BIG NEWS: ಎಎಪಿ 10 ಶಾಸಕರನ್ನು ಸಂಪರ್ಕಿಸಿದ ಬಿಜೆಪಿ, ಅರವಿಂದ್ ಕೇಜ್ರಿವಾಲ್ ಆರೋಪ

ಪಂಜಾಬ್ ಸರ್ಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಮ್ ಆದ್ಮಿ ಪಕ್ಷದ (ಎಎಪಿ) 10 ಶಾಸಕರನ್ನು ಸಂಪರ್ಕಿಸಿದೆ ಎಂದು ಅರವಿಂದ್ ಕೇಜ್ರಿವಾಲ್ ಇಂದು ಆರೋಪಿಸಿದ್ದಾರೆ.

BIG NEWS: ಎಎಪಿ 10 ಶಾಸಕರನ್ನು ಸಂಪರ್ಕಿಸಿದ ಬಿಜೆಪಿ, ಅರವಿಂದ್ ಕೇಜ್ರಿವಾಲ್ ಆರೋಪ
Arvind Kejriwal
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 14, 2022 | 1:22 PM

ದೆಹಲಿ: ಪಂಜಾಬ್ ಸರ್ಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಮ್ ಆದ್ಮಿ ಪಕ್ಷದ (ಎಎಪಿ) 10 ಶಾಸಕರನ್ನು ಸಂಪರ್ಕಿಸಿದೆ ಎಂದು ಅರವಿಂದ್ ಕೇಜ್ರಿವಾಲ್ ಇಂದು ಆರೋಪಿಸಿದ್ದಾರೆ. ನಮ್ಮ 10 ಶಾಸಕರನ್ನು ಪಂಜಾಬ್‌ನಲ್ಲಿ ಬಿಜೆಪಿ ಸಂಪರ್ಕಿಸಿದೆ ಬಿಜೆಪಿಯವರು ಶಾಸಕರನ್ನು ಖರೀದಿಸುತ್ತಿದ್ದಾರೆ ಮತ್ತು ನಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಇತ್ತೀಚೆಗೆ ಬಿಜೆಪಿಯು ದೆಹಲಿಯಲ್ಲಿ ಆಪರೇಷನ್ ಕಮಲವನ್ನು ಬಿಜೆಪಿ ಮಾಡುತ್ತಿದೆ. ನಮ್ಮ ಶಾಸಕರನ್ನು ಪಕ್ಷಾಂತರಕ್ಕೆ ಪ್ರೇರೇಪಿಸುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಆಪರೇಷನ್ ಕಮಲ ದೆಹಲಿಯಲ್ಲಿ ವಿಫಲವಾಗಿರುವ ಕಾರಣ ಬಿಜೆಪಿ ಪಂಜಾಬ್‌ನತ್ತ ಮುಖ ಮಾಡಿದೆ ಎಂದು ಹೇಳಿದರು. ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಲು ಎಎಪಿ ಶಾಸಕರನ್ನು ದೆಹಲಿಗೆ ಬರುವಂತೆ ಬಿಜೆಪಿ ಹೇಳಿದೆ. ಪಕ್ಷವನ್ನು ಬದಲಾಯಿಸಲು ಕೋಟಿಗಳಷ್ಟು ಆಫರ್ ಮಾಡಲಾಗಿದೆ ಎಂದು ಪಂಜಾಬ್ ಸಚಿವ ಹರ್ಪಾಲ್ ಚೀಮಾ ಆರೋಪಿಸಿದ್ದಾರೆ.

ದಿಲ್ಲಿಗೆ ಬನ್ನಿ, ಬಿಜೆಪಿಯ ಹಿರಿಯರನ್ನು ಭೇಟಿಯಾಗುವಂತೆ ಮಾಡುತ್ತೇನೆ ಎಂದು ಪಕ್ಷದ ಶಾಸಕರೊಬ್ಬರು ಸ್ವೀಕರಿಸಿದ ಕರೆಗಳಲ್ಲಿ ಬಹಿರಂಗವಾಗಿದೆ ಎಂದು ಸಚಿವ ಹರ್ಪಾಲ್ ಚೀಮಾ ಹೇಳಿದ್ದಾರೆ. ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿ ಶಾಸಕರಿಗೆ 25 ಕೋಟಿ ರೂ ನೀಡುತ್ತಿದೆ. ಕರ್ನಾಟಕದಲ್ಲಿ ಆಪರೇಷನ್ ಕಮಲ ಯಶಸ್ವಿಯಾಗಿರಬಹುದು, ಆದರೆ ದೆಹಲಿ ಶಾಸಕರು ದೃಢವಾಗಿದ್ದು ಬಿಜೆಪಿ ಕಾರ್ಯಾಚರಣೆಯನ್ನು ವಿಫಲಗೊಳಿಸಿದ್ದಾರೆ ಎಂದು ಚೀಮಾ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪಂಜಾಬ್‌ನಲ್ಲಿ ಸರ್ಕಾರ ಬದಲಾವಣೆಯಾದರೆ, ನಿಮಗೆ (ಶಾಸಕರು) ಬಿಜೆಪಿ ಸರ್ಕಾರ ಬಂದರೆ ಪ್ರಮುಖ ಹುದ್ದೆಗಳನ್ನು ನೀಡಲಾಗುವುದು. ಎಂದು ಶ್ರೀ ಚೀಮಾ ಹೇಳಿದರು, ಭಗವಂತ್ ಮಾನ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಹಲವಾರು ಕರೆಗಳು ಬಂದಿವೆ ಎಂದು ಹೇಳಿದ್ದರೆ

ಆರೋಪವನ್ನು ತಳ್ಳಿಹಾಕಿದ ಬಿಜೆಪಿ

ಪಂಜಾಬ್ ಸಚಿವ ಹರ್ಪಾಲ್ ಚೀಮಾ ಅವರು ಬಿಜೆಪಿ ವಿರುದ್ಧ ಆಧಾರರಹಿತ ಆರೋಪವನ್ನು ಮಾಡುತ್ತಿದ್ದಾರೆ. ಪಂಜಾಬ್‌ನಲ್ಲಿ ಎಎಪಿ ದೊಡ್ಡ ವಿಭಜನೆಗೆ ಕಾರಣವಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಕೇಜ್ರಿವಾಲ್ ಅವರ ಹಸ್ತಕ್ಷೇಪದಿಂದ ಪಕ್ಷವು ಛಿದ್ರವಾಗುವ ಹಂತದಲ್ಲಿದೆ ಎಂದು ಬಿಜೆಪಿಯ ಸುಭಾಷ್ ಶರ್ಮಾ ಹೇಳಿದ್ದಾರೆ.

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ