿರೂಪಣೆಯನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತದೆ ಮತ್ತು ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ಅಬುಲ್ ಕಲಾಂ ಆಜಾದ್ ಅವರಂತಹ ಮಹಾನ್ ನಾಯಕರನ್ನು ರಾಜಕೀಯ ಲಾಭಕ್ಕಾಗಿ ಸುಳ್ಳಿನ ಆಧಾರದ ಮೇಲೆ ಸೆರೆಹಿಡಿಯುವ ಪ್ರತಿಯೊಂದು ಪ್ರಯತ್ನವನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ 75 ವರ್ಷಗಳಲ್ಲಿ ಭಾರತವು ತನ್ನ ಪ್ರತಿಭಾವಂತರ ಪರಿಶ್ರಮದಿಂದ ವಿಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ