AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bandipora Encounter: ಭಾರತೀಯ ಸೇನೆಯ ಬಹುದೊಡ್ಡ ಬೇಟೆ: ಲಷ್ಕರ್​ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್​ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ.  ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ದಾಳಿ ಹೊಣೆಯನ್ನು ಲಷ್ಕರ್​-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ ಬಹುದೊಡ್ಡ ಬೇಟೆಯನ್ನೇ ಆಡಿದ್ದು, ಟಾಪ್​ ಕಮಾಂಡರ್​ ಅಲ್ತಾಫ್​ನನ್ನು ಹತ್ಯೆ ಮಾಡಿವೆ.

Bandipora Encounter: ಭಾರತೀಯ ಸೇನೆಯ ಬಹುದೊಡ್ಡ ಬೇಟೆ: ಲಷ್ಕರ್​ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್​ ಹತ್ಯೆ
ಭಾರತೀಯ ಸೇನೆ Image Credit source: PTI
ನಯನಾ ರಾಜೀವ್
|

Updated on:Apr 25, 2025 | 12:54 PM

Share

ಬಂಡಿಪೋರಾ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ(Bandipora)ದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ.  ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿ ಹೊಣೆಯನ್ನು ಲಷ್ಕರ್​-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ ಬಹುದೊಡ್ಡ ಬೇಟೆಯನ್ನೇ ಆಡಿದ್ದು, ಟಾಪ್​ ಕಮಾಂಡರ್​ ಅಲ್ತಾಫ್​ನನ್ನು ಹತ್ಯೆ ಮಾಡಿವೆ.

ಭಯೋತ್ಪಾದಕರು ಅಲ್ಲಿ ಅಡಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಪಡೆದ ಸೇನೆ ಅಲ್ಲಿಗೆ ತೆರಳಿತ್ತು. ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಮೊದಲು ಉಗ್ರರು ಸೇನೆಯ ಮೇಲೆ ಗುಂಡು ಹಾರಿಸಿದ್ದರು. ಅದಕ್ಕೆ ಪ್ರತಿಯಾಗಿ ಸೇನೆಯು ಕೂಡ ದಾಳಿ ನಡೆಸಿತು. ಭದ್ರತಾ ಪಡೆಗಳು ಬೆನ್ನಟ್ಟುತ್ತಿದ್ದ ಭಯೋತ್ಪಾದಕರಲ್ಲಿ ಒಬ್ಬನಿಗೆ ಆರಂಭಿಕ ಗುಂಡಿನ ಚಕಮಕಿಯಲ್ಲಿ ಗಾಯಗಳಾಗಿವೆ ಎಂದು ವರದಿಯಾಗಿತ್ತು.

ಅದೇ ಎನ್‌ಕೌಂಟರ್‌ನಲ್ಲಿ, ಹಿರಿಯ ಅಧಿಕಾರಿಯ ವೈಯಕ್ತಿಕ ಭದ್ರತಾ ತಂಡದ ಇಬ್ಬರು ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡರು.ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಶ್ರೀನಗರಕ್ಕೆ ಆಗಮಿಸಿದರು. ಅಲ್ಲಿ ಬಂಡಿಪೋರಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು. ಅವರು ಪರಿಸ್ಥಿತಿಯ ಸಮಗ್ರ ಭದ್ರತಾ ಪರಿಶೀಲನೆ ನಡೆಸಲಿದ್ದಾರೆ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದೆ ಶಂಕಿತ ಎಲ್‌ಇಟಿ ಭಯೋತ್ಪಾದಕರನ್ನು ಪತ್ತೆಹಚ್ಚುವ ಗುರಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ
Image
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Image
ಪಹಲ್ಗಾಮ್ ಉಗ್ರ ದಾಳಿ, ಎಕೆ-47 ಹಿಡಿದ ಶಂಕಿತ ಉಗ್ರನ ಫೋಟೋ ಬಹಿರಂಗ
Image
ಪ್ಯಾಂಟ್​ ಬಿಚ್ಚಿ, ಐಡಿ ಪರಿಶೀಲಿಸಿ ಹಿಂದೂಗಳನ್ನು ಗುರಿಯಾಗಿಸಿ ಉಗ್ರರ ದಾಳಿ
Image
ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ ಖಾಲಿದ್ ಯಾರು?

ಮತ್ತಷ್ಟು ಓದಿ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್​ಕೌಂಟರ್​, ಉಗ್ರರನ್ನು ಸುತ್ತುವರೆದ ಭದ್ರತಾ ಪಡೆ

ಎಎಸ್‌ಪಿ ನೇತೃತ್ವದಲ್ಲಿ ಪೊಲೀಸರ ವಿಶೇಷ ತನಿಖಾ ತಂಡ ರಚನೆ, 200ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಎಸ್‌ಐಟಿಯಿಂದ ವಿಚಾರಣೆ ನಡೆಸಲಾಗುತ್ತಿದೆ. ಏಪ್ರಿಲ್ 22 ರಂದು ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್​ನಲ್ಲಿ ಪ್ರವಅಸಕ್ಕೆಂದು ಬಂದಿದ್ದ ಹಿಂದೂಗಳನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ 26 ಮಂದಿ ಸಾವನ್ನಪ್ಪಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:08 am, Fri, 25 April 25

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್