AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ: ಬಿಜೆಪಿ

ಗೋವಾದ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ ತಾನವಾಡೆ ಹೇಳಿದ್ದಾರೆ

Breaking News: ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ: ಬಿಜೆಪಿ
ಗೋವಾ ವಿಧಾನಸಭೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 14, 2022 | 11:46 AM

Share

ಗೋವಾ:  ಕಾಂಗ್ರೆಸ್ ಪಕ್ಷವು (Congress) ಪಕ್ಷಾಂತರ ಯತ್ನವನ್ನು ತಡೆದ ಎರಡು ತಿಂಗಳ ನಂತರ,  ಗೋವಾದ (Goa) 11 ಶಾಸಕರ ಪೈಕಿ ಎಂಟು ಶಾಸಕರು ವಿಧಾನಸಭಾ ಸ್ಪೀಕರ್ ಅವರನ್ನು ಭೇಟಿಯಾಗಿರುವುದು ಪಕ್ಷಾಂತರದ ಹೊಸ ಊಹಾಪೋಹವನ್ನು ಹುಟ್ಟುಹಾಕಿದೆ. ರಾಜ್ಯ ಬಿಜೆಪಿ (BJP) ಮುಖ್ಯಸ್ಥ ಸದಾನಂದ ಶೇಟ್ ತನವಾಡೆ ಅವರು ಶಾಸಕರು ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವಿಧಾನಸಭೆ ಕಲಾಪ ನಡೆಯದ ಕಾರಣ ಸ್ಪೀಕರ್ ಜೊತೆ ಶಾಸಕರ ಭೇಟಿ ಸಾಮಾನ್ಯವಾದುದಲ್ಲ. ಹಾಗಾಗಿ ಅವರ ಅಜೆಂಡಾ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಮೂಲಗಳು ತಿಳಿಸಿವೆ. ಎಂಟು ಶಾಸಕರು ಒಂದು ಗುಂಪಾಗಿ ಒಡೆದು ಹೋದರೆ ಅವರು ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಅನರ್ಹಗೊಳಿಸುವುದನ್ನು ತಪ್ಪಿಸಬಹುದು. ಆದರೆ ಎರಡು ತಿಂಗಳ ಹಿಂದೆಯಷ್ಟೇ ದಿಗಂಬರ ಕಾಮತ್, ಮೈಕೆಲ್ ಲೋಬೋ ಸೇರಿದಂತೆ ಕಾಂಗ್ರೆಸ್‌ನ ಆರು ಮಂದಿ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿತ್ತು. ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಕಾಮತ್ ಮತ್ತು ಲೋಬೋ ಅವರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್   ಸ್ಪೀಕರ್ ಅವರಲ್ಲಿ ಒತ್ತಾಯಿಸಿತ್ತು.

ಆ ಸಮಯದಲ್ಲಿ, ಕಾಂಗ್ರೆಸ್ ತನ್ನ ಕನಿಷ್ಠ ಏಳು ಶಾಸಕರನ್ನು ತನ್ನೊಂದಿಗೆ ಇಟ್ಟುಕೊಳ್ಳುವಲ್ಲಿ ಯಶಸ್ವಿಯಾಯಿತು.ಪ್ರಮುಖ ಪಕ್ಷದ ಸಭೆಗೆ ಹಾಜರಾಗದ ನಾಲ್ವರಲ್ಲಿ ಲೋಬೋ ಮತ್ತು ಕಾಮತ್ ಅವರಲ್ಲದೆ ಕೇದಾರ್ ನಾಯ್ಕ್ ಮತ್ತು ಲೋಬೋ ಅವರ ಪತ್ನಿ ಡೆಲಿಲಾ ಲೋಬೋ ಸೇರಿದ್ದಾರೆ. ಪ್ರತಿಪಕ್ಷ ನಾಯಕ ಸ್ಥಾನದಿಂದ ಮೈಕಲ್ ಲೋಬೋ ಅವರನ್ನು ಕಾಂಗ್ರೆಸ್ ವಜಾಗೊಳಿಸಿದೆ. ಈ ವರ್ಷದ ಆರಂಭದಲ್ಲಿ ಚುನಾವಣೆಗೆ ಮುನ್ನ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬಂದಿದ್ದರು.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಬಿಕ್ಕಟ್ಟನ್ನು ನಿಭಾಯಿಸಲು ಹಿರಿಯ ನಾಯಕ ಮುಕುಲ್ ವಾಸ್ನಿಕ್ ಅವರನ್ನು ನಿಯೋಜಿಸಿದ್ದು, ಆ ಬಿಕ್ಕಟ್ಟು ತಾತ್ಕಾಲಿಕ ಅಂತ್ಯ ಕಂಡಿತ್ತು.

2019 ರಲ್ಲಿ ಕಾಂಗ್ರೆಸ್ ಅನ್ನು ಇದೇ ರೀತಿಯಲ್ಲಿ ಹಾಡಲಾಯಿತು, ಅದರ ಮೂರನೇ ಎರಡರಷ್ಟು ವಿಧಾನಸಭೆಯ ಬಲ ಅಂದರೆ 15 ರಲ್ಲಿ 10 ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡರು, ಅದಕ್ಕಾಗಿಯೇ ಈ ವರ್ಷ ಪಕ್ಷವು ತನ್ನ ಅಭ್ಯರ್ಥಿಗಳು ಪಕ್ಷಕ್ಕೆ ನಿಷ್ಠರಾಗಿರುವಂತೆ ಪ್ರತಿಜ್ಞೆ ಮಾಡಿಸಿತ್ತು.

Published On - 10:52 am, Wed, 14 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?