AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big Breaking: ದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯುಯು ಲಲಿತ್ ನೇಮಕ

ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಿದೆ. ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.

Big Breaking: ದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯುಯು ಲಲಿತ್ ನೇಮಕ
Uday Lalit
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 10, 2022 | 6:36 PM

ದೇಶದ‌ 49ನೇ ಸಿಜೆಐಯಾಗಿ (Chief Justice of India) ನ್ಯಾಯಮೂರ್ತಿ  ಉದಯ್ ಉಮೇಶ್ ಲಲಿತ್ (Justice Uday Umesh Lalit)  ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.  ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ  ಹೊರಡಿಸಿದೆ.   ಶೀಘ್ರವೇ ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ. ಎನ್.ವಿ.ರಮಣ ಸೇವಾವಧಿ ಅಂತ್ಯ ಬಳಿಕ ಸಿಜೆಐ ಆಗಿ ಪದಗ್ರಹಣ ಮಾಡಲಿದ್ದಾರೆ. ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿಗಳು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾದ ಶ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು 27 ಆಗಸ್ಟ್ 2022 ರಂದು ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ನ್ಯಾಯಮೂರ್ತಿ ಯುಯು ಲಲಿತ್ ಅವರನ್ನು ಆಗಸ್ಟ್ 2014 ರಂದು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕ ಮಾಡಲಾಯಿತು. ನ್ಯಾಯಮೂರ್ತಿ ಎಸ್‌ಎಂ ಸಿಕ್ರಿ ನಂತರ ನ್ಯಾಯಮೂರ್ತಿ ಲಲಿತ್ ಅವರು ಬಾರ್‌ನಿಂದ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಏರಿದ ಭಾರತದ ಎರಡನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಸಿಕ್ರಿ ಅವರು 1971 ರಲ್ಲಿ 13 ನೇ ಸಿಜೆಐ ಆಗಿ ಸೇವೆ ಸಲ್ಲಿಸಿದ್ದರು. ನ್ಯಾಯಮೂರ್ತಿ ಲಲಿತ್ ಅವರು ಎರಡು ಅವಧಿಗೆ ಸುಪ್ರೀಂ ಕೋರ್ಟ್ ಕಾನೂನು ಸೇವಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಹಲವಾರು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.

ನವೆಂಬರ್ 9, 1957 ರಂದು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಜನಿಸಿದ ನ್ಯಾಯಮೂರ್ತಿ ಲಲಿತ್ ಅವರು ಜೂನ್, 1983 ರಲ್ಲಿ ಮಹಾರಾಷ್ಟ್ರ ಮತ್ತು ಗೋವಾದ ಬಾರ್ ಕೌನ್ಸಿಲ್‌ನಿಂದ ವಕೀಲರಾಗಿ ನೋಂದಾಯಿಸಿಕೊಂಡರು. ಅವರು ಡಿಸೆಂಬರ್ 1985 ರವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಕೆಲಸ ಮಾಡಿದ್ದು ನಂತರ 1986, ಜನವರಿಯಲ್ಲಿ ದೆಹಲಿಯಲ್ಲಿ ಕಾರ್ಯ ಮುಂದುವರಿಸಿದರು.

ಇದನ್ನೂ ಓದಿ
Image
Teacher recruitment scam: ಶಾಲಾ ಸೇವಾ ಆಯೋಗದ ಮಾಜಿ ಸಲಹೆಗಾರ ಮತ್ತು ಅಧ್ಯಕ್ಷನನ್ನು ಬಂಧಿಸಿದ ಸಿಬಿಐ
Image
UVCE ಮೊದಲ ಚೇರ್ಮನ್ ಆಗಿ ಟಾಟಾ ಮುತ್ತುರಾಮನ್ ನೇಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
Image
ನಿತೀಶ್ ಕುಮಾರ್​​ನ್ನು ಉಪರಾಷ್ಟ್ರಪತಿ ಮಾಡಿ ಎಂದಿದ್ದರು ಜೆಡಿಯು ನಾಯಕರು: ಬಿಜೆಪಿ
Image
Breaking News: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ನೇಮಕಕ್ಕೆ ಸಿಜೆಐ ಎನ್​ವಿ ರಮಣ ಶಿಫಾರಸು

ಅವರು ಅಕ್ಟೋಬರ್ 1986 ರಿಂದ 1992 ರವರೆಗೆ ಸೋಲಿ ಜೆ. ಸೊರಾಬ್ಜಿಯವರ ಚೇಂಬರ್ ನಲ್ಲಿ ಕೆಲಸ ಮಾಡಿದ್ದರು. ಸೋಲಿ ಜೆ ಸೊರಾಬ್ಜಿ ಅವರು ಅಟಾರ್ನಿ ಜನರಲ್ ಆಫ್ ಇಂಡಿಯಾ ಆಗಿದ್ದ ಅವಧಿಯಲ್ಲಿ ಲಲಿತ್ ಅವರು ಕೇಂದ್ರ ಸರ್ಕಾರದ ವಕೀಲರ ಸಮಿತಿಯಲ್ಲಿದ್ದರು. 1992 ರಿಂದ 2002 ರವರೆಗೆ ಅವರು ಅಡ್ವೊಕೇಟ್ ಆನ್ ರೆಕಾರ್ಡ್ ಆಗಿ ಅಭ್ಯಾಸ ಮಾಡಿದರು. ಏಪ್ರಿಲ್ 2004 ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಹಿರಿಯ ವಕೀಲರಾಗಿ ನೇಮಕಗೊಂಡರು. ಅರಣ್ಯ ವಿಷಯಗಳು, ವಾಹನ ಮಾಲಿನ್ಯ, ಯಮುನಾ ಮಾಲಿನ್ಯ ಇತ್ಯಾದಿ ಸೇರಿದಂತೆ ಹಲವು ಪ್ರಮುಖ ವಿಷಯಗಳಲ್ಲಿ ಅವರನ್ನು ಅಮಿಕಸ್ ಕ್ಯೂರಿಯಾಗಿ ನೇಮಿಸಲಾಯಿತು. ಎಲ್ಲಾ 2ಜಿ ಪ್ರಕರಣಗಳ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ನ ಆದೇಶದ ಮೇರೆಗೆ ಅವರನ್ನು ಸಿಬಿಐಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಲಾಯಿತು.

Published On - 5:47 pm, Wed, 10 August 22

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ