AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿದ್ದುಕೊಂಡೇ ಪಾಕಿಸ್ತಾನ ಗುಪ್ತಚರ ಸಂಸ್ಥೆಗೆ ಭಾರತೀಯ ಸೇನೆಯ ಮಾಹಿತಿ ನೀಡ್ತಿದ್ದ ಅಮ್ರಿಕ್, ನಿವೃತ್ತ ಐಎಎಸ್​ ಅಧಿಕಾರಿ ಸಾಥ್

ಮಾದಕದ್ರವ್ಯ ಕಳ್ಳಸಾಗಣೆದಾರ ಅಮ್ರಿಕ್ ಸಿಂಗ್ ಪಟಿಯಾಲ ಕೇಂದ್ರ ಕಾರಾಗೃಹದಲ್ಲಿದ್ದುಕೊಂಡೇ ಭಾರತ ಸೇನೆಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ನೀಡುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲ ನಿವೃತ್ತ ಐಎಎಸ್​ ಅಧಿಕಾರಿಯೊಬ್ಬರು ಈತನನ್ನು ನೋಡಲು ಆಗಾಗ ಕಾರಾಗೃಹಕ್ಕೆ ಬರುತ್ತಿದ್ದರು ಎನ್ನಲಾಗಿದೆ. ನಿವೃತ್ತ ಐಎಎಸ್​ ಅಧಿಕಾರಿಯು ಅಮರಿಕ್​ ಸಿಂಗ್​ನನ್ನು ತನ್ನ ಸೋದರಳಿಯ ಎಂದು ಹೇಳಿದ್ದರು. ಈ ಅಧಿಕಾರಿ ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ನಡುವಿನ ಸಂಬಂಧದ ಕುರಿತು ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.

ಕೇಂದ್ರ ಕಾರಾಗೃಹ
ನಯನಾ ರಾಜೀವ್
|

Updated on:Sep 04, 2023 | 1:10 PM

Share

ಮಾದಕದ್ರವ್ಯ ಕಳ್ಳಸಾಗಣೆದಾರ ಅಮ್ರಿಕ್ ಸಿಂಗ್ ಪಟಿಯಾಲ ಕೇಂದ್ರ ಕಾರಾಗೃಹದಲ್ಲಿದ್ದುಕೊಂಡೇ ಭಾರತ ಸೇನೆಯ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ನೀಡುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲ ನಿವೃತ್ತ ಐಎಎಸ್​ ಅಧಿಕಾರಿಯೊಬ್ಬರು ಈತನನ್ನು ನೋಡಲು ಆಗಾಗ ಕಾರಾಗೃಹಕ್ಕೆ ಬರುತ್ತಿದ್ದರು ಎನ್ನಲಾಗಿದೆ. ನಿವೃತ್ತ ಐಎಎಸ್​ ಅಧಿಕಾರಿಯು ಅಮರಿಕ್​ ಸಿಂಗ್​ನನ್ನು ತನ್ನ ಸೋದರಳಿಯ ಎಂದು ಹೇಳಿದ್ದರು. ಈ ಅಧಿಕಾರಿ ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ನಡುವಿನ ಸಂಬಂಧದ ಕುರಿತು ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.

ಪಂಜಾಬ್ ಪೊಲೀಸರು ಇಂದು ಆರೋಪಿಯ ವಿಚಾರಣೆ ನಡೆಸಲಿದ್ದಾರೆ, ಅಮ್ರಿಕ್ ಸಿಂಗ್ ವಿರುದ್ಧ ಪ್ರಕರಣ ದಾಖಲಾದ ನಂತರ ಪೊಲೀಸರು ಜೈಲಿನಲ್ಲಿ ಅವರನ್ನು ಭೇಟಿಯಾದವರ ಬಗ್ಗೆ ಜೈಲು ಆಡಳಿತದಿಂದ ಮಾಹಿತಿ ಕೇಳಿದ್ದು, ಕೆಲ ದಿನಗಳ ಹಿಂದೆ ನಿವೃತ್ತ ಐಎಎಸ್ ಅಧಿಕಾರಿ ಅವರನ್ನು ಭೇಟಿ ಮಾಡಿರುವುದು ಬಹಿರಂಗವಾಗಿದೆ. ಅವರನ್ನು ಭೇಟಿಯಾಗಲು ಬರುವವರನ್ನೂ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಪಂಜಾಬ್‌ನ ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಉಪ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಮ್ರಿಕ್ ಸಿಂಗ್ ಕೂಡ ಜೈಲಿನೊಳಗೆ ಮೊಬೈಲ್ ಮೂಲಕ ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಎಂದು ಹೇಳಲಾಗುತ್ತಿದೆ. ಭಯೋತ್ಪಾದಕರು ಮತ್ತು ಆತನ ಜಾಲವನ್ನು ಬಳಸಿಕೊಂಡು ಭಾರತೀಯ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿ ಐಎಸ್‌ಐ ಏಜೆಂಟ್ ಶೇರ್ ಖಾನ್‌ಗೆ ರವಾನಿಸಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮತ್ತಷ್ಟು ಓದಿ: ಹಿಂಡಲಗಾ ಜೈಲಿನ ಅಕ್ರಮ ಬಯಲು ಮಾಡಿದ ಟಿವಿ9; ಕಾಸಿದ್ರೆ ಜೈಲಲ್ಲೂ ರಾಜನಂತೆ ಮೆರೆಯಬಹುದು

ಮಾದಕವಸ್ತು ಕಳ್ಳಸಾಗಣೆದಾರ ಅಮ್ರಿಕ್ ಸಿಂಗ್ ಕಳೆದ ಒಂದೂವರೆ ವರ್ಷಗಳಿಂದ ಜೈಲಿನಲ್ಲಿದ್ದಾರೆ. ಜೂನ್​ನಲ್ಲಿ ಆತನ ಮೊಬೈಲ್ ವಶಪಡಿಸಿಕೊಳ್ಳಲಾಗಿತ್ತು. ಈತ ವಾಟ್ಸ್ ಆ್ಯಪ್ ಮೂಲಕ ಐಎಸ್ ಐ ಏಜೆಂಟ್ ಗೆ ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ರವಾನಿಸಿದ್ದ ಎಂಬುದು ವಿಧಿವಿಜ್ಞಾನ ತನಿಖೆಯಿಂದ ತಿಳಿದುಬಂದಿದೆ.

ಇದಾದ ಬಳಿಕ ಸೆ.1ರಂದು ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಜೈಲಿನಲ್ಲಿ ಮೊಬೈಲ್ ಫೋನ್ ಹೇಗೆ ಸಿಕ್ಕಿತು, ಐಎಸ್‌ಐ ಸಂಪರ್ಕಕ್ಕೆ ಬಂದಿದ್ದು ಹೇಗೆ ಎಂಬುದರ ಕುರಿತು ಪ್ರಶ್ನೆ ಮಾಡಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:09 pm, Mon, 4 September 23

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!

ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?