AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪರಾಷ್ಟ್ರಪತಿ ಚುನಾವಣೆ -ಎನ್​ಡಿಎ ಅಭ್ಯರ್ಥಿಯಾಗಿ ಜಗದೀಪ್​ ಧನ್ಖರ್​ ಹೆಸರು ಘೋಷಣೆ

ಉಪರಾಷ್ಟ್ರಪತಿ ಚುನಾವಣೆ:ಎನ್​ಡಿಎ ಅಭ್ಯರ್ಥಿಯಾಗಿ ಜಗದೀಪ್​ ಧನ್ಖರ್​ ಹೆಸರು ಘೋಷಣೆ

ಉಪರಾಷ್ಟ್ರಪತಿ ಚುನಾವಣೆ -ಎನ್​ಡಿಎ ಅಭ್ಯರ್ಥಿಯಾಗಿ ಜಗದೀಪ್​ ಧನ್ಖರ್​ ಹೆಸರು ಘೋಷಣೆ
ಉಪರಾಷ್ಟ್ರಪತಿ ಚುನಾವಣೆ:ಎನ್​ಡಿಎ ಅಭ್ಯರ್ಥಿಯಾಗಿ ಜಗದೀಪ್​ ಧನ್ಕರ್​ ಹೆಸರು ಘೋಷಣೆ
TV9 Web
| Edited By: |

Updated on:Jul 17, 2022 | 6:27 AM

Share

ನವದೆಹಲಿ: ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಎನ್ ಡಿಎ ಮೈತ್ರಿಕೂಟವು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್ (Jagdeep Dhankhar) ಅವರನ್ನು ಆಯ್ಕೆ ಮಾಡಿದೆ. ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.

ನವದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಪ್ರಸ್ತುತ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್​ ಧನ್ಖರ್ ಅವರ ಹೆಸರನ್ನು ಪ್ರಕಟಿಸಿದರು.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಇತರೆ ಪ್ರಮುಖ ನಾಯಕರು ಪಕ್ಷದ ಪ್ರಧಾನ ಕಚೇರಿಯಲ್ಲಿ ಶನಿವಾರ ಭೇಟಿಯಾಗಿ ಸಭೆ ನಡೆಸಿದರು.

ಯಾರು ಈ ಜಗದೀಪ್ ಧನ್ಖರ್?

ರಾಜಸ್ಥಾನ ಜೈಪುರದ ಮಹಾರಾಜ ಕಾಲೇಜಿನಲ್ಲಿ ಭೌತಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. 1978-79 ರಲ್ಲಿ ಜೈಪುರ ವಿಶ್ವವಿದ್ಯಾಲಯದಿಂದ LLB ಪದವಿ ಪಡೆದರು. ಅದಕ್ಕೂ ಮೊದಲು, ಅವರು 1951 ರಲ್ಲಿ ಜನ್ಮಸ್ಥಳವಾದ ಜುಂಜುನುವಿನ ಕಿಥಾನ ಗ್ರಾಮದ ಸರ್ಕಾರಿ ಶಾಲೆಯಿಂದ ಪ್ರಾಥಮಿಕ ಶಿಕ್ಷಣದ ನಂತರ ಅರ್ಹ ವಿದ್ಯಾರ್ಥಿವೇತನದಲ್ಲಿ ಚಿತ್ತೋರ್‌ಗಢದ ಸೈನಿಕ ಶಾಲೆಯಿಂದ ತಮ್ಮ ಶಾಲಾ ಶಿಕ್ಷಣವನ್ನು ಮುಗಿಸಿದರು. ಅವರು ಸುದೇಶ್ ಧನ್ಖರ್ ಅವರನ್ನು ವಿವಾಹವಾಗಿದ್ದಾರೆ. ದಂಪತಿಗೆ ಮಗಳು ಇದ್ದಾಳೆ.

ಜಗದೀಪ್ ಧನ್ಖರ್ ಅವರು ಸುದೀರ್ಘವಾಗಿ ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಸಾರ್ವಜನಿಕ ಸೇವೆಯಲ್ಲಿದ್ದಾರೆ. 1989 ರ ಲೋಕಸಭಾ ಚುನಾವಣೆಯಲ್ಲಿ ಜುಂಜುನು ಲೋಕಸಭಾ ಕ್ಷೇತ್ರದಿಂದ (Jhunjhunu) ಸಂಸತ್ ಸದಸ್ಯರಾಗಿ ಆಯ್ಕೆಯಾದ ನಂತರ ಅವರು ಸಾರ್ವಜನಿಕ ಜೀವನವನ್ನು ಪ್ರವೇಶಿಸಿದರು.

ಅದಾದ ಮೇಲೆ, ಅವರು 1990 ರಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದರು. 1993 ರಲ್ಲಿ ಅವರು ಅಜ್ಮೀರ್ ಜಿಲ್ಲೆಯ ಕಿಶನ್ ಗಢ್ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾದರು.

ಜುಲೈ 2019 ರಲ್ಲಿ, ಅವರು ಪಶ್ಚಿಮ ಬಂಗಾಳದ ಗವರ್ನರ್ ಆಗಿ ನೇಮಕಗೊಂಡರು. ಅಲ್ಲಿ ಅವರ ಸಕ್ರಿಯ ಕೆಲಸವನ್ನು ಮೆಚ್ಚಿ ಜನತೆಯ ರಾಜ್ಯಪಾಲ (ಪೀಪಲ್ಸ್ ಗವರ್ನರ್) ಆಗಿ ಗುರುತಿಸಿಕೊಂಡಿದ್ದಾರೆ.

2017 ರಲ್ಲಿ, ಬಿಹಾರದ ಗವರ್ನರ್ ಆಗಿದ್ದ ರಾಮ್ ನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಸ್ಪರ್ಧೆಗೆ ಆಯ್ಕೆ ಮಾಡಿದ ನಂತರ ಬಿಜೆಪಿ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಸಂಸದರಾಗಿದ್ದ ಅಂದಿನ ಕ್ಯಾಬಿನೆಟ್ ಸಚಿವ ಎಂ ವೆಂಕಯ್ಯ ನಾಯ್ಡು ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಹೆಸರಿಸಿತ್ತು.

ದೇಶದ ಎರಡು ಅತ್ಯುನ್ನತ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಲು ಕೋವಿಂದ್ ಮತ್ತು ನಾಯ್ಡು ಇಬ್ಬರೂ ಸುಲಲಿತವಾಗಿ ಚುನಾವಣೆ ಗೆದ್ದಿದ್ದರು. ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಕೊನೆಗೊಳ್ಳಲಿದೆ.

ಇನ್ನು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆ ಕಣದಲ್ಲಿದ್ದಾರೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತದಾನ ನಡೆಯಲಿದೆ.

Published On - 8:02 pm, Sat, 16 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ