Big News: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ; ವಿರೋಧ ಪಕ್ಷಗಳಿಗೆ ಭಾರೀ ಹಿನ್ನಡೆ

Money Laundering Act: ಜಾರಿ ನಿರ್ದೇಶನಾಲಯಕ್ಕೆ ಇರುವ ಬಂಧನದ ಅಧಿಕಾರ ಏಕಪಕ್ಷೀಯವಾಗಿಲ್ಲ ಎಂದಿರುವ ಸುಪ್ರೀಂ ಕೋರ್ಟ್​ ಇಡಿಗೆ ಇರುವ ಬಂಧನದ ಅಧಿಕಾರವನ್ನು ಎತ್ತಿ ಹಿಡಿದಿದೆ.

Big News: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ; ವಿರೋಧ ಪಕ್ಷಗಳಿಗೆ ಭಾರೀ ಹಿನ್ನಡೆ
ಸುಪ್ರೀಂ ಕೋರ್ಟ್​Image Credit source: navabharat times
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 27, 2022 | 11:45 AM

ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ವಿರೋಧಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ ನ್ಯಾಯಪೀಠ ಇಂದು ಮಹತ್ವದ ತೀರ್ಪು ನೀಡಿದೆ. ಪಿಎಂಎಲ್​ಎ ಕಾಯಿದೆಯ ಸೆಕ್ಷನ್ 5 ಸಾಂವಿಧಾನಿಕವಾಗಿ ಮಾನ್ಯವಾಗಿದ್ದು, ಸೆಕ್ಷನ್ 5 ಸಮತೋಲನದಿಂದ ಕೂಡಿದೆ ಎಂದು ಸುಪ್ರೀಂ ಕೋರ್ಟ್ (Supreme Court)​ ಹೇಳಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ತೀರ್ಪು ಸರ್ಕಾರದ ಪರವಾಗಿ ಪ್ರಕಟವಾಗಿದ್ದು, ಅರ್ಜಿ ಸಲ್ಲಿಸಿದ್ದ ವಿರೋಧ ಪಕ್ಷಗಳಿಗೆ ಭಾರೀ ಹಿನ್ನಡೆಯಾಗಿದೆ. ಪಿಎಂಎಲ್​ಎ ಕಾಯಿದೆಯ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. ಜಾರಿ ನಿರ್ದೇಶನಾಲಯಕ್ಕೆ ಇರುವ ಬಂಧನದ ಅಧಿಕಾರ ಏಕಪಕ್ಷೀಯವಾಗಿಲ್ಲ ಎಂದಿರುವ ಸುಪ್ರೀಂ ಕೋರ್ಟ್​ ಇಡಿಗೆ ಇರುವ ಬಂಧನದ ಅಧಿಕಾರವನ್ನು ಎತ್ತಿ ಹಿಡಿದಿದೆ.

ಪಿಎಂಎಲ್ ಎ ಕಾಯಿದೆಯಡಿ ಇಡಿಗೆ ಆರೋಪಿಗಳನ್ನು ಬಂಧಿಸುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಇದರಿಂದ ವಿರೋಧ ಪಕ್ಷಗಳ ನಾಯಕರಿಗೆ ಭಾರೀ ಹಿನ್ನಡೆಯಾಗಿದೆ. ಪಿಎಂಎಲ್​ಎ ಕಾಯಿದೆಯ ಸೆಕ್ಷನ್ 5 ಸಾಂವಿಧಾನಿಕವಾಗಿ ಮಾನ್ಯವಾಗಿದ್ದು, ಅಪರಾಧದ ಆಸ್ತಿ, ಹಣವನ್ನು ಹೇಗೆ ಪತ್ತೆ ಹಚ್ಚಬಹುದು ಎಂದು ಹೇಳುತ್ತದೆ ಎಂದಿರುವ ಸುಪ್ರೀಂ ಕೋರ್ಟ್ ಸೆಕ್ಷನ್ 8(4) ಪ್ರಶ್ನಿಸಿದ್ದನ್ನು ತಿರಸ್ಕರಿಸಿದೆ. ಪಿಎಂಎಲ್ ಎ ಕಾಯಿದೆಗೆ ತಿದ್ದುಪಡಿ ಮಾಡಿದ್ದನ್ನು ಸದ್ಯ ಸುಪ್ರೀಂ ಕೋರ್ಟ್ ಪರಿಶೀಲಿಸಿಲ್ಲ, ಏಳು ನ್ಯಾಯಮೂರ್ತಿಗಳ ಪೀಠ ಪರಿಶೀಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ, ಎನ್‌ಸಿಪಿ ನಾಯಕ ಅನಿಲ್ ದೇಶಮುಖ್ ಮತ್ತು ಇತರರು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002ರ ಅಡಿಯಲ್ಲಿ ಸಲ್ಲಿಸಿದ ನೂರಾರು ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್​ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ಪೀಠವು ವಿಚಾರಣೆ ನಡೆಸಿದೆ. ಈ ನ್ಯಾಯ ಪೀಠದಲ್ಲಿ ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್ ಮತ್ತು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರೂ ಇದ್ದಾರೆ.

ಇದನ್ನೂ ಓದಿ: Mohammed Zubair: ಮೊಹಮ್ಮದ್ ಜುಬೇರ್ ಕ್ರಿಮಿನಲ್ ಪ್ರಕ್ರಿಯೆಯ ಸುಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ; ಸುಪ್ರೀಂ ಕೋರ್ಟ್​

ಸೆಕ್ಷನ್ 50ರ ಅಡಿಯಲ್ಲಿ ಹೇಳಿಕೆ ತೆಗೆದುಕೊಳ್ಳುವ ಹಕ್ಕು ಮತ್ತು ಆರೋಪಿಯನ್ನು ಸಮನ್ಸ್ ಮಾಡುವ ಅಧಿಕಾರವೂ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂ ಕೋರ್ಟ್ 242 ಅರ್ಜಿಗಳ ವಿಚಾರಣೆ ನಡೆಸುತ್ತಿದೆ.

1990ರಿಂದ ಭಾರತದಲ್ಲಿ ಮನಿ ಲಾಂಡರಿಂಗ್ ಪದ ಬಳಕೆಯಲ್ಲಿದೆ. ಭಾರತದಲ್ಲಿ ಮನಿ ಲಾಂಡರಿಂಗ್ ಕಾಯ್ದೆಯನ್ನು 2002ರಲ್ಲಿ ಜಾರಿಗೊಳಿಸಲಾಯಿತು. ಆದರೆ 3 ಬಾರಿ (2005, 2009 ಮತ್ತು 2012) ಅದಕ್ಕೆ ತಿದ್ದುಪಡಿ ಮಾಡಲಾಗಿದೆ. 2012ರ ಕೊನೆಯ ತಿದ್ದುಪಡಿಗೆ 2013ರ ಜನವರಿ 3ರಂದು ರಾಷ್ಟ್ರಪತಿಗಳ ಒಪ್ಪಿಗೆ ದೊರೆತಿದ್ದು, ಫೆಬ್ರವರಿ 15ರಂದು ಈ ಕಾನೂನು ಜಾರಿಗೆ ಬಂದಿದೆ. PMLA (ತಿದ್ದುಪಡಿ) ಕಾಯಿದೆ, 2012 ಅಪರಾಧಗಳ ಪಟ್ಟಿಯಲ್ಲಿ ಹಣದ ಮರೆಮಾಚುವಿಕೆ, ಸ್ವಾಧೀನ, ಸ್ವಾಧೀನ ಮತ್ತು ಅಪರಾಧದ ಆದಾಯದ ಬಳಕೆಯನ್ನು ಒಳಗೊಂಡಿದೆ.

ಜುಲೈ 15ರಂದು ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳನ್ನು ಪ್ರಶ್ನಿಸುವ ಅರ್ಜಿಗಳ ಮೇಲಿನ ತನ್ನ ತೀರ್ಪು ಬಹುತೇಕ ಸಿದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಈ ಅರ್ಜಿಗಳು 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆಯ ವ್ಯಾಖ್ಯಾನಕ್ಕೆ ಸಂಬಂಧಿಸಿದ್ದಾಗಿವೆ.

Published On - 11:16 am, Wed, 27 July 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ