AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜಗದೀಪ್ ಧನ್​ಖರ್

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. 

Big News: ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜಗದೀಪ್ ಧನ್​ಖರ್
Jagdeep Dhankar
TV9 Web
| Edited By: |

Updated on:Jul 18, 2022 | 1:12 PM

Share

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಜಗದೀಪ್ ಧನ್​ಖರ್ (Jagdeep Dhankhar) ಅವರು ಉಪರಾಷ್ಟ್ರಪತಿ ಚುನಾವಣೆಗೆ (Vice Presidential Poll) ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಸುವುದಕ್ಕಿಂತ ಮುನ್ನ ಧನ್ ಖರ್ ಅವರು ವಿವಿಧ ಪಕ್ಷಗಳ ಸಂಸದರನ್ನು ಭೇಟಿ ಮಾಡಿ ತಮ್ಮನ್ನು ಬೆಂಬಲಿಸುವಂತೆ ಹೇಳಿದ್ದಾರೆ. ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರು ಸೇರಿದಂತೆ ಬಿಜು ಜನತಾ ದಳ (ಬಿಜೆಡಿ) ಮತ್ತು ಲೋಕ ಜನಶಕ್ತಿ ಪಕ್ಷ (ಎಲ್​​ಜೆಪಿ) ಸದಸ್ಯರೂ ಈ ಸಭೆಯಲ್ಲಿ ಭಾಗಿಯಾಗಿದ್ದರು. ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಸ್ಪರ್ಧಿಸುತ್ತಿದ್ದು ಆಗಸ್ಟ್ 6ಕ್ಕೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಧನ್​ಖರ್ ನಾನು ಎಂದೆಂದಿಗೂ ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯಲು ಪರಿಶ್ರಮಿಸುತ್ತೇನೆ ಎಂದು ಹೇಳಿದ್ದಾರೆ. ನನ್ನಂಥ ಹಿನ್ನಲೆಯಿರುವ ವ್ಯಕ್ತಿಯೊಬ್ಬರಿಗೆ ಈ ಅವಕಾಶ ಸಿಗಬಹುದು ಎಂದು ನಾನು ಕನಸಿನಲ್ಲಿಯೂ ಯೋಚಿಸಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ರೈತರ ಕುಟುಂಬದಿಂದ ಬಂದ ವ್ಯಕ್ತಿಯೊಬ್ಬರಿಗೆ ಐತಿಹಾಸಿಕ ಅವಕಾಶ ಕಲ್ಪಿಸಿರುವುದಕ್ಕೆ ನಾನು ಆಭಾರಿ ಎಂದು ಧನ್​ಖರ್ ಹೇಳಿದ್ದಾರೆ.

ಭಾನುವಾರ ಜಗದೀಪ್ ಧನ್​ಖರ್ ಅವರು  ಪಶ್ಚಿಮ ಬಂಗಾಳ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಸ್ವೀಕರಿಸಿದ್ದಾರೆ. ಜಗದೀಪ್ ಧನ್​ಖರ್ ಅವರ ರಾಜೀನಾಮೆಯನ್ನು  ರಾಷ್ಟ್ರಪತಿ ಸ್ವೀಕರಿಸಿದ್ದಾರೆ.  ಮಣಿಪುರ ಗವರ್ನರ್  ಲಾ.ಗಣೇಶನ್ ಅವರಿಗೆ ಪಶ್ಚಿಮ ಬಂಗಾಳದಲ್ಲಿನ ರಾಜ್ಯಪಾಲರ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ ಎಂದು ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

Published On - 12:42 pm, Mon, 18 July 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ