ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಜಗದೀಪ್ ಧನ್ಖರ್ (Jagdeep Dhankhar) ಅವರು ಉಪರಾಷ್ಟ್ರಪತಿ ಚುನಾವಣೆಗೆ (Vice Presidential Poll) ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಸುವುದಕ್ಕಿಂತ ಮುನ್ನ ಧನ್ ಖರ್ ಅವರು ವಿವಿಧ ಪಕ್ಷಗಳ ಸಂಸದರನ್ನು ಭೇಟಿ ಮಾಡಿ ತಮ್ಮನ್ನು ಬೆಂಬಲಿಸುವಂತೆ ಹೇಳಿದ್ದಾರೆ. ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರು ಸೇರಿದಂತೆ ಬಿಜು ಜನತಾ ದಳ (ಬಿಜೆಡಿ) ಮತ್ತು ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಸದಸ್ಯರೂ ಈ ಸಭೆಯಲ್ಲಿ ಭಾಗಿಯಾಗಿದ್ದರು. ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಸ್ಪರ್ಧಿಸುತ್ತಿದ್ದು ಆಗಸ್ಟ್ 6ಕ್ಕೆ ಚುನಾವಣೆ ನಡೆಯಲಿದೆ.
#WATCH | Delhi: NDA’s Vice Presidential candidate Jagdeep Dhankhar arrives at the Parliament Library Building. He will file his nomination today. pic.twitter.com/DC3wkaNURp
ಇದನ್ನೂ ಓದಿ— ANI (@ANI) July 18, 2022
ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಧನ್ಖರ್ ನಾನು ಎಂದೆಂದಿಗೂ ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯಲು ಪರಿಶ್ರಮಿಸುತ್ತೇನೆ ಎಂದು ಹೇಳಿದ್ದಾರೆ. ನನ್ನಂಥ ಹಿನ್ನಲೆಯಿರುವ ವ್ಯಕ್ತಿಯೊಬ್ಬರಿಗೆ ಈ ಅವಕಾಶ ಸಿಗಬಹುದು ಎಂದು ನಾನು ಕನಸಿನಲ್ಲಿಯೂ ಯೋಚಿಸಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ರೈತರ ಕುಟುಂಬದಿಂದ ಬಂದ ವ್ಯಕ್ತಿಯೊಬ್ಬರಿಗೆ ಐತಿಹಾಸಿಕ ಅವಕಾಶ ಕಲ್ಪಿಸಿರುವುದಕ್ಕೆ ನಾನು ಆಭಾರಿ ಎಂದು ಧನ್ಖರ್ ಹೇಳಿದ್ದಾರೆ.
ಭಾನುವಾರ ಜಗದೀಪ್ ಧನ್ಖರ್ ಅವರು ಪಶ್ಚಿಮ ಬಂಗಾಳ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಸ್ವೀಕರಿಸಿದ್ದಾರೆ. ಜಗದೀಪ್ ಧನ್ಖರ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಸ್ವೀಕರಿಸಿದ್ದಾರೆ. ಮಣಿಪುರ ಗವರ್ನರ್ ಲಾ.ಗಣೇಶನ್ ಅವರಿಗೆ ಪಶ್ಚಿಮ ಬಂಗಾಳದಲ್ಲಿನ ರಾಜ್ಯಪಾಲರ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ ಎಂದು ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
Published On - 12:42 pm, Mon, 18 July 22