Maharashtra Crisis: ಏಕನಾಥ್ ಶಿಂಧೆ ಸರ್ಕಾರಕ್ಕೆ ರಿಲೀಫ್; ಶಾಸಕರ ಅನರ್ಹತೆ ತೀರ್ಮಾನ ಮುಂದೂಡಲು ಸ್ಪೀಕರ್​ಗೆ ಸುಪ್ರೀಂಕೋರ್ಟ್​ ಸೂಚನೆ​

ಏಕನಾಥ್ ಶಿಂಧೆ ಬಣ ಮತ್ತು ಉದ್ಧವ್ ಠಾಕ್ರೆ ಬಣದ ವಿರುದ್ಧ ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳನ್ನು ಮುಂದೂಡುವಂತೆ ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಪ್ರಕರಣದ ವಿಚಾರಣೆಯನ್ನು ನಡೆಸಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Maharashtra Crisis: ಏಕನಾಥ್ ಶಿಂಧೆ ಸರ್ಕಾರಕ್ಕೆ ರಿಲೀಫ್; ಶಾಸಕರ ಅನರ್ಹತೆ ತೀರ್ಮಾನ ಮುಂದೂಡಲು ಸ್ಪೀಕರ್​ಗೆ ಸುಪ್ರೀಂಕೋರ್ಟ್​ ಸೂಚನೆ​
ಉದ್ಧವ್ ಠಾಕ್ರೆ- ಏಕನಾಥ್ ಶಿಂಧೆImage Credit source: News18
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 11, 2022 | 11:42 AM

ನವದೆಹಲಿ: ಮಹಾರಾಷ್ಟ್ರದ ಶಾಸಕರ ಅನರ್ಹತೆಯ ಬಗ್ಗೆ ಸುಪ್ರೀಂ ಕೋರ್ಟ್​ (Supreme Court) ತುರ್ತು ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಇತ್ಯರ್ಥವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ರಾಹುಲ್ ನಾರ್ವೇಕರ್​ ಅವರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಕುರಿತು ಉದ್ಧವ್ ಠಾಕ್ರೆ (Uddhav Thackeray) ಬಣ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಬಂಡಾಯ ಸೇನೆಯ ಶಾಸಕರನ್ನು ಸರ್ಕಾರವನ್ನು ರಚಿಸಲು ಆಹ್ವಾನಿಸುವ ಮಹಾರಾಷ್ಟ್ರದ ರಾಜ್ಯಪಾಲರ ನಿರ್ಧಾರವನ್ನು ಅರ್ಜಿಯಲ್ಲಿ ವಿರೋಧಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಯನ್ನು ನಾಳೆ ನಡೆಸಲು ಸಾಧ್ಯವಿಲ್ಲ. ಅದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 16 ಬಂಡಾಯ ಶಿವಸೇನೆ ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಮಹಾರಾಷ್ಟ್ರದ ಸ್ಪೀಕರ್‌ಗೆ ತಿಳಿಸುವಂತೆ ಸಾಲಿಸಿಟರ್ ಜನರಲ್‌ಗೆ ಆದೇಶಿಸಿದೆ. 16 ಬಂಡಾಯ ಶಿವಸೇನೆ ಶಾಸಕರ ವಿರುದ್ಧ ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳು, ಹೊಸದಾಗಿ ಚುನಾಯಿತ ಸ್ಪೀಕರ್‌ನಿಂದ ವಿಧಾನಸಭೆಯಲ್ಲಿ ಮುಖ್ಯ ಸಚೇತಕರ ನೇಮಕ, ವಿಶ್ವಾಸ ಮತ ವಿಚಾರಗಳ ಕುರಿತ ಅರ್ಜಿಗಳ ವಿಚಾರಣೆಯನ್ನು ಪೀಠ ನಡೆಸಿತು.

ಇದನ್ನೂ ಓದಿ: Eknath Shinde: ಫಡ್ನವಿಸ್​ ಜೊತೆ ಇಂದು ಸಿಎಂ ಏಕನಾಥ್ ಶಿಂಧೆ ದೆಹಲಿಗೆ ಭೇಟಿ; ಮಹಾರಾಷ್ಟ್ರ ಸಂಪುಟದ ಬಗ್ಗೆ ಚರ್ಚೆ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಮತ್ತು ಸಿಎಂ ಏಕನಾಥ್ ಶಿಂಧೆ ನಡುವೆ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದೆ. ಏಕನಾಥ್ ಶಿಂಧೆ ಬಣ ಮತ್ತು ಉದ್ಧವ್ ಠಾಕ್ರೆ ಬಣದ ವಿರುದ್ಧ ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳನ್ನು ಮುಂದೂಡುವಂತೆ ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮಹಾರಾಷ್ಟ್ರದಲ್ಲಿ ಹೊಸದಾಗಿ ಚುನಾಯಿತರಾದ ವಿಧಾನಸಭಾ ಸ್ಪೀಕರ್ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ರಾಹುಲ್ ನಾರ್ವೇಕರ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಶಿವಸೇನೆಯ ಇತರ ಭಿನ್ನಮತೀಯ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಕಾನೂನಿನಲ್ಲಿ ಅಧಿಕಾರ ಹೊಂದಿದ್ದಾರೆ ಎಂದು ಸುಪ್ರೀಂ ಕೋರ್ಟ್​ಗೆ ತಿಳಿಸಲಾಯಿತು. ಈಗ ಅನರ್ಹತೆಯ ಪ್ರಕ್ರಿಯೆಗಳನ್ನು ಸ್ಪೀಕರ್ ಕೈಗೊಳ್ಳುತ್ತಾರೆಯೇ ಹೊರತು ಉಪಸಭಾಪತಿಯಲ್ಲ ಎಂದು ವಿಧಾನಸಭೆಯ ಕಾರ್ಯದರ್ಶಿ ಹೇಳಿದ್ದರು.

ಇದನ್ನೂ ಓದಿ: ಇಂದು ದೇವೇಂದ್ರ ಫಡ್ನವಿಸ್- ಏಕನಾಥ್ ಶಿಂಧೆಯಿಂದ ಪ್ರಧಾನಿ ಮೋದಿ ಭೇಟಿ; ಅಂತಿಮವಾಗುತ್ತಾ ಸಚಿವರ ಪಟ್ಟಿ?

ಭಾನುವಾರ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿಎಂ ಏಕನಾಥ್ ಶಿಂಧೆ, ಕೆಲವರು ತಾವು ಆಳ್ವಿಕೆ ಮಾಡಲೆಂದೇ ಹುಟ್ಟಿದವರು ಎಂದು ಭಾವಿಸಿರುತ್ತಾರೆ. ನಾನು ಚಿನ್ನದ ಚಮಚದೊಂದಿಗೆ ಹುಟ್ಟಿದವನಲ್ಲ. ಸಾಮಾನ್ಯ ವ್ಯಕ್ತಿಯೊಬ್ಬರು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಕ್ಕೆ ಅವರಿಗೆ ಹೆಮ್ಮೆಯಾಗಬೇಕಿತ್ತು. ಆದರೆ, ನಮ್ಮ ವಿರುದ್ಧ ಹಗಲೂ ರಾತ್ರಿ ಅರ್ಜಿ ಸಲ್ಲಿಸುತ್ತಿದ್ದಾರೆ. ಆಡಳಿತ ನಡೆಸಲು ನಮಗೆ ಬಹುಮತವಿದೆ ಎಂಬುದು ನ್ಯಾಯಾಲಯಕ್ಕೂ ಗೊತ್ತಿದೆ. ನಾವು ಕಾನೂನುಬಾಹಿರವಾಗಿ ಏನನ್ನೂ ಮಾಡಿಲ್ಲ ಎಂದು ಹೇಳಿದ್ದರು.

Published On - 11:32 am, Mon, 11 July 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್