BIG NEWS: ಬಾಬರಿ ಮಸೀದಿ ಧ್ವಂಸ ಪ್ರಕರಣ: ಎಲ್ಲಾ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಎಲ್ಲ ಪ್ರಕರಣ ರದ್ದು ಮಾಡಿದ ಸುಪ್ರೀಂಕೋರ್ಟ್

BIG NEWS: ಬಾಬರಿ ಮಸೀದಿ ಧ್ವಂಸ ಪ್ರಕರಣ: ಎಲ್ಲಾ ಪ್ರಕರಣ ರದ್ದುಗೊಳಿಸಿದ ಸುಪ್ರೀಂ
Babri Masjid and Supreme Court
Edited By:

Updated on: Aug 30, 2022 | 1:03 PM

1992 ರಲ್ಲಿ ಅಯೋಧ್ಯೆಯಲ್ಲಿ (Ayodhya) ಬಾಬರಿ ಮಸೀದಿ ಧ್ವಂಸ (Babri Masjid) ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಅದರ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ತೆರೆ ಎಳೆದಿದೆ. ಗುಜರಾತ್‌ನಲ್ಲಿ 2002 ರ ಗೋಧ್ರಾ ನಂತರದ(Godhra communal riots) ಕೋಮು ಗಲಭೆಯ ಹಿನ್ನೆಲೆಯಲ್ಲಿ ಆರಂಭಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು 2019 ರ ಸುಪ್ರೀಂ ಕೋರ್ಟ್‌ನ ತೀರ್ಪಿನ ದೃಷ್ಟಿಯಿಂದ ಸಮಯ ಕಳೆದಂತೆ, ನಿಂದನೆ ಪ್ರಕರಣಗಳು ಉಳಿದುಕೊಂಡಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಗೋಧ್ರಾ ನಂತರದ ಗಲಭೆಗಳ ಹಿನ್ನೆಲೆಯಲ್ಲಿ ಆರಂಭಿಸಲಾದ ಪ್ರಕ್ರಿಯೆಗಳ ಕುರಿತು ಉಲ್ಲೇಖಿಸಿದ ನ್ಯಾಯಾಲಯ, ನ್ಯಾಯಾಲಯದ ಆದೇಶದ ಮೇರೆಗೆ ವಿಶೇಷ ತನಿಖಾ ತಂಡವು ಮೊಕದ್ದಮೆ ಹೂಡಿರುವ ಒಂಬತ್ತು ಪ್ರಮುಖ ಪ್ರಕರಣಗಳ ಪೈಕಿ ಎಂಟು ಪ್ರಕರಣಗಳಲ್ಲಿ ವಿಚಾರಣೆಗಳು ಮುಗಿದು ಹೋಗುವುದರೊಂದಿಗೆ ಪ್ರಕರಣಗಳು ಸಮಯ ಕಳೆದಂತೆ ನಿರುಪಯುಕ್ತವಾಗಿವೆ ಎಂದು ಹೇಳಿದೆ. ನರೋದಾ ಗಾಂವ್‌ನ ವಿಚಾರಣಾ ನ್ಯಾಯಾಲಯದಲ್ಲಿ ಒಂದು ಪ್ರಕರಣದಲ್ಲಿ ಅಂತಿಮ ವಾದಗಳು ನಡೆಯುತ್ತಿವೆ.

ಏತನ್ಮಧ್ಯೆ, 2002 ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ “ಮುಗ್ಧ ಜನರನ್ನು” ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಬಂಧಿತರಾಗಿರುವ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

ಪ್ರಕರಣದಲ್ಲಿ ಗುಜರಾತ್ ಪರವಾಗಿ ಹಾಜರಾಗಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಗುರುವಾರ ನ್ಯಾಯಮೂರ್ತಿ ಯುಯು ಲಲಿತ್ ಅವರ ಪೀಠಕ್ಕೆ ಸೆಟಲ್ವಾಡ್ ಅವರ ಅರ್ಜಿಗೆ ಪ್ರತಿಕ್ರಿಯೆ ಸಿದ್ಧವಾಗಿದೆ ಆದರೆ ಅದಕ್ಕೆ ಕೆಲವು ತಿದ್ದುಪಡಿಗಳ ಅಗತ್ಯವಿದೆ ಎಂದು ಹೇಳಿದರು.

ಪ್ರಕರಣದಲ್ಲಿ ಜೂನ್‌ನಲ್ಲಿ ಬಂಧಿತರಾಗಿದ್ದ ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ಕುರಿತು ಆಗಸ್ಟ್ 22 ರಂದು ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿತ್ತು.

Published On - 12:17 pm, Tue, 30 August 22