ಭಾರತ್ ಜೋಡೋ ಯಾತ್ರೆಯಲ್ಲಿ ನಾಳೆ ರಾಹುಲ್ ಗಾಂಧಿ ಜೊತೆ ಪಾಲ್ಗೊಳ್ಳಲು ಮಹಿಳೆಯರಿಗೆ ಮಾತ್ರ ಅವಕಾಶ; ಕಾರಣ ಇಲ್ಲಿದೆ

Bharat Jodo Yatra: ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ನಿಗದಿತ ಒಟ್ಟು 3,570 ಕಿಮೀ ದೂರದಲ್ಲಿ ಇನ್ನೂ 1608 ಕಿಮೀ ಕ್ರಮಿಸಬೇಕಿದೆ. ಮುಂದಿನ ವರ್ಷ ಕಾಶ್ಮೀರದಲ್ಲಿ ಈ ಯಾತ್ರೆ ಮುಕ್ತಾಯವಾಗಲಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ನಾಳೆ ರಾಹುಲ್ ಗಾಂಧಿ ಜೊತೆ ಪಾಲ್ಗೊಳ್ಳಲು ಮಹಿಳೆಯರಿಗೆ ಮಾತ್ರ ಅವಕಾಶ; ಕಾರಣ ಇಲ್ಲಿದೆ
ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರ ಜೊತೆ ರಾಹುಲ್ ಗಾಂಧಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 18, 2022 | 8:52 AM

ಮುಂಬೈ: ನವೆಂಬರ್ 19ರಂದು ಇಂದಿರಾ ಗಾಂಧಿ ಜನ್ಮ ದಿನೋತ್ಸವ (Indira Gandhi Birth Anniversary) ಇರುವುದರಿಂದ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ಮಹಿಳೆಯರು ಮಾತ್ರ ಭಾಗವಹಿಸಲಿದ್ದಾರೆ. ಇಂದಿರಾ ಗಾಂಧಿ ನೆನಪಿನಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮತ್ತು ರಾಜ್ಯಸಭೆಯ ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ.

ನವೆಂಬರ್ 19ರಂದು (ಶನಿವಾರ) ಇಂದಿರಾಗಾಂಧಿ ಜಯಂತಿಯಂದು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ನಡೆಯಲಿದ್ದಾರೆ. ಇಡೀ ದಿನ ಮಹಿಳೆಯರು ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಖಚಿತಪಡಿಸಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹಿಂದೆ ತಮ್ಮ ಅಜ್ಜಿ ಮತ್ತು ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು (ಅಕ್ಟೋಬರ್ 31) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದರು. ನೀವು ಈ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದೀರಿ. ಆ ತ್ಯಾಗ ವ್ಯರ್ಥವಾಗಲು ನಾನು ಬಿಡುವುದಿಲ್ಲ. ಈ ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಇಂದಿರಾ ಗಾಂಧಿ ಕುರಿತು ಭಾವುಕವಾಗಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಸಾವರ್ಕರ್ ಕುರಿತು ನಮಗೆ ಅಪಾರ ಗೌರವವಿದೆ; ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ಷೇಪ

ಭಾರತ್ ಜೋಡೋ ಯಾತ್ರೆಯು ಪ್ರಸ್ತುತ ಮಹಾರಾಷ್ಟ್ರದಲ್ಲಿದೆ. ಈ ಪಾದಯಾತ್ರೆಯು ಮಹಾರಾಷ್ಟ್ರವನ್ನು ಪ್ರವೇಶಿಸುವ ಮೊದಲು ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಭಾಗಗಳಲ್ಲಿ ಪಾದಯಾತ್ರೆ ಮಾಡಿದೆ. ಭಾರತ್ ಜೋಡೋ ಯಾತ್ರೆಯ ಅಧಿಕೃತ ವೇಳಾಪಟ್ಟಿಯ ಪ್ರಕಾರ, ನವೆಂಬರ್ 19ರಂದು ಈ ಯಾತ್ರೆಯು ಬುಲ್ಧಾನ ಜಿಲ್ಲೆಯ ಶೇಗಾಂವ್‌ನಿಂದ ಪ್ರಾರಂಭವಾಗಿ ಮಹಾರಾಷ್ಟ್ರದ ಬುಲ್ಧಾನನ್ ಜಿಲ್ಲೆಯ ಭೆಂಡ್ವಾಲ್, ಜಲ್ಗಾಂವ್ ಜಮೋದ್‌ನಲ್ಲಿ ಕೊನೆಗೊಳ್ಳುತ್ತದೆ. ರಾಹುಲ್ ಗಾಂಧಿ ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ 15 ವಿಧಾನಸಭೆ ಮತ್ತು 6 ಸಂಸದೀಯ ಕ್ಷೇತ್ರಗಳ ಮೂಲಕ ಪ್ರಯಾಣಿಸುತ್ತಿದ್ದು, ರಾಜ್ಯದಲ್ಲಿ ಯಾತ್ರೆಯು 382 ಕಿಲೋಮೀಟರ್‌ಗಳಷ್ಟು ದೂರವನ್ನು ಕ್ರಮಿಸಲಿದ್ದು, ಮಧ್ಯಪ್ರದೇಶವನ್ನು ಪ್ರವೇಶಿಸಲಿದೆ.

ಭಾರತದ ಇತಿಹಾಸದಲ್ಲಿ ಭಾರತೀಯ ರಾಜಕಾರಣಿಗಳು ಕಾಲ್ನಡಿಗೆಯಲ್ಲಿ ನಡೆಸಿದ ಅತಿ ಉದ್ದದ ಮೆರವಣಿಗೆ ಇದಾಗಿದೆ ಎಂದು ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಕುರಿತು ಈ ಹಿಂದೆ ಹೇಳಿಕೆಯಲ್ಲಿ ಹೇಳಿಕೊಂಡಿತ್ತು. ಭಾರತ್ ಜೋಡೋ ಯಾತ್ರೆಗೆ ದೇಶಾದ್ಯಂತ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗುತ್ತಿದ್ದು, ದಿನದಿಂದ ದಿನಕ್ಕೆ ಪ್ರತಿಕ್ರಿಯೆ ಹೆಚ್ಚುತ್ತಿದೆ.

ಇದನ್ನೂ ಓದಿ: Rahul Gandhi: ಭಾರತ್ ಜೋಡೋ ಯಾತ್ರೆ ವೇಳೆ ರಾಷ್ಟ್ರಗೀತೆ ಹಾಕುವಾಗ ಎಡವಟ್ಟು; ರಾಹುಲ್ ಗಾಂಧಿಗೆ ಬಿಜೆಪಿ ತರಾಟೆ

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ಪ್ರಸ್ತುತ ಮಹಾರಾಷ್ಟ್ರದಲ್ಲಿ ಪ್ರಾರಂಭವಾದಾಗಿನಿಂದ 71 ನೇ ದಿನಕ್ಕೆ ತಲುಪಿದೆ. ಇಲ್ಲಿಯವರೆಗಿನ ಯಾತ್ರೆಯು 6 ರಾಜ್ಯಗಳ 30 ಜಿಲ್ಲೆಗಳನ್ನು ಒಳಗೊಂಡಿದೆ. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ನಿಗದಿತ ಒಟ್ಟು 3,570 ಕಿಮೀ ದೂರದಲ್ಲಿ ಇನ್ನೂ 1608 ಕಿಮೀ ಕ್ರಮಿಸಬೇಕಿದೆ. ಮುಂದಿನ ವರ್ಷ ಕಾಶ್ಮೀರದಲ್ಲಿ ಈ ಯಾತ್ರೆ ಮುಕ್ತಾಯವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 am, Fri, 18 November 22