AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NDUW: ಹಣಕಾಸು ಸಚಿವಾಲಯದಿಂದ ಕಾರ್ಮಿಕರಿಗೆ ಬಿಗ್ ಗಿಫ್ಟ್! ಏನದು?

ವಲಸೆ ಕಾಮಿರ್ಕರಿಗೆ ಉತ್ತಮ ವೇದಿಕೆ ಒದಗಿಸಲು ಇದೀಗ ಹಣಕಾಸು ಸಚಿವಾಲಯ ಮುಂದಾಗಿದೆ. ವಲಸೆ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಮೊದಲ ರಾಷ್ಟ್ರೀಯ ದತ್ತಾಂಶ ಸಂಗ್ರಹಣೆ (ಡಾಟಾಬೇಸ್) ಮಾಡಲು ಮತ್ತು ಸರ್ಕಾರದ ನಿರ್ದಿಷ್ಟ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಹಣಕಾಸು ಸಚಿವಾಲಯ ಚಿಂತನೆ ನಡೆಸಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ನ್ಯಾಷನಲ್ ಡಾಟಾಬೇಸ್ ಆಫ್ ಅನ್ ಆರ್ಗನೈಸ್ಡ್ ವರ್ಕಸ್ (ಎನ್ ಡಿ ಯು ಡಬ್ಲು- NDUW) ಅನ್ನು ಅಭಿವೃದ್ದಿಪಡಿಸುವ ಮೂಲಕ ವಲಸೆ ಕಾರ್ಮಿಕರು ಸೇರಿದಂತೆ ಎಲ್ಲಾ ಅಸಂಘಟಿತ ಕಾರ್ಮಿಕರ ಮಾಹಿತಿಗಳನ್ನು […]

NDUW: ಹಣಕಾಸು ಸಚಿವಾಲಯದಿಂದ ಕಾರ್ಮಿಕರಿಗೆ ಬಿಗ್ ಗಿಫ್ಟ್! ಏನದು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Nov 11, 2020 | 6:11 PM

Share

ವಲಸೆ ಕಾಮಿರ್ಕರಿಗೆ ಉತ್ತಮ ವೇದಿಕೆ ಒದಗಿಸಲು ಇದೀಗ ಹಣಕಾಸು ಸಚಿವಾಲಯ ಮುಂದಾಗಿದೆ. ವಲಸೆ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಮೊದಲ ರಾಷ್ಟ್ರೀಯ ದತ್ತಾಂಶ ಸಂಗ್ರಹಣೆ (ಡಾಟಾಬೇಸ್) ಮಾಡಲು ಮತ್ತು ಸರ್ಕಾರದ ನಿರ್ದಿಷ್ಟ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಹಣಕಾಸು ಸಚಿವಾಲಯ ಚಿಂತನೆ ನಡೆಸಿದೆ.

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ನ್ಯಾಷನಲ್ ಡಾಟಾಬೇಸ್ ಆಫ್ ಅನ್ ಆರ್ಗನೈಸ್ಡ್ ವರ್ಕಸ್ (ಎನ್ ಡಿ ಯು ಡಬ್ಲು- NDUW) ಅನ್ನು ಅಭಿವೃದ್ದಿಪಡಿಸುವ ಮೂಲಕ ವಲಸೆ ಕಾರ್ಮಿಕರು ಸೇರಿದಂತೆ ಎಲ್ಲಾ ಅಸಂಘಟಿತ ಕಾರ್ಮಿಕರ ಮಾಹಿತಿಗಳನ್ನು ಇದು ದಾಖಲಿಸುತ್ತದೆ. ಇದು ತಮ್ಮ ತಮ್ಮ ಸಾಮರ್ಥ್ಯವನ್ನು ಹಂಚಿಕೊಳ್ಳಲು ಕಾರ್ಮಿಕರಿಗೆ ಸಹಾಯಕವಾಗಿದೆ. ಇದರಿಂದ ಉದ್ಯೋಗ ನೀಡುವವರು ಸೂಕ್ತ ವ್ಯಕ್ತಿಯನ್ನು ಹುಡುಕಲು ಸುಲಭವಾಗುತ್ತದೆ. ಈ ಯೋಜನೆಯು ಜಾರಿಪಡಿಸುವುದಕ್ಕಾಗಿ ಸುಮಾರು 650 ಕೋಟಿ ರೂ ಅವಶ್ಯಕತೆಯಿದೆ ಎಂದು ಅಂದಾಜಿಸಲಾಗಿದೆ.

ಕಾರ್ಮಿಕರ ಕುರಿತು ಯಾವುದೇ ಡೇಟಾಬೇಸ್ ಇಲ್ಲದಿರುವುದರಿಂದ ಕೋವಿಡ್ ಸಮಯದಲ್ಲಿ ದೊಡ್ಡ ಸಮಸ್ಯೆಯುಂಟಾಗಿತ್ತು. ದಾಖಲೆಗಳಿಲ್ಲದ ಕಾರ್ಮಿಕರು ಕೊರೊನಾ ವೇಳೆ ತಮ್ಮ ರಾಜ್ಯಗಳಿಗೆ ಹಿಂದಿರುಗಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಈ ಡಾಟಾಬೇಸ್ ರಚನೆಯಿಂದ ಹೆಚ್ಚು ಉಪಯೋಗ ಆಗುವುದರಲ್ಲಿ ಬೇರೆ ಮಾತಿಲ್ಲ. ಈ ಯೋಜನೆ ಬಹು ಮುಖ್ಯವಾಗಿ ಕಾರ್ಮಿಕರು ಆರೋಗ್ಯ, ಸುರಕ್ಷತೆ ಹಾಗೂ ಸರ್ಕಾರಿ ಸಂಬಂಧಿತ ಯೋಜನೆಗಳನ್ನು ಪಡೆಯಲು ಸೂಕ್ತವಾಗಿದೆ.

ಉದ್ಯೋಗದಾತರಿಂದ ಕಾರ್ಮಿಕರು ವರ್ಷಕ್ಕೊಮ್ಮೆ ಪ್ರಯಾಣ ಭತ್ಯೆ  ಪಡೆಯಲು ಇದಕ್ಕೆ ಸಂಬಂಧಿತ ಕೋಡ್ ಗಳು ಖಾತ್ರಿಪಡಿಸುತ್ತದೆ. ವಲಸೆ ಕಾರ್ಮಿಕರು ಕೆಲಸದ ಹುಡುಕಾಟದಲ್ಲಿ ಉತ್ತಮ ಸಂಬಳ ಅರಸಿ, ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗುತ್ತಲೇ ಇರುತ್ತಾರೆ. ಇಂತಹ ಸಂದರ್ಭದಲ್ಲಿ ಉದ್ಯೋಗ ಇಚ್ಚೆಯ ಮಾಹಿತಿಗಳನ್ನು ಹಂಚಿಕೊಳ್ಳಲು ಒಂದೊಳ್ಳೆ ಪ್ಲಾರ್ಟ್ ಫಾರ್ಮ್​ ಇದಾಗಿದೆ.

Published On - 5:40 pm, Wed, 11 November 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ಕುಂಭಕರ್ಣನ ಜೊತೆ 30 ಅಡಿ ಎತ್ತರದ ಬೃಹತ್ 'ಕಾಕ್ರೋಚ್' ದಹನ
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ವಿಡಿಯೋ ಮಾಡಿ, 1,700 ಅಡಿ ಆಳದ ಕಣಿವೆಗೆ ಹಾರಿದ ವ್ಯಕ್ತಿ!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಶೋ ರೂಮ್‌ನಿಂದ ಏಕಾಏಕಿ ರಸ್ತೆಗೆ ನುಗ್ಗಿದ ಹೊಸ ಕಾರು!
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಅಪ್ಪನ ಅಂಬಾಸಿಡರ್ ಕಾರಿನಲ್ಲಿ ಹೆಂಡ್ತಿ ಜೊತೆ ಡಿಸಿಎಂ ಜಾಲಿರೈಡು: ವಿಡಿಯೋ
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಮೈಸೂರು ರಾಜರ ಕಾರುಗಳಿಗೆ ವಿಶೇಷ ಪೂಜೆ: ಎಲ್ಲಾ ಕಾರುಗಳ ಸಂಖ್ಯೆ 1953
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ