BIG NEWS: ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ಆರೋಪ: ಮನೀಶ್ ಸಿಸೋಡಿಯಾ ಬ್ಯಾಂಕ್ ಲಾಕರ್ ಪರಿಶೀಲಿಸಲಿದೆ ಸಿಬಿಐ

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮದ್ಯದ ನೀತಿಯಲ್ಲಿ ಅಕ್ರಮ ನಡೆದಿದೆ ಎಂಬ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳವು (ಸಿಬಿಐ) ಸಿಸೋಡಿಯಾ ಗಾಜಿಯಾಬಾದ್ ಬ್ಯಾಂಕ್‌ ಲಾಕರ್‌ನ ಶೋಧನೆಯನ್ನು ಇಂದು ನಡೆಸುತ್ತಿದೆ.

BIG NEWS: ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ಆರೋಪ: ಮನೀಶ್ ಸಿಸೋಡಿಯಾ ಬ್ಯಾಂಕ್ ಲಾಕರ್ ಪರಿಶೀಲಿಸಲಿದೆ ಸಿಬಿಐ
Manish Sisodia
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 30, 2022 | 12:24 PM

ದೆಹಲಿ: ದೆಹಲಿಯಲ್ಲಿ ಈಗ ಹಿಂಪಡೆದಿರುವ ಅಬಕಾರಿ ನೀತಿಯಲ್ಲಿನ(liquor policy) ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಇಂದು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ಲಾಕರ್‌ನ ಶೋಧ ನಡೆಸಲಿದ್ದು ಸಿಸೋಡಿಯಾ ಮತ್ತು  ಅವರ ಪತ್ನಿ ಗಾಜಿಯಾಬಾದ್​​ನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ತಲುಪಿದ್ದಾರೆ. ಸುಮಾರು ಎರಡು ವಾರಗಳ ಹಿಂದೆ ಸಿಸೋಡಿಯಾ ಮನೆ ಮೇಲೆ ದಾಳಿ ನಡೆದಿತ್ತು. ಆದಾಗ್ಯೂ ತಮ್ಮ ಲಾಕರ್‌ನಲ್ಲಿ “ಏನೂ ಸಿಗುವುದಿಲ್ಲ” ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ನಿನ್ನೆ(ಸೋಮವಾರ) ಟ್ವೀಟ್ ಮಾಡಿದ್ದ ಸಿಸೋಡಿಯಾ ನಾಳೆ ಸಿಬಿಐ ನಮ್ಮ ಬ್ಯಾಂಕ್ ಲಾಕರ್ ಮೇಲೆ ದಾಳಿ ನಡೆಸಲಿದೆ, ಆಗಸ್ಟ್ 19 ರಂದು ನನ್ನ ಮನೆಯಲ್ಲಿ 14 ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಏನೂ ಪತ್ತೆಯಾಗಿಲ್ಲ, ಲಾಕರ್‌ನಲ್ಲಿಯೂ ಏನೂ ಪತ್ತೆಯಾಗುವುದಿಲ್ಲ . ಸಿಬಿಐಗೆ ಸ್ವಾಗತ, ನನ್ನ ಕುಟುಂಬ ಮತ್ತು ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇವೆ ಎಂದಿದ್ದಾರೆ.  ದೆಹಲಿ ಸರ್ಕಾರದ ಅಬಕಾರಿ ಖಾತೆಯನ್ನು ಸಹ ನಿರ್ವಹಿಸುತ್ತಿರುವ ಸಿಸೋಡಿಯಾ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ದಾ ಖಲಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಆರೋಪಿಗಳಲ್ಲಿ ಒಬ್ಬರು. ದೆಹಲಿಯ ಆಗಿನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ಅನುಮತಿಯಿಲ್ಲದೆ ಹೊಸ ನೀತಿಯನ್ನು ಪರಿಚಯಿಸಲಾಗಿದೆ ಎಂದು ಸಿಬಿಐ ಪ್ರತಿಪಾದಿಸಿದೆ. ಲಂಚದ ಬದಲಾಗಿ ಅನೇಕ ಅನರ್ಹ ಮಾರಾಟಗಾರರಿಗೆ ದೆಹಲಿ ಸರ್ಕಾರವು ಪರವಾನಗಿಯನ್ನು ನೀಡಿದೆ ಎಂದು ಸಿಬಿಐ ಹೇಳುತ್ತದೆ. ಕಳೆದ ವರ್ಷ ನವೆಂಬರ್‌ನಲ್ಲಿ ಪರಿಚಯಿಸಲಾದ ನೀತಿಯನ್ನು ಎಂಟು ತಿಂಗಳ ನಂತರ ಭ್ರಷ್ಟಾಚಾರದ ಆರೋಪಗಳ ನಡುವೆ ಹಿಂತೆಗೆದುಕೊಳ್ಳಲಾಯಿತು.

ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ ನೀತಿಯಲ್ಲಿನ ಭ್ರಷ್ಟಾಚಾರದ ಎಲ್ಲಾ ಆರೋಪಗಳನ್ನು ತಿರಸ್ಕರಿಸಿದೆ. ಇದನ್ನು ಸಂಪೂರ್ಣ ಪಾರದರ್ಶಕತೆಯಿಂದ ಜಾರಿಗೊಳಿಸಲಾಗಿದೆ ಎಂದು ಸಿಸೋಡಿಯಾ ಹೇಳಿದ್ದಾರೆ. ಈ ಜನರು ಹಗರಣಗಳ ಬಗ್ಗೆ ಯೋಚಿಸುತ್ತಿಲ್ಲ. ಅವರ ಚಿಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜನರು ಇಷ್ಟಪಡುತ್ತಾರೆ ಮತ್ತು ರಾಷ್ಟ್ರೀಯ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಹಾಗಾಗಿಯೇ ಬಿಜೆಪಿ ಆಪ್ ನಾಯಕರ ವಿರುದ್ದ ಆರೋಪಗಳನ್ನೆತ್ತಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ಕಳೆದೆರಡು ವಾರಗಳಲ್ಲಿ, ದೆಹಲಿಯಲ್ಲಿ ಸರ್ಕಾರವನ್ನು ಉರುಳಿಸುವ ಪ್ರಯತ್ನದಲ್ಲಿ ಶಾಸಕರ ಪಕ್ಷಾಂತರಕ್ಕಾಗಿ ಬಿಜೆಪಿ ಲಂಚವನ್ನು ನೀಡುತ್ತಿದೆ ಎಂದು ಎಎಪಿ ಆರೋಪಿಸಿತ್ತು. ಎಲ್ಲಾ ಎಎಪಿ ಶಾಸಕರು ಪಕ್ಷಕ್ಕೆ ಬದ್ಧರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಅರವಿಂದ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆಯಲ್ಲಿ ಬಹುಮತದ ಪರೀಕ್ಷೆಯನ್ನು ನಡೆಸುವುದಾಗಿ ಹೇಳಿದ್ದಾರೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಪಕ್ಷವು ತೆರಿಗೆದಾರರ ಹಣವನ್ನು ಶಾಸಕರಿಗೆ ಲಂಚ ನೀಡಲು ಮತ್ತು ವಿರೋಧ ಪಕ್ಷಗಳ ನೇತೃತ್ವದ ಚುನಾಯಿತ ರಾಜ್ಯ ಸರ್ಕಾರಗಳನ್ನು ಪತನಗೊಳಿಸಲು ಬಳಸುತ್ತಿದೆ ಎಂದು ಕೇಜ್ರಿವಾಲ್ ನಿನ್ನೆ ಹೇಳಿದ್ದಾರೆ.

ಎಎಪಿ ತನ್ನ ಸರ್ಕಾರದ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯೆ ನೀಡದೆ ವಿಷಯವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆರೋಪಿಸಿದ್ದಾರೆ

Published On - 11:54 am, Tue, 30 August 22

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ