BIG NEWS: Poll Freebies: ಸಮಸ್ಯೆಯನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಸಲಹೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 26, 2022 | 11:57 AM

ಉಚಿತ ಯೋಜನೆ ರಾಜ್ಯವನ್ನು ದಿವಾಳಿತನದತ್ತ ತಳ್ಳುವ ಪರಿಸ್ಥಿತಿಯನ್ನು ಸೃಷ್ಟಿಸಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಹೇಳಿದೆ.

BIG NEWS: Poll Freebies: ಸಮಸ್ಯೆಯನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಸಲಹೆ
Follow us on

ದೆಹಲಿ: ಉಚಿತ ಯೋಜನೆ ರಾಜ್ಯವನ್ನು ದಿವಾಳಿತನದತ್ತ ತಳ್ಳುವ ಪರಿಸ್ಥಿತಿಯನ್ನು ಸೃಷ್ಟಿಸಬಹುದು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಹೇಳಿದೆ. ಆದರೆ ವಿಸ್ತೃತ ವಿಚಾರಣೆಯ ಅಗತ್ಯವಿರುವುದರಿಂದ ಸಮಸ್ಯೆಯನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಸಲಹೆ ನೀಡಿದೆ.

ಪಕ್ಷಗಳು ಎತ್ತಿರುವ ಈ ಸಮಸ್ಯೆಗಳಿಗೆ ವ್ಯಾಪಕ ವಿಚಾರಣೆಯ ಅಗತ್ಯವಿದ್ದು, ನ್ಯಾಯಾಂಗದ ಹಸ್ತಕ್ಷೇಪದ ವ್ಯಾಪ್ತಿ ಏನು? ತಜ್ಞರ ಸಮಿತಿ ನೇಮಕವು ಉದ್ದೇಶವನ್ನು ಪೂರೈಸುತ್ತದೆಯೇ ಎಂಬುದನ್ನು ತಿಳಿಯಬೇಕಿದೆ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.

Published On - 11:57 am, Fri, 26 August 22