AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಚಾನಲ್​ಗಳನ್ನು ಬ್ಯಾನ್ ಮಾಡಿದ ಕೇಂದ್ರ

YouTube Channel Ban India: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ  ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 YouTube ಚಾನಲ್‌ಗಳನ್ನು ನಿರ್ಬಂಧಿಸಿದೆ.

BIG NEWS: 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಚಾನಲ್​ಗಳನ್ನು ಬ್ಯಾನ್ ಮಾಡಿದ ಕೇಂದ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 18, 2022 | 12:01 PM

Share

ದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ  ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 YouTube ಚಾನಲ್‌ಗಳನ್ನು ನಿರ್ಬಂಧಿಸಿದೆ.  ಐಟಿ ನಿಯಮಗಳು, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ YouTube ಸುದ್ದಿ ಚಾನಲ್‌ಗಳನ್ನು ನಿರ್ಬಂಧಿಸಲಾಗಿದೆ

ನಿರ್ಬಂಧಿಸಲಾದ ಯೂಟ್ಯೂಬ್ ಚಾನೆಲ್‌ಗಳು 114 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿವೆ ಮತ್ತು 85 ಲಕ್ಷ 73 ಸಾವಿರ ಚಂದಾದಾರರು ಹೊಂದಿದೆ. ಯೂಟ್ಯೂಬ್‌ನಲ್ಲಿ ನಿರ್ಬಂಧಿಸಲಾದ ಚಾನೆಲ್‌ಗಳಿಂದ ನಕಲಿ ಭಾರತ-ವಿರೋಧಿ ವಿಷಯವನ್ನು ಹಣಗಳಿಸಲಾಗುತ್ತಿದೆ ಎಂದು ಹೇಳಿಲಾಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಐಟಿ ನಿಯಮಗಳು, 2021 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಎಂಟು (8) ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್‌ಗಳು, ಒಂದು (1) ಫೇಸ್‌ಬುಕ್ ಖಾತೆ ಮತ್ತು ಎರಡು ಫೇಸ್‌ಬುಕ್ ಪೋಸ್ಟ್‌ಗಳನ್ನು ನಿರ್ಬಂಧಿಸಲು ಆ.16 ರಂದು ಆದೇಶಗಳನ್ನು ಹೊರಡಿಸಿದೆ. ನಿರ್ಬಂಧಿಸಲಾದ ಯೂಟ್ಯೂಬ್ ಚಾನೆಲ್‌ಗಳು 114 ಕೋಟಿಗೂ ಹೆಚ್ಚು ಸಂಚಿತ ವೀಕ್ಷಕರನ್ನು ಹೊಂದಿದ್ದು, 85 ಲಕ್ಷಕ್ಕೂ ಹೆಚ್ಚು ಬಳಕೆದಾರರಿಂದ ಚಂದಾದಾರರಾಗಿದ್ದಾರೆ.

ಇದನ್ನೂ ಓದಿ
Image
ಚುನಾವಣಾ ಸಮಿತಿಯಲ್ಲಿ ಸ್ಥಾನ, ಬಿಎಸ್​ವೈ ಫುಲ್ ಜೋಶ್; ರಾಜ್ಯ ಬಿಜೆಪಿ ಘಟಕದಿಂದ ಸನ್ಮಾನ ಮಾಡಲು ನಿರ್ಧಾರ
Image
‘ದಿ ಕಾಶ್ಮೀರ್​ ಫೈಲ್ಸ್​ ಚಿತ್ರ ಆಸ್ಕರ್​ಗೆ ಹೋದ್ರೆ ಭಾರತಕ್ಕೆ ಮುಜುಗರ; ಇದು ದ್ವೇಷ ಹಬ್ಬಿಸುವ ಕಸ’: ಕೇಳಿಬಂತು ಕಟು ಟೀಕೆ
Image
Netaji Subhash Chandra Bose: ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ 77ನೇ ಪುಣ್ಯತಿಥಿ: ಸ್ಮರಿಸಿದ ನಾಯಕರು
Image
FM Nirmala Sitharaman Birthday Special: ಇಂದು ವಿತ್ತಸಚಿವೆ ನಿರ್ಮಲ ಸೀತಾರಾಮನ್ ಜನ್ಮದಿನ; ಅವರು ಕೈಗೊಂಡ ಐದು ಪ್ರಮುಖ ನಿರ್ಧಾರಗಳು ಇಲ್ಲಿವೆ

ಈ ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕಟಿಸಿದ ವಿಷಯದ ಉದ್ದೇಶವು ಭಾರತದಲ್ಲಿನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷವನ್ನು ಹರಡುವುದಾಗಿದೆ. ಆ ಕಾರಣದಿಂದ ನಿರ್ಬಂಧಿಸಲಾದ YouTube ಚಾನಲ್‌ಗಳ ವಿವಿಧ ವೀಡಿಯೊಗಳಲ್ಲಿ ತಪ್ಪು ಮಾಹಿತಿ ಮತ್ತು ಐಟಿ ನಿಯಮಗಳನ್ನು ಉಲ್ಲಂಘನೆ ಮಾಡಿದೆ ಎಂದು ಈ ಚಾನಲ್​ಗಳನ್ನು ಬ್ಯಾನ್ ಮಾಡಲು ನಿರ್ಧರಿಸಿದೆ. ಭಾರತ ಸರ್ಕಾರವು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತಂದಿದೆ ಎಂದು ಸುಳ್ಳು ಸುದ್ದಿಯನ್ನು ಹಂಚಿಕೊಂಡಿದೆ. ಭಾರತದಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗಳನ್ನು ಇತ್ಯಾದಿಗಳನ್ನು ಭಾರತ ಸರ್ಕಾರ ನಿಷೇಧಿಸಿದೆ. ಇಂತಹ ವಿಷಯವು ದೇಶದಲ್ಲಿ ಕೋಮು ಸೌಹಾರ್ದತೆಗಳಿಗೆ ಧಕ್ಕೆ ಉಂಟುಮಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ವಿಷಯಗಳನ್ನು ಈ ಚಾಲನ್​​ನಲ್ಲಿ ಪ್ರಸಾರ ಮಾಡಲಾಗಿದೆ ಎಂದು ಹೇಳಿದೆ.

ಈ ಯೂಟ್ಯೂಬ್ ಚಾನೆಲ್‌ನಲ್ಲಿ ಭಾರತೀಯ ಸಶಸ್ತ್ರ ಪಡೆಗಳು, ಜಮ್ಮು ಮತ್ತು ಕಾಶ್ಮೀರ ಮುಂತಾದ ವಿವಿಧ ವಿಷಯಗಳ ಕುರಿತು ನಕಲಿ ಸುದ್ದಿಗಳನ್ನು ಪೋಸ್ಟ್ ಮಾಡಲು ಬಳಸಲಾಗುತ್ತಿತ್ತು. ರಾಷ್ಟ್ರೀಯ ಭದ್ರತೆ ಮತ್ತು ವಿದೇಶಿ ರಾಜ್ಯಗಳೊಂದಿಗೆ ಭಾರತದ ಸ್ನೇಹ ಸಂಬಂಧಗಳ ವಿಚಾರವಾಗಿ ಅಪಪ್ರಚಾರ ಮಾಡಲಾಗುತ್ತಿದೆ ವಿಚಾರವನ್ನು ಸೂಕ್ಷ್ಮವಾಆಗಿ ಗಮನಿಸಲಾಗಿದೆ.

ಸಚಿವಾಲಯವು ನಿರ್ಬಂಧಿಸಿದ ವಿಷಯವು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಾಜ್ಯದ ಭದ್ರತೆ, ವಿದೇಶಿ ರಾಜ್ಯಗಳೊಂದಿಗೆ ಭಾರತದ ಸ್ನೇಹ ಸಂಬಂಧಗಳು ಮತ್ತು ದೇಶದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಹಾನಿಕಾರಕವಾಗಿದೆ ಎಂದು ಕಂಡುಬಂದಿದೆ. ಅದರಂತೆ, ವಿಷಯವು ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 69A ವ್ಯಾಪ್ತಿಯೊಳಗೆ ಒಳಗೊಂಡಿದೆ.

Published On - 11:44 am, Thu, 18 August 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ