AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: 5 ಫೋನ್‌ಗಳಲ್ಲಿ ಮಾಲ್‌ವೇರ್ ಪತ್ತೆ, ಪೆಗಾಸಸ್ ಸ್ಪೈವೇರ್‌ನ ನಿರ್ಣಾಯಕ ಪುರಾವೆ ಇಲ್ಲ: ಸುಪ್ರೀಂಕೋರ್ಟ್

29 ಫೋನ್‌ಗಳನ್ನು ಪರಿಶೀಲಿಸಲಾಗಿದೆ, ಇದರಲ್ಲಿ 5 ಮಾಲ್‌ವೇರ್, ಆದರೆ ಅದರಲ್ಲಿ ಸ್ಪೈವೇರ್ ಇದೆ ಎಂಬುದಕ್ಕೆ ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

BIG NEWS: 5 ಫೋನ್‌ಗಳಲ್ಲಿ ಮಾಲ್‌ವೇರ್ ಪತ್ತೆ, ಪೆಗಾಸಸ್ ಸ್ಪೈವೇರ್‌ನ ನಿರ್ಣಾಯಕ ಪುರಾವೆ ಇಲ್ಲ: ಸುಪ್ರೀಂಕೋರ್ಟ್
ಸಾಂದರ್ಭಿಕ ಚಿತ್ರ Image Credit source: NDTV
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 25, 2022 | 12:14 PM

Share

ದೆಹಲಿ: ಸುಪ್ರೀಂಕೋರ್ಟ್ (Supreme Court) ಗುರುವಾರ ಪೆಗಾಸಸ್ ಸ್ಪೈವೇರ್ (Pegasus spyware) ಪ್ರಕರಣಗಳ ವಿಚಾರಣೆ ನಡೆಸಿದೆ. ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಮೂರು ಭಾಗಗಳನ್ನು ಒಳಗೊಂಡ ಸಮಿತಿಯ ವರದಿಯನ್ನು ಪರಿಶೀಲಿಸಿದ್ದಾರೆ. ಪೆಗಾಸಸ್ ಸಮಿತಿಯ ವರದಿಯ ಕೆಲವು ಭಾಗವು ಗೌಪ್ಯವಾಗಿದೆ ಮತ್ತು ಖಾಸಗಿ ಮಾಹಿತಿಯನ್ನು ಸಹ ಹೊಂದಿರಬಹುದು, ತಾಂತ್ರಿಕ ಸಮಿತಿಯ ವರದಿಗಳನ್ನು ಸಾರ್ವಜನಿಕಗೊಳಿಸಬಾರದು ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ ಎಂದು ನ್ಯಾಯಮೂರ್ತಿ ರಮಣ ಹೇಳಿದ್ದಾರೆ. ಕಳೆದ ವರ್ಷ, ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಭಾರತದಲ್ಲಿ ಉದ್ದೇಶಿತ ಕಣ್ಗಾವಲು ಬಳಸಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಕಳೆದ ವರ್ಷ ಅಕ್ಟೋಬರ್‌ ತಿಂಗಳಲ್ಲಿ ವಿರೋಧ ಪಕ್ಷದ ನಾಯಕರು, ಕಾರ್ಯಕರ್ತರು, ಉದ್ಯಮಿಗಳು, ನ್ಯಾಯಾಧೀಶರು ಮತ್ತು ಪತ್ರಕರ್ತರ ಮೇಲೆ ನಿಗಾ ಇಡಲು ಸರ್ಕಾರವು ಮಿಲಿಟರಿ ದರ್ಜೆಯ ಖಾಸಗಿ ಇಸ್ರೇಲಿ ಪೆಗಾಸಸ್ ಸ್ಪೈವೇರ್ ಅನ್ನು ಬಳಸಿದೆಯೇ ಎಂದು ತನಿಖೆ ಮಾಡಲು ತಜ್ಞರ ಸಮಿತಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.

29 ಫೋನ್‌ಗಳನ್ನು ಪರಿಶೀಲಿಸಲಾಗಿದೆ. ಐದು ಫೋನ್‌ಗಳಲ್ಲಿ ಮಾಲ್‌ವೇರ್ ಪತ್ತೆಯಾಗಿದೆ ಆದರೆ ಪೆಗಾಸಸ್ ಸ್ಪೈವೇರ್‌ ಬಗ್ಗೆ  ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂಕೋರ್ಟ್ ಪೀಠವು ಇಂದು ಈ ವಿಷಯದ ವಿಚಾರಣೆಯ ವೇಳೆ ತಿಳಿಸಿದೆ. ಭಾರತ ಸರ್ಕಾರ ಸಹಕರಿಸುತ್ತಿಲ್ಲ ಎಂದು ಸಮಿತಿ ಹೇಳಿರುವುದಾಗಿಯೂ  ಮುಖ್ಯ ನ್ಯಾಯಮೂರ್ತಿ ಹೇಳಿದರು.

ಸುಪ್ರೀಂಕೋರ್ಟ್ ಈ ವಿಷಯದ ಕುರಿತು ರಚಿಸಿರುವ ಸಮಿತಿಯು ಸಲ್ಲಿಸಿದ ವರದಿಯನ್ನು ಪರಿಶೀಲಿಸುತ್ತಿದೆ. ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌ವಿ ರವೀಂದ್ರನ್ ಅವರು ತಾಂತ್ರಿಕ ಸಮಿತಿಯ ಎರಡು ವರದಿಗಳು ಮತ್ತು ಮೇಲ್ವಿಚಾರಣಾ ಸಮಿತಿಯ ಒಂದು ವರದಿಯನ್ನು ಮೂರು ಭಾಗಗಳಲ್ಲಿ ಸಲ್ಲಿಸಿದ್ದಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌ವಿ ರವೀಂದ್ರನ್ ಅವರು ತಾಂತ್ರಿಕ ಸಮಿತಿಯ ಎರಡು ವರದಿಗಳು ಮತ್ತು ಮೇಲ್ವಿಚಾರಣಾ ಸಮಿತಿಯ ಒಂದು ವರದಿಯನ್ನು ಮೂರು ಭಾಗಗಳಲ್ಲಿ ಸಲ್ಲಿಸಿದ್ದಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ವರದಿಯ ಒಂದು ಭಾಗವನ್ನು ಸುಪ್ರೀಂಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಸಾರ್ವಜನಿಕಗೊಳಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. “ನಾವು ನಮ್ಮ ವೆಬ್‌ಸೈಟ್‌ನಲ್ಲಿ ನ್ಯಾಯಮೂರ್ತಿ ರವೀಂದ್ರನ್ ಅವರ ವರದಿಯ ಮೂರನೇ ಭಾಗವನ್ನು ಸಾರ್ವಜನಿಕವಾಗಿ ಪ್ರಕಟಿಸುತ್ತೇವೆ” ಎಂದು ಸಿಜೆಐ ಹೇಳಿದ್ದಾರೆ. ಅದೇ ವೇಳೆ ಸಮಿತಿಯು ಸಂಪೂರ್ಣ ವರದಿಯನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಪ್ರಕಟಿಸದಂತೆ ಕೇಳಿಕೊಂಡಿದೆ ಎಂದು ಹೇಳಿದರು.

ಕೆಲವು ಅರ್ಜಿದಾರರು ವರದಿಯ ಮೊದಲ ಎರಡು ಭಾಗಗಳ ಪ್ರತಿಯನ್ನು ಕೇಳಿದರು. ಬೇಡಿಕೆಯನ್ನು ನ್ಯಾಯಾಲಯ ಪರಿಶೀಲಿಸಲಿದೆ ಎಂದು ಸಿಜೆಐ ಹೇಳಿದ್ದಾರೆ. ಸಂಪೂರ್ಣ ವರದಿಯನ್ನು ಪರಿಶೀಲಿಸದೆ ನಾವು ಯಾವುದೇ ಕಾಮೆಂಟ್ ಮಾಡಲು ಬಯಸುವುದಿಲ್ಲ ಎಂದು ನ್ಯಾಯಮೂರ್ತಿ ರಮಣ ಹೇಳಿದರು. ವಕೀಲರೊಬ್ಬರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಬಯಸುತ್ತಾರೆ ಎಂದು ಹೇಳಿದಾಗ ಸಿಜೆಐ ನಾಳೆ ನಂತರ, ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೇನೆ” ಎಂದಿದ್ದಾರೆ. ಪ್ರಸ್ತುತ ಪ್ರಕರಣದ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಲಾಯಿತು.

Published On - 11:19 am, Thu, 25 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?