AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಲಯದ ಆದೇಶಗಳಲ್ಲಿ ಮಹಿಳೆಯರನ್ನು ಯಾವ ರೀತಿಯಲ್ಲಿ ಉಲ್ಲೇಖಿಸಬಾರದು ಎಂದು ನ್ಯಾಯಾಧೀಶರಿಗೆ ಸುಪ್ರೀಂಕೋರ್ಟ್ ಕೈಪಿಡಿ

ಉದಾಹರಣೆಗೆ, ಮಹಿಳೆಯು ಇನ್ನೊಬ್ಬನ ಜತೆ ಸಂಬಂಧದಲ್ಲಿರುವಾಗ ಆಕೆಯನ್ನು 'ಉಪಪತ್ನಿ' ಎಂದು ಉಲ್ಲೇಖಿಸಿರುವ ತೀರ್ಪುಗಳನ್ನು ನಾನು ನೋಡಿದ್ದೇನೆ. ಕೌಟುಂಬಿಕ ಹಿಂಸಾಚಾರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ ಅಡಿಯಲ್ಲಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಇದ್ದ ಅರ್ಜಿಗಳಲ್ಲಿ ನೀಡಿದ ತೀರ್ಪುಗಳಲ್ಲಿ ಮಹಿಳೆಯರನ್ನು 'ಕೀಪ್ಸ್' ಎಂದು ಕರೆಯಲಾಗಿದೆ ಎಂದು ಕೈಪಿಡಿಯನ್ನು ಸಿದ್ಧಪಡಿಸಲು ಇದ್ದ ಕಾರಣಗಳನ್ನು ಚಂದ್ರಚೂಡ್ ವಿವರಿಸಿದ್ದಾರೆ.

ನ್ಯಾಯಾಲಯದ ಆದೇಶಗಳಲ್ಲಿ ಮಹಿಳೆಯರನ್ನು ಯಾವ ರೀತಿಯಲ್ಲಿ ಉಲ್ಲೇಖಿಸಬಾರದು ಎಂದು ನ್ಯಾಯಾಧೀಶರಿಗೆ ಸುಪ್ರೀಂಕೋರ್ಟ್ ಕೈಪಿಡಿ
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 16, 2023 | 3:30 PM

Share

ದೆಹಲಿ ಆಗಸ್ಟ್ 16: ಕಾನೂನು ಪ್ರಕ್ರಿಯೆಗಳಲ್ಲಿ ಲಿಂಗ ಸಂವೇದನೆಯತ್ತ ಒಂದು ದೊಡ್ಡ ಹೆಜ್ಜೆಯಾಗಿ ಸುಪ್ರೀಂಕೋರ್ಟ್ (Supreme Court) ಇಂದು (ಬುಧವಾರ) ಜೆಂಡರ್ ಸ್ಟೀರಿಯೊಟೈಪ್‌ಗಳಿಂದ (Gender Stereotypes) (ಇಂಥಾ ಲಿಂಗದವರು ಹೀಗೀಗೆ ಎನ್ನುವ ದೃಷ್ಟಿಕೋನ) ತುಂಬಿದ ಪದಗಳು ಮತ್ತು ಪದಗುಚ್ಛಗಳನ್ನು ಪಟ್ಟಿ ಮಾಡುವ ಕೈಪಿಡಿಯನ್ನು ಬಿಡುಗಡೆ ಮಾಡಿದೆ. ನ್ಯಾಯಾಲಯದ ಆದೇಶಗಳಲ್ಲಿ ಇಂಥಾ ಪದ ಬಳಸದಂತೆ ಈ ಕೈಪಿಡಿ ಎಚ್ಚರಿಕೆ ನೀಡುತ್ತದೆ. ‘Handbook On Combating Gender Stereotypes’ ಬಿಡುಗಡೆ ಸಮಾರಂಭದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಅವರು ಹಿಂದಿನ ನ್ಯಾಯಾಲಯದ ತೀರ್ಪುಗಳಲ್ಲಿ ಮಹಿಳೆಯರ ಬಗ್ಗೆ ಬಳಸಲಾದ ಹಲವಾರು ಆಕ್ಷೇಪಾರ್ಹ ಪದಗಳನ್ನು ಉಲ್ಲೇಖಿಸಿದ್ದಾರೆ. ಈ ಪದಗಳು ಸರಿಯಲ್ಲ. ಈ ಕೈಪಿಡಿಯ ಉದ್ದೇಶವು ಆ ತೀರ್ಪುಗಳನ್ನು ಟೀಕಿಸುವುದು ಅಥವಾ ಅವುಗಳನ್ನು ಅನುಮಾನಿಸುವುದು ಅಲ್ಲ. ಇದು ಜೆಂಡರ್ ಸ್ಟೀರಿಯೊಟೈಪ್‌ಗಳು ಅಜಾಗರೂಕತೆಯಿಂದ ಹೇಗೆ ಶಾಶ್ವತವಾಗಿದೆ ಎಂಬುದನ್ನು ಒತ್ತಿಹೇಳುವುದಾಗಿದೆ ಎಂದು ಅವರು ಹೇಳಿದರು.

ಈ ಸ್ಟೀರಿಯೊಟೈಪ್‌ಗಳನ್ನು ವ್ಯಾಖ್ಯಾನಿಸುವುದು ಮತ್ತು ಅವರಲ್ಲಿ ಜಾಗೃತಿ ಮೂಡಿಸುವುದು ಕೈಪಿಡಿಯ ಗುರಿ. ಮಹಿಳೆಯರ ಬಗ್ಗೆ ರೂಢಿಗತವಾಗಿರುವ ಪದಗಳನ್ನು ಗುರುತಿಸಲು ನ್ಯಾಯಾಧೀಶರಿಗೆ ಇದು ಸಹಾಯ ಮಾಡುತ್ತದೆ. ಕೈಪಿಡಿಯನ್ನು ಸುಪ್ರೀಂಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಮಾರ್ಚ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ, ಮುಖ್ಯ ನ್ಯಾಯಾಧೀಶರು ಜೆಂಡರ್ ಸ್ಟೀರಿಯೊಟೈಪ್‌ಗಳನ್ನು ಉಪಯೋಗಿಸದಂತೆ ಎಚ್ಚರಿಸುವ ಕೈಪಿಡಿಯ ಬಗ್ಗೆ ಮಾತನಾಡಿದ್ದರು.

ಉದಾಹರಣೆಗೆ, ಮಹಿಳೆಯು ಇನ್ನೊಬ್ಬನ ಜತೆ ಸಂಬಂಧದಲ್ಲಿರುವಾಗ ಆಕೆಯನ್ನು ‘ಉಪಪತ್ನಿ’ ಎಂದು ಉಲ್ಲೇಖಿಸಿರುವ ತೀರ್ಪುಗಳನ್ನು ನಾನು ನೋಡಿದ್ದೇನೆ. ಕೌಟುಂಬಿಕ ಹಿಂಸಾಚಾರ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 498 ಎ ಅಡಿಯಲ್ಲಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಇದ್ದ ಅರ್ಜಿಗಳಲ್ಲಿ ನೀಡಿದ ತೀರ್ಪುಗಳಲ್ಲಿ ಮಹಿಳೆಯರನ್ನು ‘ಕೀಪ್ಸ್’ ಎಂದು ಕರೆಯಲಾಗಿದೆ ಎಂದು ಕೈಪಿಡಿಯನ್ನು ಸಿದ್ಧಪಡಿಸಲು ಇದ್ದ ಕಾರಣಗಳನ್ನು ಚಂದ್ರಚೂಡ್ ವಿವರಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಧಿಕಾರಾವಧಿಯಲ್ಲಿ ಸುಪ್ರೀಂಕೋರ್ಟ್‌ನ ಜೆಂಡರ್ ಸ್ಟೀರಿಯೊಟೈಪ್‌ಗಳನ್ನು ತೊಡೆದುಹಾಕಲು ಕೈಪಿಡಿಯು ಮತ್ತೊಂದು ಪ್ರಗತಿಪರ ಕ್ರಮವಾಗಿದೆ. ಈ ಹಿಂದೆ, ಸುಪ್ರೀಂಕೋರ್ಟ್ ತನ್ನ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಿಗೆ ಭಾಷಾಂತರಿಸುವ ಕಾರ್ಯ ಮಾಡಿತ್ತು.

ನಿನ್ನೆ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಕ್ರಮವನ್ನು ಶ್ಲಾಘಿಸಿದ್ದಾರೆ. ಮೋದಿ ಹೀಗೆ ಹೇಳುತ್ತಿದ್ದಂತೆ ಸಭಿಕರಲ್ಲಿ ಕುಳಿತಿದ್ದ ಮುಖ್ಯ ನ್ಯಾಯಮೂರ್ತಿಗಳು ಕೈಮುಗಿದಿದ್ದು ಕಾಣಿಸಿತು. ಸುಪ್ರೀಂ ಕೋರ್ಟ್ ಇದುವರೆಗೆ ತನ್ನ 9,423 ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಅಪ್‌ಲೋಡ್ ಮಾಡಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್ ಬಗ್ಗೆ ಮೋದಿ ಶ್ಲಾಘನೆ; ಅತಿಥಿಗಳು ಚಪ್ಪಾಳೆ ತಟ್ಟುತ್ತಿರುವಾಗ ವಿನೀತರಾಗಿ ಕೈ ಮುಗಿದ ಸಿಜೆಐ ಚಂದ್ರಚೂಡ್

ಸರ್ವೋಚ್ಚ ನ್ಯಾಯಾಲಯವು ಅಸ್ತಿತ್ವಕ್ಕೆ ಬಂದ ನಂತರ ಎಲ್ಲಾ ಭಾಷೆಗಳ ಜನರಿಗೆ ತಲುಪಲು ಒಟ್ಟು 35,000 ಪ್ರಮುಖ ನಿರ್ಧಾರಗಳನ್ನು ಮಾಡುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು. ಹಿಂದಿಯ ಜೊತೆಗೆ, ತೀರ್ಪುಗಳು ಈಗ ಸುಪ್ರೀಂಕೋರ್ಟ್ ವೆಬ್‌ಸೈಟ್‌ನಲ್ಲಿ ಒಡಿಯಾ, ಗುಜರಾತಿ, ತಮಿಳು, ಅಸ್ಸಾಮಿ, ಖಾಸಿ, ಗಾರೋ, ಪಂಜಾಬಿ, ನೇಪಾಳಿ ಮತ್ತು ಬಂಗಾಳಿ ಭಾಷೆಗಳಲ್ಲಿ ಲಭ್ಯವಿದೆ. ಶೀಘ್ರದಲ್ಲೇ ಈ ಪಟ್ಟಿಗೆ ಇನ್ನಷ್ಟು ಭಾಷೆಗಳನ್ನು ಸೇರಿಸಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್