AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯ ಬಣಕ್ಕೆ ಶಾಕ್; ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲ ಘೋಷಣೆ

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಕ್ಷೇತ್ರ ಪುನರ್ ವಿಂಗಡಣೆ ವಿಧೇಯಕವನ್ನು ಮಂಡಿಸಲು ಸಜ್ಜಾಗಿರುವ ಬೆನ್ನಲ್ಲೇ, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಈ ವಿಧೇಯಕಕ್ಕೆ ಬೆಂಬಲ ನೀಡಲು ನಿರ್ಧರಿಸಿದೆ ಎಂದು ಪಕ್ಷದ ಶಾಸಕ ಮತ್ತು ರಾಷ್ಟ್ರೀಯ ವಕ್ತಾರ ಜಿತೇಂದ್ರ ಅವ್ಹಾದ್ ಇಂದು ಘೋಷಿಸಿದ್ದಾರೆ. "ನನಗೆ ಮತ್ತು ಪಕ್ಷದ ಪ್ರತಿಯೊಬ್ಬರಿಗೂ ಶರದ್ ಪವಾರ್ ಅವರ ನಿರ್ಧಾರವೇ ಅಂತಿಮ. ಕ್ಷೇತ್ರ ಪುನರ್ವಿಂಗಡಣೆ ಎಂಬುದು ಸಾಂವಿಧಾನಿಕ ಪ್ರಕ್ರಿಯೆಯಾಗಿದ್ದು, ಇಂದಲ್ಲ ನಾಳೆ ಅದು ನಡೆಯಲೇಬೇಕು ಎಂದು ಶರದ್ ಪವಾರ್ ಹೇಳಿದ್ದಾರೆ. ಹೀಗಾಗಿ ವಿಧೇಯಕವನ್ನು ಬೆಂಬಲಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.

ಇಂಡಿಯ ಬಣಕ್ಕೆ ಶಾಕ್; ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬೆಂಬಲ ಘೋಷಣೆ
ಶರದ್ ಪವಾರ್ ಮತ್ತು ಪ್ರಧಾನಿ ನರೇಂದ್ರ ಮೋದಿImage Credit source: PTI
ಸುಷ್ಮಾ ಚಕ್ರೆ
|

Updated on: Nov 27, 2026 | 8:16 PM

Share

ಮುಂಬೈ, ನವೆಂಬರ್ 27: ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಆರಂಭದಿಂದಲೂ ಭಾರೀ ವಿರೋಧ ವ್ಯಕ್ತಪಡಿಸುತ್ತಿರುವ ಇಂಡಿಯ ಮೈತ್ರಿಕೂಟಕ್ಕೆ ದೊಡ್ಡ ಆಘಾತ ಎದುರಾಗಿದೆ. ನವೆಂಬರ್ 30ರಿಂದ ಲೋಕಸಭಾ ವಿಶೇಷ ಅಧಿವೇಶನ ಶುರುವಾಗಲಿದ್ದು, ಈ ಅಧಿವೇಶನದಲ್ಲಿ ಮತ್ತೆ ಕ್ಷೇತ್ರ ಪುನರ್ ವಿಂಗಡಣೆಯ ಬಗ್ಗೆ ಚರ್ಚೆ ನಡೆಸುವ ಬಗ್ಗೆ ಎನ್​ಡಿಎ ನಿರ್ಧರಿಸಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಇಂಡಿಯ ಬಣದ ಮಿತ್ರಪಕ್ಷವಾದ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್​ಸಿಪಿ) ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ತನ್ನ ಬೆಂಬಲ ಘೋಷಿಸಲು ನಿರ್ಧರಿಸಿದೆ. ಇದು ಇಂಡಿಯ ಬಣಕ್ಕೆ ದೊಡ್ಡ ಹೊಡೆತ ನೀಡಿದೆ.

ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಪಕ್ಷದ ನಾಯಕ ಜಿತೇಂದ್ರ ಅವ್ಹಾದ್ ಇಂದು ಮುಂಬೈನಲ್ಲಿ ಶರದ್ ಪವಾರ್ ಅವರನ್ನು ಭೇಟಿಯಾದ ಬಳಿಕ ತಿಳಿಸಿದ್ದಾರೆ. ನವೆಂಬರ್ 30ರಿಂದ ಡಿಸೆಂಬರ್ 3ರವರೆಗೆ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಸರ್ಕಾರವು ಉದ್ದೇಶಿತ ವಿಧೇಯಕವನ್ನು ಕೈಗೆತ್ತಿಕೊಳ್ಳುವ ನಿರೀಕ್ಷೆಯಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.

ಇದನ್ನೂ ಓದಿ: ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕಾಂಗ್ರೆಸ್ ವಿರೋಧ: 3 ಪ್ರಮುಖ ಬೇಡಿಕೆ ಮುಂದಿಟ್ಟ ಪ್ರತಿಪಕ್ಷ

ಶರದ್ ಪವಾರ್ ದಾಖಲಾಗಿರುವ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿತೇಂದ್ರ ಅವ್ಹಾದ್, ಎನ್​ಸಿಪಿ ಮುಖ್ಯಸ್ಥರೊಂದಿಗಿನ ಚರ್ಚೆಯು ನಿರ್ದಿಷ್ಟವಾಗಿ ಪಕ್ಷದ ಅಧಿಕೃತ ನಿಲುವಿನ ಬಗ್ಗೆ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕ್ಷೇತ್ರ ಪುನರ್​ ವಿಂಗಡಣೆಯು ಸಾಂವಿಧಾನಿಕ ಅಗತ್ಯವಾಗಿದೆ ಮತ್ತು ಪಕ್ಷವು ಈ ಪ್ರಕ್ರಿಯೆಯನ್ನು ಬೆಂಬಲಿಸುತ್ತದೆ ಎಂಬುದು ಒಟ್ಟಾರೆ ಅಭಿಪ್ರಾಯವಾಗಿತ್ತು ಎಂದು ಅವರು ಹೇಳಿದ್ದಾರೆ.

ಶರದ್ ಪವಾರ್ ಅವರೊಂದಿಗಿನ ಚರ್ಚೆಯನ್ನು ವಿವರಿಸಿದ ಅವ್ಹಾದ್, “ಈ ಚರ್ಚೆಯು ನಮ್ಮ ಪಕ್ಷದ ಅಧಿಕೃತ ನಿಲುವಿನ ಬಗ್ಗೆ ಇರಲಿಲ್ಲ. ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯು ಸಾಂವಿಧಾನಿಕ ಅಗತ್ಯವಾಗಿದೆ ಎಂಬ ಸಾಮಾನ್ಯ ಅಂಶವನ್ನು ಪ್ರಸ್ತಾಪಿಸಲಾಯಿತು. ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನು ಬೆಂಬಲಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ನಾವು ಖಂಡಿತವಾಗಿಯೂ ಅದನ್ನು ಬೆಂಬಲಿಸುತ್ತೇವೆ. ನಾವು ಕ್ಷೇತ್ರ ಪುನರ್ ವಿಂಗಡಣೆಯನ್ನು ಬೆಂಬಲಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ತಮಿಳುನಾಡಿನ ಪಾಲಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ; ಸ್ಟಾಲಿನ್ ಖಡಕ್ ಸಂದೇಶ

ಈ ವಿಧೇಯಕಕ್ಕೆ ಪಕ್ಷದ ಬೆಂಬಲ ನೀಡಲು ಎನ್‌ಸಿಪಿ-ಎಸ್‌ಪಿ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಈ ಹಿಂದೆ 3 ಷರತ್ತುಗಳನ್ನು ವಿಧಿಸಿದ್ದರು.

  1. ಮಹಿಳಾ ಮೀಸಲಾತಿಯ ಜಾರಿ.
  2. ಎಲ್ಲಾ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳ ಏಕರೂಪದ ಶೇ. 50ರಷ್ಟು ಹೆಚ್ಚಳ.
  3. ಕ್ಷೇತ್ರಗಳ ಗಡಿಗಳನ್ನು ಪುನರ್‌ನಿರ್ಧರಿಸುವ ಕ್ಷೇತ್ರ ಪುನರ್ ವಿಂಗಡಣೆ ಆಯೋಗದಲ್ಲಿ ವಿರೋಧ ಪಕ್ಷಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡುವುದು.

ದೇಶಾದ್ಯಂತ ಲೋಕಸಭಾ ಸ್ಥಾನಗಳನ್ನು ಶೇ. 50ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಸತ್ತಿನ ವಿಸ್ತರಣೆ ಮತ್ತು ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಇಂಡಿಯ ಬಣದ ಪಕ್ಷಗಳು ಈ ಕ್ರಮವನ್ನು ವಿರೋಧಿಸಿವೆ.

ಹಾಗೇ, ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಕಾರ್ಯತಂತ್ರದ ಕುರಿತು ಚರ್ಚಿಸಲು ಶನಿವಾರ ನಿಗದಿಯಾಗಿರುವ ಇಂಡಿಯ ಬಣದ ಸಭೆಯಲ್ಲಿ ಪಕ್ಷವು ಭಾಗವಹಿಸಲಿದೆ ಎಂದು ಅವ್ಹಾದ್ ಖಚಿತಪಡಿಸಿದ್ದಾರೆ. ತಮ್ಮ ತಂದೆ ಶರದ್ ಪವಾರ್ ಅವರ ಅನಾರೋಗ್ಯದ ಕಾರಣ ತಾವು ಸಭೆಗೆ ಗೈರಾಗುವುದಾಗಿ, ಆದರೆ ಪಕ್ಷವು ತನ್ನ ಸಂಸದರನ್ನು ಕಳುಹಿಸಲಿದೆ ಎಂದು ಸುಳೆ ಈ ಹಿಂದೆ ತಿಳಿಸಿದ್ದರು. ನವೆಂಬರ್ 30ರಿಂದ ಸದನದಲ್ಲಿ ಹಾಜರಿರುವಂತೆ ಸೂಚಿಸಿ ಎನ್‌ಸಿಪಿ-ಎಸ್‌ಪಿ ತನ್ನ 8 ಲೋಕಸಭಾ ಸಂಸದರಿಗೆ ವಿಪ್ ಜಾರಿ ಮಾಡಿದೆ. ಎನ್​ಸಿಪಿ ರಾಜ್ಯಸಭೆಯಲ್ಲಿ ಒಬ್ಬರು ಸದಸ್ಯರನ್ನು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಮೋದಿ, ಹೆಚ್​ಡಿಕೆ ಫೋಟೋಗೆ ಟೇಪ್‌ ಕೇಸ್: ಮಿಮ್ಸ್ ನಿರ್ದೇಶಕರಿಗೆ ನೋಟಿಸ್
ಮೋದಿ, ಹೆಚ್​ಡಿಕೆ ಫೋಟೋಗೆ ಟೇಪ್‌ ಕೇಸ್: ಮಿಮ್ಸ್ ನಿರ್ದೇಶಕರಿಗೆ ನೋಟಿಸ್
ಒಳಚರಂಡಿ ಕಾಮಗಾರಿ ವೇಳೆ ಪೈಪ್‌ಲೈನ್ ಎಡವಟ್ಟು
ಒಳಚರಂಡಿ ಕಾಮಗಾರಿ ವೇಳೆ ಪೈಪ್‌ಲೈನ್ ಎಡವಟ್ಟು
ವಿಧಾನಸಭೆ ಚುನಾವಣೆ 2029ಕ್ಕೆ, 2028ರಲ್ಲಿ ನಡೆಯಲ್ಲ: ಶಾಸಕ ಶಾಕಿಂಗ್ ಮಾತು
ವಿಧಾನಸಭೆ ಚುನಾವಣೆ 2029ಕ್ಕೆ, 2028ರಲ್ಲಿ ನಡೆಯಲ್ಲ: ಶಾಸಕ ಶಾಕಿಂಗ್ ಮಾತು
ಸಿಎಂ ಮುಂದೆ ಬಂದೂಕಿಗೆ ಬೇಡಿಕೆ ಇಟ್ಟ ಕುರಿಗಾಹಿ
ಸಿಎಂ ಮುಂದೆ ಬಂದೂಕಿಗೆ ಬೇಡಿಕೆ ಇಟ್ಟ ಕುರಿಗಾಹಿ
‘ಮಿಸ್ಟರ್ ಜ್ಯಾಕ್’ ಚಿತ್ರದ ಮೂಲಕ ಬರಲು ರೆಡಿ ಆದ ತಪಸ್ವಿನಿ
‘ಮಿಸ್ಟರ್ ಜ್ಯಾಕ್’ ಚಿತ್ರದ ಮೂಲಕ ಬರಲು ರೆಡಿ ಆದ ತಪಸ್ವಿನಿ
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ