AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಸುಪ್ರೀಂ

2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರ ಪೀಠವು ಸಿಎಎಯನ್ನು ಪ್ರಶ್ನಿಸಿ ಕನಿಷ್ಠ 220 ಅರ್ಜಿಗಳನ್ನು ಆಲಿಸಿತ್ತು.

BIG NEWS: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಸುಪ್ರೀಂ
Supreme Court
TV9 Web
| Edited By: |

Updated on:Sep 12, 2022 | 2:53 PM

Share

ದೆಹಲಿ: 2019 ರ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅವರ ಪೀಠವು ಸಿಎಎಯನ್ನು ಪ್ರಶ್ನಿಸಿ ಕನಿಷ್ಠ 220 ಅರ್ಜಿಗಳನ್ನು ಆಲಿಸಿತ್ತು. CAA ವಿರುದ್ಧದ ಅರ್ಜಿಗಳು ಡಿಸೆಂಬರ್ 18, 2019 ರಂದು ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ವಿಚಾರಣೆಗೆ ಬಂದಿತ್ತು. ಇದನ್ನು ಕೊನೆಯದಾಗಿ ಜೂನ್ 15, 2021 ರಂದು ವಿಚಾರಣೆ ನಡೆಸಲಾಯಿತು. ಸಿಎಎಯನ್ನು ಡಿಸೆಂಬರ್ 11, 2019 ರಂದು ಸಂಸತ್ತು ಅಂಗೀಕರಿಸಿತು, ನಂತರ ಅದು ದೇಶಾದ್ಯಂತ ಪ್ರತಿಭಟನೆಗಳನ್ನು ಎದುರಿಸಿತು. CAA ಜನವರಿ 10, 2020 ರಂದು ಜಾರಿಗೆ ಬಂದಿದೆ.

ಕೇರಳ ಮೂಲದ ರಾಜಕೀಯ ಪಕ್ಷವಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ನಾಯಕ ದೇಬಬ್ರತ ಸೈಕಿಯಾ, ಎನ್‌ಜಿಒಗಳು ರಿಹೈ ಮಂಚ್ ಮತ್ತು ಸಿಟಿಜನ್ಸ್ ಅಗೇನ್ಸ್ಟ್ ಹೇಟ್, ಅಸ್ಸಾಂ ಅಡ್ವೊಕೇಟ್ಸ್ ಅಸೋಸಿಯೇಷನ್ ​​ಮತ್ತು ಕಾನೂನು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಕಾಯಿದೆಯನ್ನು ಪ್ರಶ್ನಿಸಿ ಉನ್ನತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದಾರೆ. 2020ರಲ್ಲಿ, ಕೇರಳ ಸರ್ಕಾರವು ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿತು, ಸಿಎಎಯನ್ನು ಪ್ರಶ್ನಿಸಿದ ಮೊದಲ ರಾಜ್ಯವಾಯಿತು ಎಂದು ಹೇಳಲಾಗಿದೆ

Published On - 2:46 pm, Mon, 12 September 22