AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gali Janardhana Reddy: ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

Gali Janardhana Reddy: ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು
ಜನಾರ್ದನ ರೆಡ್ಡಿImage Credit source: Siasat.com
Follow us
ನಯನಾ ರಾಜೀವ್
|

Updated on:Jun 11, 2025 | 11:32 AM

ತೆಲಂಗಾಣ, ಜೂನ್ 11: ಗಂಗಾವತಿ ಬಿಜೆಪಿ ಶಾಸಕರಾಗಿದ್ದ ಗಾಲಿ ಜನಾರ್ದನ ರೆಡ್ಡಿ(Gali Janardhana Reddy)ಗೆ ತೆಲಂಗಾಣ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.

ಗಾಲಿ ಜನಾರ್ಧನ ರೆಡ್ಡಿಗೆ ಸಂಬಂಧಿಸಿದ ಅಕ್ರಮ ಗಣಿಗಾರಿಕೆ ಪ್ರಕರಣವು ಕರ್ನಾಟಕದ ರಾಜಕೀಯ ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿತ್ತು. ಒಬುಲಾಪುರಂ ಗಣಿಗಾರಿಕೆ ಕಂಪನಿ (OMC)ಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಯವರನ್ನು ಸಿಬಿಐ ಕೋರ್ಟ್ ಮೇ 6 ರಂದು ಸುದೀರ್ಘ ವರ್ಷಗಳ ತನಿಖೆಯ ನಂತರ ದೋಷಿಯೆಂದು ಘೋಷಿಸಿತ್ತು.

ಮತ್ತಷ್ಟು ಓದಿ:

2008-2011ರ ಅವಧಿಯಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ಬಳ್ಳಾರಿಯ ಒಬುಲಾಪುರಂ ಗಣಿಗಾರಿಕೆ ಕಂಪನಿಯ (OMC) ಮೂಲಕ ಕಾನೂನುಬಾಹಿರವಾಗಿ ಕಬ್ಬಿಣದ ಅದಿರು ಗಣಿಗಾರಿಕೆ ನಡೆಸಿದ ಆರೋಪ ರೆಡ್ಡಿಯವರ ಮೇಲಿತ್ತು. ಆ ಬಳಿಕ ಈ ಕೇಸ್ 2009-2010ರಲ್ಲಿ ಸಾರ್ವಜನಿಕವಾಗಿ ಬೆಳಕಿಗೆ ಬಂದಿತು, ಆಗ ರಾಜ್ಯದ ಲೋಕಾಯುಕ್ತ ಸಂಸ್ಥೆಯು ಗಣಿಗಾರಿಕೆ ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಯಲು ತನ್ನ ಬೇಟೆಯನ್ನು ಶುರು ಮಾಡಿತು.

ಒಎಂಸಿ ಕಂಪನಿಯು ಆಂಧ್ರಪ್ರದೇಶ ಮತ್ತು ಕರ್ನಾಟಕದ ಗಡಿಯಲ್ಲಿ ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಸಿದೆ. ಗಣಿಗಾರಿಕೆಗೆ ನಿಗದಿಯಾದ ಪರವಾನಗಿಯ ಗಡಿಯನ್ನು ಮೀರಿ, ನಿಷೇಧಿತ ಪ್ರದೇಶದಲ್ಲೂ ಅಕ್ರಮವಾಗಿ ಅದಿರು ಗಣಿಗಾರಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಅಕ್ರಮ ಗಣಿಗಾರಿಕೆಯಿಂದಾಗಿ, ಸ್ಥಳೀಯ ಪರಿಸರಕ್ಕೆ ಭಾರೀ ಹಾನಿಯಾಯಿತು, ಅರಣ್ಯ ಪ್ರದೇಶಗಳು ನಾಶವಾದವು ಮತ್ತು ಜಲಮೂಲಗಳು ಕಲುಷಿತಗೊಂಡಿದೆ ಎಂದು ಆರೋಪಿಸಲಾಗಿತ್ತು. ಕರ್ನಾಟಕ– ಆಂಧ್ರಪ್ರದೇಶ ಅಂತರರಾಜ್ಯ ಗಡಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಸರ್ಕಾರದ ಬೊಕ್ಕಸಕ್ಕೆ 884 ಕೋಟಿ ರೂ. ನಷ್ಟ ಉಂಟು ಮಾಡಿರುವ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ದೋಷಿಗಳೆಂದು ತೀರ್ಪು ನೀಡಿತ್ತು.

ಆರೋಪಿಗಳ ವಿರುದ್ಧ ಸಿಬಿಐ 2009ರ ಡಿಸೆಂಬರ್‌ 8ರಂದು ಪ್ರಕರಣ ದಾಖಲಿಸಿತ್ತು. ಮೊದಲ ಆರೋಪಪಟ್ಟಿಯನ್ನು 2011ರ ಡಿಸೆಂಬರ್‌ 3ರಂದು ಸಲ್ಲಿಸಿತ್ತು. ನಂತರ ಗಣಿ ಕಂಪನಿಯ ನಿರ್ದೇಶಕರೂ ಆಗಿರುವ ರೆಡ್ಡಿ, ಶ್ರೀನಿವಾಸ್ ರೆಡ್ಡಿ, ರಾಜಗೋಪಾಲ್, ದಿವಂಗತ ಆರ್. ಲಿಂಗಾ ರೆಡ್ಡಿ ಮತ್ತು ಒಎಂಸಿ ವಿರುದ್ಧದ ಪ್ರಕರಣದಲ್ಲಿ ಮೂರು ಪೂರಕ ಆರೋಪಪಟ್ಟಿಗಳನ್ನು ಸಲ್ಲಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Wed, 11 June 25

ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ