AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುತ್ತಾರಾ ಶಶಿ ತರೂರ್?

Congress President Election: ಕಾಂಗ್ರೆಸ್ ಪಕ್ಷದಲ್ಲಿ ಸಾಂಸ್ಥಿಕ ಸುಧಾರಣೆಗಳನ್ನು ಕೋರಿ 2020ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ 23 ಕಾಂಗ್ರೆಸ್ ನಾಯಕರ ಗುಂಪಿನಲ್ಲಿ ಶಶಿ ತರೂರ್ ಕೂಡ ಇದ್ದರು.

Big News: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುತ್ತಾರಾ ಶಶಿ ತರೂರ್?
ಶಶಿ ತರೂರ್
TV9 Web
| Edited By: |

Updated on: Aug 30, 2022 | 10:25 AM

Share

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ (Shashi Tharoor) ಸ್ಪರ್ಧಿಸುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಅವರಿನ್ನೂ ಅಂತಿಮ ನಿರ್ಧಾರ ಮಾಡಿಲ್ಲ. ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ (Sonia Gandhi) ಸ್ಥಾನಕ್ಕೆ ಅಕ್ಟೋಬರ್​ನಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ (Rahul Gandhi) ಅವರನ್ನು ಆಯ್ಕೆ ಮಾಡಲು ಒಂದು ಬಣ ಒತ್ತಾಯಿಸುತ್ತಿದ್ದರೆ ಇನ್ನೊಂದು ಬಣ ರಾಹುಲ್ ಗಾಂಧಿಯ ವಿರುದ್ಧ ಧ್ವನಿಯೆತ್ತಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಾಂಸ್ಥಿಕ ಸುಧಾರಣೆಗಳನ್ನು ಕೋರಿ 2020ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದ 23 ಕಾಂಗ್ರೆಸ್ ನಾಯಕರ ಗುಂಪಿನಲ್ಲಿ ಶಶಿ ತರೂರ್ ಕೂಡ ಇದ್ದರು. ಕಾಂಗ್ರೆಸ್​ಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಮೂಲಕ ಪಕ್ಷದ ಪುನರುಜ್ಜೀವನ ಮಾಡಬೇಕಿದೆ ಎಂದು ತಿರುವನಂತಪುರಂನ ಸಂಸದ ಶಶಿ ತರೂರ್ ಹೇಳಿದ್ದರು.

ಇದನ್ನೂ ಓದಿ: ನಾನು ಕಾಂಗ್ರೆಸ್ ಪಕ್ಷ ತೊರೆಯುವಂತೆ ಬಲವಂತ ಮಾಡಿದ್ದಾರೆ; ಕಾಂಗ್ರೆಸ್, ರಾಹುಲ್ ಗಾಂಧಿಗೆ ಗುಲಾಂ ನಬಿ ಆಜಾದ್ ತಿರುಗೇಟು

ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿರುವಂತೆಯೇ ಪಕ್ಷದ ನೇತೃತ್ವ ವಹಿಸುವಂತೆ ರಾಹುಲ್ ಗಾಂಧಿ ಮನವೊಲಿಕೆಗೆ ಅಂತಿಮ ಹಂತದ ಕಸರತ್ತು ಕೂಡ ನಡೆಯುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಯಾರು ಅಧ್ಯಕ್ಷರಾಗಬೇಕು ಮತ್ತು ರಾಹುಲ್ ಗಾಂಧಿ ಅಧ್ಯಕ್ಷರಾಗಬೇಕೇ ಎಂಬ ಬಗ್ಗೆ ಚರ್ಚೆ ನಡೆದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ಇದೊಂದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ. ಅಧ್ಯಕ್ಷರಾಗಲು ಬಯಸುವವರು ನಾಮಪತ್ರ ಸಲ್ಲಿಸಬೇಕು ಎಂದಿದ್ದರು.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ರಂದು ಫಲಿತಾಂಶ ಪ್ರಕಟವಾಗಲಿದೆ. ಸೆಪ್ಟೆಂಬರ್ 22ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ಆದರೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 24ರಂದು ಪ್ರಾರಂಭವಾಗಿ ಸೆಪ್ಟೆಂಬರ್ 30ರವರೆಗೆ ಮುಂದುವರಿಯುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!