AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್‌ಟಿ ಸುಧಾರಣೆ: ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್​ ಕೊಡ್ತೇವೆ ಎಂದ ಪ್ರಧಾನಿ ಮೋದಿ

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆಯನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು.ಈ ವರ್ಷ ಜಿಎಸ್​ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿದರು. ಭಾರತೀಯರಿಗೆ ದೊಡ್ಡ ಗಿಫ್ಟ್​ ನೀಡುವುದಾಗಿ ತಿಳಿಸಿದ್ದಾರೆ. ತೆರಿಗೆ ಸ್ಲ್ಯಾಬ್​​ಗಳನ್ನು ತರ್ಕಬದ್ಧಗೊಳಿಸುವುದು ಮತ್ತು ಅಗತ್ಯ ಮತ್ತು ದಿನನಿತ್ಯದ ವಸ್ತುಗಳ ಮೇಲಿನ ಜಿಎಸ್‌ಟಿ ದರಗಳನ್ನು ಕಡಿಮೆ ಮಾಡುವುದರ ಮೇಲೆ ಕೇಂದ್ರೀಕರಿಸಲಾಗುತ್ತದೆ.

ಜಿಎಸ್‌ಟಿ ಸುಧಾರಣೆ: ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್​ ಕೊಡ್ತೇವೆ ಎಂದ ಪ್ರಧಾನಿ ಮೋದಿ
ನರೇಂದ್ರ ಮೋದಿ Image Credit source: PTI
ನಯನಾ ರಾಜೀವ್
|

Updated on:Aug 15, 2025 | 11:31 AM

Share

ನವದೆಹಲಿ, ಆಗಸ್ಟ್​ 15: ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆಯನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು.ಈ ವರ್ಷ ಜಿಎಸ್​ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿದರು. ಭಾರತೀಯರಿಗೆ ದೊಡ್ಡ ಗಿಫ್ಟ್​ ನೀಡುವುದಾಗಿ ತಿಳಿಸಿದ್ದಾರೆ.

ತೆರಿಗೆ ಸ್ಲ್ಯಾಬ್​​ಗಳನ್ನು ತರ್ಕಬದ್ಧಗೊಳಿಸುವುದು ಮತ್ತು ಅಗತ್ಯ ಮತ್ತು ದಿನನಿತ್ಯದ ವಸ್ತುಗಳ ಮೇಲಿನ ಜಿಎಸ್‌ಟಿ ದರಗಳನ್ನು ಕಡಿಮೆ ಮಾಡುವುದರ ಮೇಲೆ ಕೇಂದ್ರೀಕರಿಸಲಾಗುತ್ತದೆ. ಈ ದೀಪಾವಳಿಯ ಹೊತ್ತಿಗೆ, ನೀವು ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಹೊಸ, ಸರಳೀಕೃತ ಜಿಎಸ್ಟಿ ರಚನೆಯನ್ನು ನೀವು ಕಾಣುತ್ತೀರಿ ಈ ಬದಲಾವಣೆಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದರು.

ಕಳೆದ ಎಂಟು ವರ್ಷಗಳಲ್ಲಿ ನಾವು ಜಿಎಸ್ಟಿ ಮೂಲಕ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಿದ್ದೇವೆ. ಎಂಟು ವರ್ಷಗಳ ನಂತರ, ನಾವು ಅದನ್ನು ಪರಿಶೀಲಿಸುವುದು ಈ ಸಮಯದ ಅಗತ್ಯವಾಗಿದೆ. ನಾವು ಅದನ್ನು ಪರಿಶೀಲಿಸಿದ್ದೇವೆ. ರಾಜ್ಯಗಳೊಂದಿಗೆ ಮಾತನಾಡಿದ್ದೇವೆ. ನಮ್ಮ ಕೈಗಾರಿಕೆಗಳು ದೊಡ್ಡ ಲಾಭವನ್ನು ಪಡೆಯುತ್ತವೆ. ದೈನಂದಿನ ವಸ್ತುಗಳು ಅಗ್ಗವಾಗುತ್ತವೆ, ಇದು ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡುತ್ತದೆ ಎಂದು ಹೇಳಿದರು.

ಮತ್ತಷ್ಟು ಓದಿ: Independence Day: ಭಾರತದ ನೀರು ಭಾರತೀಯರಿಗೆ ಮಾತ್ರ, ಶತ್ರುಗಳಿಗಲ್ಲ: ಪ್ರಧಾನಿ ಮೋದಿ

ನಾವು ಸ್ವದೇಶಿ ಉತ್ಪನ್ನಗಳನ್ನು ಬಲವಂತದಿಂದ ಅಲ್ಲ ಬದಲಾಗಿ ತಾಕತ್ತಾಗಿ ಬಳಸಬೇಕು. ವೂಕಲ್ ಫಾರ್ ಲೋಕಲ್​​ ಅನ್ನು ಎಲ್ಲಾ ಭಾರತೀಯರ ಮಂತ್ರವಾಗಿ ಮಾಡಬೇಕು.ಭಾರತದ ಜನರ ಬೆವರಿನಿಂದ ತಯಾರಿಸಿದ ಮತ್ತು ನಮ್ಮ ಜನರ ಕಠಿಣ ಪರಿಶ್ರಮದ ತಯಾರಿಸಿದ ವಸ್ತುಗಳನ್ನು ಮಾತ್ರ ನಾವು ಖರೀದಿಸಬೇಕು.ಆಗ ದೇಶವು ಕೆಲವೇ ದಿನಗಳಲ್ಲಿ ಬದಲಾಗುತ್ತದೆ.ದೇಶದ ಯುವಕರಿಗೆ ತಮ್ಮ ಆಲೋಚನೆಗಳನ್ನು ಎಂದಿಗೂ ಸಾಯಲು ಬಿಡಬೇಡಿ.ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ.

ಸೈಬರ್ ಭದ್ರತೆಯಿಂದ ಹಿಡಿದು ಕೃತಕ ಬುದ್ಧಿಮತ್ತೆಯವರೆಗೆ ಎಲ್ಲವೂ ನಮ್ಮದಾಗಿರುವುದು ಇಂದಿನ ಅಗತ್ಯವಲ್ಲವೇ? ನಮ್ಮ ಜನರ ಶಕ್ತಿ ಇದರಲ್ಲಿ ಭಾಗಿಯಾಗಬೇಕು. ಇಂದು, ಅದು ಸಾಮಾಜಿಕ ಮಾಧ್ಯಮವಾಗಲಿ ಅಥವಾ ವಿಶ್ವದ ಇತರ ವೇದಿಕೆಗಳಾಗಲಿ, ನಾವು ವಿಶ್ವದ ವೇದಿಕೆಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಯುಪಿಐನ ಶಕ್ತಿಯನ್ನು ಜಗತ್ತಿಗೆ ತೋರಿಸಿದ್ದೇವೆ. ಡಿಜಿಟಲ್ ವಹಿವಾಟಿನಲ್ಲಿ ಭಾರತ ಮಾತ್ರ ಶೇಕಡಾ 50 ರಷ್ಟು ಕೊಡುಗೆ ನೀಡುತ್ತಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:49 am, Fri, 15 August 25