BIG NEWS: ದಲಿತರ ಮೇಲಿನ ದೌರ್ಜನ್ಯ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಪೊಲೀಸ್ ವಶಕ್ಕೆ

ರಾಜಸ್ಥಾನದಲ್ಲಿ ಹತ್ಯೆಗೀಡಾದ ದಲಿತ ಬಾಲಕನ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಜೋಧ್‌ಪುರ ವಿಮಾನ ನಿಲ್ದಾಣದಲ್ಲಿ ಪೊಲೀಸ್ ವಶಕ್ಕೆ  ಪಡೆದಿದ್ದಾರೆ.

BIG NEWS: ದಲಿತರ ಮೇಲಿನ ದೌರ್ಜನ್ಯ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಪೊಲೀಸ್ ವಶಕ್ಕೆ
Chandrasekhar Azad
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 17, 2022 | 7:17 PM

ರಾಜಸ್ಥಾನ: ಭೀಮ್ ಆರ್ಮಿ (Bhim Army) ಮುಖ್ಯಸ್ಥ ಚಂದ್ರಶೇಖರ್ ಆಜಾದ್ (Chandrashekhar Azad ) ಅವರನ್ನು ರಾಜಸ್ಥಾನ ಪೊಲೀಸರು ಜೋಧಪುರ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ. ಕಳೆದ ತಿಂಗಳು ಮೇಲ್ಜಾತಿಯವರಿಗೆ ಇರಿಸಿದ್ದ ನೀರಿನ ಪಾತ್ರೆ ಮುಟ್ಟಿನೆಂದು  ದಲಿತ ಬಾಲಕನಿಗೆ (Dalit Boy) ಶಿಕ್ಷಕರೊಬ್ಬರು ಥಳಿಸಿದ್ದು ಕಳೆದ ಶನಿವಾರ ಬಾಲಕ ಮೃತಪಟ್ಟಿದ್ದ. ರಾಜಸ್ಥಾನದ ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ಖಾಸಗಿ ಶಾಲೆಯ ವಿದ್ಯಾರ್ಥಿ ಇಂದ್ರ ಮೇಘವಾಲ್ ಜುಲೈ 20 ರಂದು ಕುಡಿಯುವ ನೀರಿನ ಮಡಕೆಯನ್ನು ಮುಟ್ಟಿದ್ದನೆಂದು ಅಲ್ಲಿನ ಶಿಕ್ಷಕರೊಬ್ಬರು ಥಳಿಸಿದ್ದರು.  ಬಾಲಕ ಆಗಸ್ಟ್ 13 ರಂದು ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದ. ಈ ಘಟನೆಯು ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಭಾರೀ ಆಕ್ರೋಶ ಮತ್ತು ರಾಜಕೀಯ ಜಟಾಪಟಿಗೆ ಕಾರಣವಾಗಿದೆ,.  ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (NCPCR) ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ವಿಷಯ ಗಂಭೀರವಾಗಿದೆ ಎಂದು ಹೇಳಿದೆ. ಅದೇ ವೇಳೆ  ಎಫ್‌ಐಆರ್‌ನ ಪ್ರತಿಗಳು, ಆರೋಪಿಗಳ ವಿರುದ್ಧ ಆಡಳಿತವು ತೆಗೆದುಕೊಂಡ ಕ್ರಮ ಮತ್ತು ಏಳು ದಿನಗಳಲ್ಲಿ ಪೊಲೀಸರು ತೆಗೆದುಕೊಂಡ ಕ್ರಮದ ಪ್ರತಿಯನ್ನು ಕೇಳಿದೆ.

ನೀರಿನ ಮಡಕೆ ಮುಟ್ಟಿದ್ದಕ್ಕೆ ಥಳಿಸಿ ಬಾಲಕ ಸಾವಿಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಮಕ್ಕಳ  ಹಕ್ಕುಗಳ ಆಯೋಗ ರಾಜಸ್ಥಾನ ಸರ್ಕಾರಕ್ಕೆ ಹೇಳಿದೆ. ಏತನ್ಮಧ್ಯೆ, ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ರಾಜಸ್ಥಾನದ ಬಾರನ್ ಮುನ್ಸಿಪಲ್ ಕೌನ್ಸಿಲ್ ನ  12 ಕಾಂಗ್ರೆಸ್ ಕೌನ್ಸಿಲರ್ ಗಳು ಮಂಗಳವಾರ ರಾಜೀನಾಮೆ  ನೀಡಿದ್ದಾರೆ.

ಇದೇ ವಿಚಾರವಾಗಿ ಬರನ್-ಅತ್ರು ಕ್ಷೇತ್ರದ ಶಾಸಕ ಪನಚಂದ್ ಮೇಘವಾಲ್ ಸೋಮವಾರ ಸಿಎಂಗೆ ರಾಜೀನಾಮೆ ಸಲ್ಲಿಸಿದ್ದಾರೆ. ದೇಶ 75 ನೇ ಸ್ವಾತಂತ್ರ್ಯದ ವರ್ಷವನ್ನು ಆಚರಿಸುತ್ತಿರುವಾಗ, ದಲಿತರು ಮತ್ತು ವಂಚಿತರನ್ನು ಇನ್ನೂ ಮಡಿಕೆಯಿದ ನೀರು ಕುಡಿದಿದ್ದಕ್ಕಾಗಿ ಚಿತ್ರಹಿಂಸೆ ನೀಡಿ ಕೊಂದು ಮೀಸೆ ತಿರುವಲಾಗುತ್ತದೆ ಎಂದು ಪನಚಂದ್ ಮೇಘವಾಲ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ
Image
ರಾಜಸ್ಥಾನದಲ್ಲಿ ದಲಿತ ಬಾಲಕನ ಸಾವು ಪ್ರಕರಣ: ಶಾಸಕನ ರಾಜೀನಾಮೆ ಬೆನ್ನಲ್ಲೇ 12 ಕೌನ್ಸಿಲರ್​​ಗಳ ರಾಜೀನಾಮೆ
Image
ನಿನ್ನೆಯ ಕಾಂಗ್ರೆಸ್ ಕಾರ್ಯಕ್ರಮದ ವಿರುದ್ಧ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ವ್ಯಂಗ್ಯ; ಬಿಜೆಪಿ ವಿರುದ್ಧ ಆಕ್ರೋಶ
Image
BIG NEWS: ದಲಿತರ ಮೇಲಿನ ದೌರ್ಜನ್ಯ: ರಾಜಸ್ಥಾನದ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ರಾಜೀನಾಮೆ
Image
ನೀರಿನ ಪಾತ್ರೆ ಮುಟ್ಟಿದ್ದಕ್ಕೆ ಶಾಲಾ ಶಿಕ್ಷಕನಿಂದ ಥಳಿತಕ್ಕೊಳಗಾದ ದಲಿತ ಬಾಲಕ ಸಾವು; ರಾಜಸ್ಥಾನ ಸರ್ಕಾರದ ವಿರುದ್ಧ ಬಿಜೆಪಿ, ಬಿಎಸ್​​ಪಿ ಕಿಡಿ

“ತನಿಖೆಯ ಹೆಸರಿನಲ್ಲಿ ಕಡತಗಳನ್ನು ಒಂದು ಸ್ಥಳದಿಂದ ಇನ್ನೊಂದಕ್ಕೆ ಸ್ಥಳಾಂತರಿಸುವ ಮೂಲಕ ನ್ಯಾಯಾಂಗದ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ಹೆಚ್ಚಿನ ಪ್ರಕರಣಗಳನ್ನು ಅಂತಿಮ ವರದಿಯೊಂದಿಗೆ ಮುಚ್ಚಲಾಗಿದೆಯ. ನಾನು ರಾಜ್ಯ ವಿಧಾನಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ನಂತರವೂ ಆಡಳಿತಾಧಿಕಾರಿಗಳು ಕ್ರಮಕ್ಕೆ ಮುಂದಾಗಲಿಲ್ಲ ಎಂದು ಅವರು ಹೇಳಿದ್ದಾರೆ.

Published On - 6:01 pm, Wed, 17 August 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್